Latest

ದಲಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ; ಎಂ.ಎಲ್.ಸಿ ಪತ್ನಿ ಹಾಗೂ ಸಹಚರರ ವಿರುದ್ಧ ದೂರು ದಾಖಲು!

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ 40 ವರ್ಷದ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಮಾನಭಂಗ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಘಟನೆ ಅಕ್ಟೋಬರ್ 15 ರಂದು ನಡೆದಿದ್ದರೂ, ಶನಿವಾರ ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಐಪಿಸಿ ಸೆಕ್ಷನ್‌ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿಯ ಪತ್ನಿ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಎಂಎಲ್‌ಸಿ ಸುರೇಶ್ ಧಾಸ್ ಅವರ ಪತ್ನಿ ಪ್ರಜಕ್ತಾ ಧಾಸ್ ಅವರು ತಮ್ಮ ಸಹಚರರಾದ ರಾಹುಲ್ ಜಗದಾಳೆ ಮತ್ತು ರಾಘವ್ ಪವಾರ್ ಅವರೊಂದಿಗೆ ತಮ್ಮ ಪೂರ್ವಜರ ಜಮೀನನ್ನು ಬಲವಂತವಾಗಿ ಕಬಳಿಸಲು ಯತ್ನಿಸಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ.
ತಾನು ತನ್ನ ಗಂಡ ಮತ್ತು ಸೊಸೆಯೊಂದಿಗೆ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಧಾಸ್ ತನ್ನಿಬ್ಬರು ಸಹಚರರೊಂದಿಗೆ ತಮ್ಮ ಹೊಲಕ್ಕೆ ನುಗ್ಗಿ, ಈ ಜಮೀನು ತನಗೆ ಸೇರಿದ್ದು ಎಂದು ಹೇಳಿದ್ದಾರೆ. ಆದರೆ, ಈ ಜಮೀನು 65 ವರ್ಷಗಳಿಂದ ಅದು ತಮ್ಮ ಕುಟುಂಬದ ವಶದಲ್ಲಿದೆ ಎಂದು ಹೇಳಿದಾಗ ಪ್ರಜಕ್ತಾ ಧಾಸ್ ತನ್ನ ಮೇಲೆ ಲೈಂಗಿಕ ಹಲ್ಲೆ ನಡೆಸಲು ಆದೇಶಿಸಿದ್ದಾರೆ, ಅದರಂತೆ ಜಗದಾಲಿ ಮತ್ತು ಪವಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಪ್ರಕರಣದಲ್ಲಿ ಬಿಜೆಪಿ ಎಂಏಲ್‌ಸಿಯ ಪತ್ನಿಯ ಕೈವಾಡ ಇರುವುದರಿಂದ ರಾಜಕೀಯವಾಗಿಯೂ ಈ ಪ್ರಕರಣ ಗಮನ ಸೆಳೆದಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿ ಬಂದಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago