Latest

ಡಕಾಯಿತೆಗೆ ಪ್ಲಾನ್ ಹಾಕುತ್ತಿದ್ದ ಮೂವರು ಸಹಿತ ಏಳು ಮಂದಿ ಬಂಧನ

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನಲ್ಲಿ ಡಕಾಯಿತೆಗೆ ಪೂರೈಕೆಯಾಗಿ ಹೊಂಚು ಹಾಕುತ್ತಿದ್ದ ಏಳು ಮಂದಿಯನ್ನು ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಜುಲೈ 19ರ ರಾತ್ರಿ ಬಂಧಿಸಿದ್ದಾರೆ.

ತಾಲ್ಲೂಕಿನ ಚಿಕ್ಕಕುರುಗೋಡು ಗ್ರಾಮದ ರಾಜಲಕ್ಷ್ಮೀ ದೇವಸ್ಥಾನಕ್ಕೆ ಹೋಗುವ ಆರ್ಚ್ ಬಳಿ ರಾತ್ರಿ ವೇಳೆಯಲ್ಲಿ ವಾಹನಗಳು ಹಾಗೂ ಜನರು ಕಡಿಮೆ ಓಡಾಡುವ ಸಮಯದಲ್ಲಿ ಮಾರಕ ಆಯುಧಗಳನ್ನು ಹಿಡಿದು ದಾರಿಹಿಡಿದವರನ್ನು ಬೆದರಿಸಿ ದರೋಡೆ ಮಾಡಲು ಸಂಚು ರೂಪಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿತರನ್ನು ಸಂದೀಪ್ (26), ಉಮೇಶ್ (24), ಕುಮಾರ (28), ಗಣೇಶ್ ಸಿ.ಎನ್ (24), ರಂಜಿತ್ ಕುಮಾರ್ (30), ಗೋಪಿನಾಥ್ ಮತ್ತು ಸಿ.ಎನ್ ಸುರೇಶ್ (22) ಎಂದು ಗುರುತಿಸಲಾಗಿದೆ. ಬಂಧಿತ ಎಲ್ಲರೂ ಚಿಕ್ಕಕುರುಗೋಡು ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ. ಪೊಲೀಸರು ಸರಿಯಾದ ಸಮಯದಲ್ಲಿ ದಾಳಿ ನಡೆಸಿದ್ದರಿಂದ ಸಾಧ್ಯವಿದ್ದ ಅಪರಾಧ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ವರದಿ: ಅವಿನಾಶ್

nazeer ahamad

Recent Posts

ರೀಲ್ಸ್ ಹುಚ್ಚಾಟದ ದುರಂತ: ಹುಬ್ಬಳ್ಳಿಯಲ್ಲಿ ಬಾಲಕ ಸಾವು – ಇಬ್ಬರ ಬಂಧನ

ಹುಬ್ಬಳ್ಳಿಯಲ್ಲಿ ರೀಲ್ಸ್ ಮಾಡುವ ಹುಚ್ಚಾಟದಿಂದ ಸಂಭವಿಸಿದ ಭೀಕರ ಅಪಘಾತದಲ್ಲಿ 15 ವರ್ಷದ ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು…

1 hour ago

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

14 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

16 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago