ಹೈದರಾಬಾದ್‌ನ ಜಿಯಾಗುಡಾ ಪ್ರದೇಶದಲ್ಲಿ 9 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಅಜೀಜ್ ಎಂಬಾತನ ವಿರುದ್ಧ ಪೊಲೀಸರು ಪೋಕ್ಸೋ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಬಾಲಕಿಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸ್ಥಳೀಯರಲ್ಲಿ ಆಕ್ರೋಶ ಭುಗಿಲೆದ್ದಿದೆ. ಇದರಿಂದ ಉದ್ರಿಕ್ತಗೊಂಡ ಜನರ ಗುಂಪು ಆರೋಪಿಯ ಮೇಲೆ ಹಲ್ಲೆ ನಡೆಸಿದೆ.
ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆರೋಪಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣದ ಜೊತೆಗೆ ಗುಂಪು ಹಲ್ಲೆಗೆ ಸಂಬಂಧಿಸಿದಂತೆ ಮತ್ತೊಂದು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗದಂತೆ ಜಿಯಾಗುಡಾ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.
ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…
ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…
ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…
ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…
ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…
ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…