ಕುಂದಗೋಳ ತಾಲೂಕಿನ ಚಿಕ್ಕನರ್ತಿ ಗ್ರಾಮದಲ್ಲಿ ಮೂಲ ಸೌಲಭ್ಯ ಇಲ್ಲವಾಗಿದ್ದು ಗ್ರಾಮ ಪಂಚಾಯಿತಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಚರಂಡಿ ವ್ಯವಸ್ಥೆ ಸರಿಯಾಗಿಲ್ಲ, ಇದರಿಂದಾಗಿ ಮಲಿನ ನೀರು ರಸ್ತೆ ಮೇಲೆ ನಿಲ್ಲುತ್ತಿದ್ದು ದುರ್ವಾಸನೆ ಹರಡಿದೆ. ಗ್ರಾಮದ ಕೆರೆಯಲ್ಲಿ ಹೂಳು ತುಂಬಿಕೊಂಡು ಹೋಗಿದ್ದು ಕೆರೆಯ ಅಭಿವೃದ್ಧಿ ಕಾರ್ಯ ನಡೆಯಬೇಕಿದೆ.
ಕೆರೆಯ ನೀರು ಹಸಿರು ಬಣಕ್ಕೆ ತಿರುಗಿದೆ. ಕಸಗಂಟೆಗಳಿಂದ ಆವೃತವಾಗಿದೆ. ಕೆರೆಗೆ ನೀರು ಬರಲು ಕಾಲುವೆಗೆ ಹೊಂದಿಕೊಂಡಿರುವ ಇನಲೈಟ್ ಕಾಮಗಾರಿ ಪ್ರಾರಂಭವಾಗಬೇಕಾಗಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹತ್ತಿರ ಇರುವ ಶುದ್ದ ಕುಡಿಯುವ ನೀರಿನ ಘಟಕ ನಿರ್ವಾಹಣೆ ಕೊರತೆಯಿಂದ ಸ್ಥಗತಿಗೊಂಡಿದೆ. ಜನರು ಶುದ್ದ ನೀರಿಗಾಗಿ ಪಟ್ಟಣಕ್ಕೆ ತೆರಳಬೇಕಾಗಿದೆ. ಸರಕಾರಿ ಪ್ರಾಥಮಿಕ ಶಾಲೆಗೆ ತೆರಳಬೇಕಾದ ಸಿಸಿ ರಸ್ತೆ ಬಿರುಕು ಬಿಟ್ಟು ಕಳಚಿಕೊಂಡಿದೆ ಹದಗೆಟ್ಟಿರುವ ಸಿಸಿ ರಸ್ತೆಯಲ್ಲಿ ಶಾಲಾ ವಿದ್ಯಾರ್ಥಿಗಳು ಎಡವಿ ನೆಲಕ್ಕೆ ಬಿಳ್ಳುವ ಹಂತಕ್ಕೆ ನಿಂತಿದೆ. ಅಷ್ಟರಮಟ್ಟಿಗೆ ಈ ರಸ್ತೆ ಇದೆ. ಕೂಡಲೇ ರಸ್ತೆ ಸುಧಾರಣೆಗೆ ಕ್ರಮ ಕೈಗೊಳ್ಳಬೇಕಾಗಿದೆ.
ಗ್ರಾಮ ಪಂಚಾಯತಿಯವರು ಮೂಲ ಸೌಲಭ್ಯಗಳಿಗೆ ಒತ್ತು ನೀಡಬೇಕು ಎಂಬವುದು ಮರೆತು ಬಿಟ್ಟಿದ್ದಾರೆ. ಸಾರ್ವಜನಿಕರಿಗೆ ಉಪಯೋಗವಾಗಬೇಕಾದ ಶುದ್ದ ಕುಡಿಯುವ ನೀರಿನ ಘಟಕ, ರಸ್ತೆ,ಚರಂಡಿ,ಇದ್ಯಾವುದೂ ಮಾಡದೆ ಗ್ರಾಮವನ್ನು ಗಬ್ಬು ನಾರುವು ಹಾಗೆ ಮಾಡಿದ್ದಾರೆ. ಕೂಡಲೇ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಗಳು ಬೇಟೆ ನೀಡಿ ಪರಿಶೀಲಿಸಿ ಮೂಲಭೂತ ಸೌಲಭ್ಯ ಕಲ್ಪಿಸಿಬೇಕಾಗಿದೆ. ವರದಿ: ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…