ಬೆತ್ತಲೆ ವಿಡಿಯೋ ರೆಕಾರ್ಡ್ ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ, ಏಳು ವರ್ಷಗಳ ಕಾಲ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪೊಲೀಸ್ ಅಧಿಕಾರಿಯನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಚನಿ ಮೂಲದ ಸಬು ಪನಿಕ್ಕರ್ ಎಂದು ಗುರುತಿಸಲಾಗಿದೆ. ಈತ ಕೇರಳದ ವಿಜಿಲೆನ್ಸ್ ಗ್ರೇಡ್ ಎಸ್ಸಿಪಿಒ ಆಗಿ ಕಾರ್ಯ ನಿರ್ವಹಿಸುತ್ತಿದ್ದ. 40 ವರ್ಷದ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಆಧಾರದ ಮೇಲೆ ಅರುವಿಕ್ಕರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪತಿಯಿಂದ ಪ್ರತ್ಯೇಕವಾಗಿ ವಾಸಿಸುತ್ತಿರುವ ಮಹಿಳೆಯ ಬೆತ್ತಲೆ ವಿಡಿಯೋವನ್ನು ಆರೋಪಿ ರೆಕಾರ್ಡ್ ಮಾಡಿಟ್ಟುಕೊಂಡಿದ್ದ. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತೇನೆಂದು ಹೆದರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸುಮಾರು 7 ವರ್ಷಗಳ ಕಾಲ ಮಹಿಳೆಯನ್ನು ಆರೋಪಿ ತನ್ನ ಕಾಮತೃಷೆಗೆ ದುರ್ಬಳಕೆ ಮಾಡಿಕೊಂಡಿದ್ದಾನೆ. ಆರೋಪಿ ವಿಡಿಯೋ ಕ್ಲಿಪ್ ಅನ್ನು ಹರಿಬಿಟ್ಟ ಬಳಿಕ ಮಹಿಳೆ ಇತ್ತೀಚೆಗೆ ಅರುವಿಕ್ಕರ ಪೊಲೀಸರಿಗೆ ದೂರು ನೀಡಿದ್ದರು. ವಿಡಿಯೋ ಹರಿಬಿಟ್ಟ ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…