Categories: CrimeLatest

ಬಂಗಾರಪೇಟೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ದೂರು ದಾಖಲಾದ ಒಂದು ಗಂಟೆಯಲ್ಲೇ ಆರೋಪಿ ಬಂಧನ

ಬಂಗಾರಪೇಟೆ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಬಂಗಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಸೆಪ್ಟೆಂಬರ್ 2ರಂದು ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)-2023 ಹಾಗೂ ಪೋಕ್ಸೋ ಕಾಯ್ದೆ-2012ರ ಅನ್ವಯ ಪ್ರಕರಣ ದಾಖಲಿಸಲಾಗಿತ್ತು.

ದೂರು ಸ್ವೀಕರಿಸಿದ ತಕ್ಷಣ ಪೊಲೀಸರು ಕಾನೂನುಬದ್ಧವಾಗಿ ತನಿಖೆ ಆರಂಭಿಸಿದ್ದು, ಬಾಲಕಿಯನ್ನು ಆಕೆಯ ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಬಾಲಕಿ ನೀಡಿದ ಮಾಹಿತಿಯ ಆಧಾರದ ಮೇಲೆ ಬಂಗಾರಪೇಟೆಯ ಬೋವಿನಗರ ನಿವಾಸಿ ರಾಘವೇಂದ್ರ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

ಪ್ರಕರಣದ ತನಿಖೆಯನ್ನು ನ್ಯಾಯಸಮ್ಮತ, ವೃತ್ತಿಪರ ಹಾಗೂ ಸಂವೇದನಾಶೀಲ ರೀತಿಯಲ್ಲಿ ನಡೆಸಲಾಗುತ್ತಿದ್ದು, ಬಾಲ ಸಂತ್ರಸ್ತೆಗೆ ಕಾನೂನಿನ ಪ್ರಕಾರ ಅಗತ್ಯ ನೆರವು ಮತ್ತು ರಕ್ಷಣೆಯನ್ನು ಒದಗಿಸಲಾಗುತ್ತಿದೆ. ಸದ್ಯ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಯಾವುದೇ ಗಂಭೀರ ತೊಂದರೆ ಇಲ್ಲ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದೇ ವೇಳೆ, ಸಂತ್ರಸ್ತ ಬಾಲಕಿಯ ಗುರುತನ್ನು ನೇರವಾಗಿ ಅಥವಾ ಪರೋಕ್ಷವಾಗಿ ಬಹಿರಂಗಪಡಿಸುವ ಯಾವುದೇ ಮಾಹಿತಿ, ಛಾಯಾಚಿತ್ರ, ವಿಡಿಯೋ, ವಿಳಾಸ, ಕುಟುಂಬದ ವಿವರಗಳು ಅಥವಾ ಇತರ ಮಾಹಿತಿಯನ್ನು ಪ್ರಕಟಿಸದಂತೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳದಂತೆ ಪೊಲೀಸರು ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

ಬಾಲಕಿಯ ಗೌಪ್ಯತೆ ಮತ್ತು ಘನತೆಯನ್ನು ಕಾನೂನಿನ ಪ್ರಕಾರ ಕಟ್ಟುನಿಟ್ಟಾಗಿ ರಕ್ಷಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬದ್ಧವಾಗಿ ಬಹಿರಂಗಪಡಿಸಬಹುದಾದ ಹೆಚ್ಚಿನ ಮಾಹಿತಿಯನ್ನು ಸೂಕ್ತ ಹಂತದಲ್ಲಿ ಪ್ರಕಟಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ತಿಳಿಸಿದ್ದಾರೆ.

ಡಿವೈಎಸ್‌ಪಿ ಲಕ್ಷ್ಮಯ್ಯ ವಿ. ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಪೊಲೀಸ್ ಇನ್ಸ್‌ಪೆಕ್ಟರ್ ರವಿಕುಮಾರ್ ಸಿ., ಪಿಎಸ್‌ಐ ರಾಜಣ್ಣ ಎಸ್.ವಿ. ಹಾಗೂ ಸಿಬ್ಬಂದಿಗಳಾದ ಚಲಪತಿ, ಹರೀಶ್, ತಾಜ್ ಪಾಷಾ ಮತ್ತು ಮುನಿರಾಜು ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಪೊಲೀಸ್ ತಂಡದ ಕಾರ್ಯಾಚರಣೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್ ಅವರು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪತಿಯನ್ನೇ ಕೊಲ್ಲಲು ಪತ್ನಿಯ ಸ್ಕೆಚ್‌! ಪ್ರಿಯಕರನ ಮೊಬೈಲ್‌ನಲ್ಲಿ ಸಿಕ್ತು ಶಾಕಿಂಗ್ ಸಾಕ್ಷಿ..!

ಸೂರ್ಯಾಪೇಟೆ: ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಪತಿಯನ್ನೇ ಕೊಲೆ ಮಾಡಲು ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಸಂಚು…

7 hours ago

ಗಂಡ ನೈಟ್ ಡ್ಯೂಟಿಗೆ ಹೋದಾಗ ಮಕ್ಕಳಿಗೆ ನಿದ್ರೆ ಗುಳಿಗೆ; ಲವ್ವರ್ ಜೊತೆ ಪತ್ನಿಯ ಚಕ್ಕಂದ.. ಮಧ್ಯರಾತ್ರಿ ಮನೆಗೆ ಬಂದ ಗಂಡನಿಗೆ ಕಾದಿತ್ತು ಘೋರ ದುರಂತ!

ಸೋನ್‌ಭದ್ರ: ಗಂಡ ನೈಟ್ ಡ್ಯೂಟಿಗೆ ಹೋದ ಬಳಿಕ ಮಕ್ಕಳಿಗೆ ನಿದ್ರೆ ಮಾತ್ರೆ ನೀಡಿ, ಪ್ರಿಯಕರನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದ ಪತ್ನಿ, ಕೊನೆಗೆ…

7 hours ago

ರೈಲ್ವೆ ಕಾಮಗಾರಿ ಕಾರ್ಮಿಕರಿದ್ದ ಬೊಲೆರೋ ಪಲ್ಟಿ: ಎಂಟು ಮಂದಿಗೆ ಗಂಭೀರ ಗಾಯ

ಗೌರಿಬಿದನೂರು: ರೈಲ್ವೆ ಇಲಾಖೆಯ ಕಾಮಗಾರಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಬೊಲೆರೋ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ…

7 hours ago

ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ: 1,339 ಮಂದಿ ವಿರುದ್ಧ ಪ್ರಕರಣ

ಹುಬ್ಬಳ್ಳಿ–ಧಾರವಾಡ: ಅವಳಿ ನಗರದಲ್ಲಿ ಮಾದಕ ವಸ್ತುಗಳ ಜಾಲವನ್ನು ಬೇರುಸಹಿತ ಕಿತ್ತುಹಾಕಲು ಹುಬ್ಬಳ್ಳಿ–ಧಾರವಾಡ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದು, ಕಳೆದ ಮೂರು…

1 day ago

ವಿದ್ಯುತ್ ತಂತಿ ಅಳವಡಿಸಿ ಎರಡು ಜಿಂಕೆಗಳ ಬಲಿ: ಜಮೀನಿನಲ್ಲೇ ಮಾಂಸ ಬೇಯಿಸುತ್ತಿದ್ದ ಆರೋಪಿಗಳು!

ಸಾಗರ: ಜಮೀನಿಗೆ ಅಕ್ರಮವಾಗಿ ವಿದ್ಯುತ್ ತಂತಿ ಅಳವಡಿಸಿ ಎರಡು ಗಂಡು ಜಿಂಕೆಗಳನ್ನು ವಿದ್ಯುತ್ ಸ್ಪರ್ಶದಿಂದ ಸಾಯಿಸಿ, ಅವುಗಳ ಮಾಂಸವನ್ನು ಜಮೀನಿನಲ್ಲೇ…

1 day ago

ಅರ್ಚಕ ವಿಶ್ವೇಶ್ವರ ಭಟ್ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕುಮಟಾ: ನಗರದ ಪ್ರಸಿದ್ಧ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಜಿಲ್ಲಾ ಮತ್ತು…

1 day ago