Latest

ಮಂಗಳೂರಿನಲ್ಲಿ ಬ್ಯೂಟಿ ಪಾರ್ಲರ್ ಆವರಣದಲ್ಲಿ ಲೈಂಗಿಕ ದಂಧೆ ಬಯಲು

ಮಂಗಳೂರು: ಬ್ಯೂಟಿ ಪಾರ್ಲರ್‌ ಹೆಸರಿನಲ್ಲಿ ಲೈಂಗಿಕ ದಂಧೆ ನಡೆಯುತ್ತಿರುವ ಬೆಚ್ಚಿಬೀಳಿಸುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಹಂಪನಕಟ್ಟೆಯಲ್ಲಿರುವ ‘ವೈಬ್ಸ್ ಯೂನಿಸೆಕ್ಸ್ ಸಲೂನ್‌’ ಮಾಲಕಿ ತೃಪ್ತಿ ಭಂಡಾರಿ ಹಾಗೂ ಪತಿ ವಿಪಿನ್ ಭಂಡಾರಿ, ಮಹಿಳಾ ಸಿಬ್ಬಂದಿಯನ್ನು ಪುರುಷ ಗ್ರಾಹಕರಿಗೆ ಲೈಂಗಿಕ ಸೇವೆ ನೀಡಲು ಬಲವಂತಪಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಸಂತ್ರಸ್ತೆಯೊಬ್ಬರಿಂದ ಹೊರಬಿದ್ದಿದೆ.

ಮಾಧ್ಯಮದ ಮುಂದೆ ಕಣ್ಣೀರು ಹಾಕಿದ ಸಂತ್ರಸ್ತೆಯ ಪ್ರಕಾರ, ಪುರುಷ ಗ್ರಾಹಕರು ಬಂದಾಗ ಮಸಾಜ್ ನೀಡಬೇಕು ಎಂದು ಮಾಲಕರು ನಿರಂತರ ಒತ್ತಡ ಹಾಕುತ್ತಿದ್ದರು. ನಿರಾಕರಿಸಿದಾಗ ಬೆದರಿಕೆ ಹಾಕಿ ಕೆಲಸ ಮಾಡಲು ಬಲವಂತ ಮಾಡುತ್ತಿದ್ದರು. ಇತ್ತೀಚೆಗೆ, ಬ್ಯೂಟಿ ಪಾರ್ಲರ್‌ನೊಳಗಿನ ಏಕಾಂತ ಕೊಠಡಿಗೆ ಮಸಾಜ್‌ಗೆ ಹೋಗಿದ್ದಾಗ, ಒಬ್ಬ ಪುರುಷ ಗ್ರಾಹಕ ಲೈಂಗಿಕವಾಗಿ ಸಹಕರಿಸಲು ಒತ್ತಾಯಿಸಿದಂತೆ ತಿಳಿಸಿದರು. ತಾವು ವಿರೋಧ ವ್ಯಕ್ತಪಡಿಸಿದಾಗ, ಮಾಲಕಿ ತೃಪ್ತಿ ಭಂಡಾರಿ ಕೊಠಡಿಗೆ ನುಗ್ಗಿ, ಕಪಾಳಕ್ಕೆ ಬಾರಿಸಿ, ಬಲವಂತವಾಗಿ ಮೇಲುಡುಪು ಕಳಚಿ, ಅರೆನಗ್ನ ಫೋಟೋ ತೆಗೆದಿದ್ದಾರೆಂದು ಆರೋಪಿಸಿದ್ದಾರೆ.

ಈ ಚಿತ್ರವನ್ನು ಮಾಲಕಿ ತಮ್ಮ ಪತಿಗೆ ಕಳುಹಿಸಿದ್ದು, ಇದರಿಂದ ಪತಿ ವಿಚ್ಛೇದನ ಪ್ರಕ್ರಿಯೆ ಆರಂಭಿಸಿರುವುದಾಗಿ ಸಂತ್ರಸ್ತೆ ಕಹಿ ಅನುಭವ ಹಂಚಿಕೊಂಡಿದ್ದಾರೆ.

ಸಂತ್ರಸ್ತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿಗೆ ವಿಷಯ ತಿಳಿಸಿದ್ದು, ಅವರ ಸಲಹೆಯಂತೆ ಅಧಿಕೃತ ದೂರು ದಾಖಲಾಗಿದೆ. ಬಳಿಕ ಮಹಿಳಾ ಪೊಲೀಸರು ಹಾಗೂ ಬೆರಳಚ್ಚು ತಜ್ಞರು ಸಂಜೆ ಸಲೂನ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಗಂಭೀರ ತನಿಖೆ ನಡೆಸಿ, ಸಲೂನ್‌ಗೆ ಬೀಗ ಹಾಕುವ ಸಾಧ್ಯತೆ ಇದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392

nazeer ahamad

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago