Categories: Latest

ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ಸರ್ವರ್ ಸಮಸ್ಯೆ: ಜಾತಿ–ಆದಾಯ ಪ್ರಮಾಣ ಪತ್ರಕ್ಕೆ ಸಾರ್ವಜನಿಕರ ಪರದಾಟ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿರುವ ನಾಡಕಚೇರಿಯಲ್ಲಿ ಕಳೆದ ಎರಡು ವಾರಗಳಿಂದ ಸರ್ವರ್ ಸಮಸ್ಯೆ ಮುಂದುವರಿದಿದ್ದು, ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಾತಿ, ಆದಾಯ, ನಿವಾಸಿ, ಉತ್ತರಾಧಿಕಾರ ಸೇರಿದಂತೆ ವಿವಿಧ ಪ್ರಮಾಣ ಪತ್ರಗಳಿಗಾಗಿ ಅರ್ಜಿ ಸಲ್ಲಿಸಲು ಆಗಮಿಸುವ ವಿದ್ಯಾರ್ಥಿಗಳು, ಪೋಷಕರು, ವೃದ್ಧರು ಹಾಗೂ ಇತರೆ ನಾಗರಿಕರು ಪ್ರತಿದಿನ ಕಚೇರಿಗೆ ಅಲೆದಾಡುವಂತಾಗಿದೆ.

ನಾಡಕಚೇರಿಯ ವೆಬ್‌ಸೈಟ್ ಮತ್ತು ಸರ್ವರ್ ಕಾರ್ಯನಿರ್ವಹಿಸದ ಕಾರಣ ಆನ್‌ಲೈನ್ ಮೂಲಕ ಯಾವುದೇ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲ. ಪರಿಣಾಮ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಹಾಗೂ ಶಾಲೆ-ಕಾಲೇಜುಗಳ ಪ್ರವೇಶಕ್ಕೆ ಅಗತ್ಯವಾಗಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಪಡೆಯುವುದು ಸಾರ್ವಜನಿಕರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಶಾಲಾ-ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭವಾಗಿರುವ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಇದಕ್ಕೆ ಜೊತೆಯಾಗಿ ಆಗಾಗ್ಗೆ ಉಂಟಾಗುತ್ತಿರುವ ವಿದ್ಯುತ್ ವ್ಯತ್ಯಯವೂ ಸಮಸ್ಯೆಯನ್ನು ಮತ್ತಷ್ಟು ಗಂಭೀರಗೊಳಿಸಿದೆ. ಗಂಟೆಗಟ್ಟಲೆ ಸರದಿಯಲ್ಲಿ ನಿಂತರೂ ಕೆಲಸವಾಗದೆ ಸಾರ್ವಜನಿಕರು ನಿರಾಶರಾಗಿ ಹಿಂದಿರುಗುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿದಿನ ನೂರಾರು ಮಂದಿ ಪ್ರಮಾಣ ಪತ್ರಗಳಿಗಾಗಿ ಕಚೇರಿಗೆ ಆಗಮಿಸುತ್ತಿದ್ದರೂ, ತಾಂತ್ರಿಕ ದೋಷದಿಂದಾಗಿ ಸೇವೆಗಳು ಸ್ಥಗಿತಗೊಂಡಿವೆ. ಇದರಿಂದ ಅಧಿಕಾರಿಗಳ ನಿರ್ಲಕ್ಷ್ಯವೇ ಈ ಸಮಸ್ಯೆಗೆ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸರ್ಕಾರದ ಸೇವೆಗಳು ಜನರ ಮನೆಬಾಗಿಲಿಗೆ ತಲುಪಬೇಕು ಎಂಬ ಉದ್ದೇಶವಿದ್ದರೂ, ಮೂಲಭೂತ ತಾಂತ್ರಿಕ ವ್ಯವಸ್ಥೆಯ ವೈಫಲ್ಯದಿಂದ ಜನರು ಕಚೇರಿಗಳಿಗೆ ಅಲೆದಾಡಬೇಕಾದ ಸ್ಥಿತಿ ನಿರ್ಮಾಣವಾಗಿರುವುದು ವಿಪರ್ಯಾಸವಾಗಿದೆ.

ಸಂಬಂಧಪಟ್ಟ ಜಿಲ್ಲಾಡಳಿತ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣವೇ ಮಧ್ಯಪ್ರವೇಶಿಸಿ ನಾಡಕಚೇರಿಯ ಸರ್ವರ್ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಿ, ಜಾತಿ, ಆದಾಯ, ನಿವಾಸಿ ಹಾಗೂ ಇತರೆ ಪ್ರಮಾಣ ಪತ್ರಗಳು ಸಾರ್ವಜನಿಕರಿಗೆ ಯಾವುದೇ ವಿಳಂಬವಿಲ್ಲದೆ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಶಿವರಾಜ್ ಪಿ.ಆರ್.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

6 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

6 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

4 days ago