Latest

ಕಲ್ಕೆರೆ ಕೆರೆಗೆ ಸಮೀಪ ಬಾಂಗ್ಲಾ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆ: ಆರೋಪಿ ಬಂಧನ

ಬೆಂಗಳೂರು: ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಡೆದಿರುವ ಅಮಾನವೀಯ ಘಟನೆಗೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಗಲಕೋಟೆ ಮೂಲದ 28 ವರ್ಷದ ಮುದುಕಪ್ಪನನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ವಿವರ:
ಜನವರಿ 24ರಂದು ಕಲ್ಕೆರೆ ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ 28 ವರ್ಷದ ಮಹಿಳೆಯ ಶವ ಪತ್ತೆಯಾದ ಘಟನೆ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿತ್ತು. ಮೃತ ನಜ್ಮಾ ಎಂಬಾಕೆ ಬಾಂಗ್ಲಾದೇಶ ಮೂಲದವರಾಗಿದ್ದು, ಮನೆಗೆಲಸ ಮಾಡುತ್ತಾ ಬದುಕು ನಡೆಸುತ್ತಿದ್ದರು. ಶವ ಪರೀಕ್ಷೆಯಲ್ಲಿ ಲೈಂಗಿಕ ದೌರ್ಜನ್ಯ ನಡೆಸಿ ಬಳಿಕ ಕೊಲೆ ಮಾಡಿರುವುದು ದೃಢಪಟ್ಟಿದೆ.

ಅರೋಪಿಯ ಬಂಧನ ಹೇಗೆ ಸಾಧ್ಯವಾಯಿತು?
ಬೆಂಗಳೂರಿನಲ್ಲಿ ವಾಟರ್ ಟ್ಯಾಂಕರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಮುದುಕಪ್ಪ, ನಜ್ಮಾ ವಾಸವಿದ್ದ ಶೆಡ್ ಹಾಗೂ ಆಕೆ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ ನೀರು ಪೂರೈಸಲು ಹೋಗುತ್ತಿದ್ದ. ಈ ವೇಳೆ ಇಬ್ಬರ ನಡುವೆ ಸಂಭಾಷಣೆ ನಡೆಯುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ.

ಜನವರಿ 23ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ನಜ್ಮಾವನ್ನು ಮುದುಕಪ್ಪ ಹಿಂಬಾಲಿಸಿ, ಆಕೆಯನ್ನು ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದ. ಅಲ್ಲಿಂದಾಗಿ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದಾಗ, ಆಕೆ ಪ್ರತಿರೋಧ ತೋರಿದಳು. ಇದರಿಂದ ಕೋಪಗೊಂಡ ಮುದುಕಪ್ಪ, ಲೈಂಗಿಕ ದೌರ್ಜನ್ಯ ಎಸಗಿ, ಉಸಿರುಗಟ್ಟಿಸಿ ಹತ್ಯೆಗೈದು, ತಲೆ ಮೇಲೆ ಕಲ್ಲು ಎತ್ತಿ ಹಾಕಿದ್ದ.

ಪೊಲೀಸರ ಕಾರ್ಯಾಚರಣೆ:
ಶವಪತ್ತೆಯಾದ ಬಳಿಕ ಪೊಲೀಸರು ತಕ್ಷಣವೇ ತನಿಖೆಗೆ ಮುಂದಾದರು. ಸ್ಥಳದಲ್ಲಿನ ಸಿಸಿಟಿವಿ ದೃಶ್ಯ, ಸ್ಥಳೀಯರ ಮಾಹಿತಿಗಳನ್ನ ಆಧರಿಸಿ ಪೊಲೀಸರು ಆರೋಪಿಯ ಹತ್ತಿರ ಬಂದರು. ಶಂಕಿತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ, ಅವನು ಅಪರಾಧಕ್ಕೆ ಒಪ್ಪಿಕೊಂಡನು. ಮರಣೋತ್ತರ ಪರೀಕ್ಷೆ ಮತ್ತು ಎಫ್‌ಎಸ್‌ಎಲ್ ವರದಿ ದೃಢಪಡಿಸಿದ ನಂತರ, ಪೊಲೀಸರು ಮುದುಕಪ್ಪನನ್ನು ಅಧಿಕೃತವಾಗಿ ಬಂಧಿಸಿದರು.

ಈ ಘಟನೆಯು ಮಹಿಳೆಯರ ಸುರಕ್ಷತೆ ಕುರಿತಾಗಿ ಮತ್ತೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಆರೋಪಿ ಕಠಿಣ ಶಿಕ್ಷೆಗೆ ಒಳಗಾಗಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago