ಬಳ್ಳಾರಿ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಕೂಡ್ಲಿಗಿ ತಾಲ್ಲೂಕಿನ ಸರ್ಕಾರಿ ಶಾಲೆಯೊಂದರ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಾರಪ್ಪ (45) ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪಾಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಿ ಶಾಲೆಗೆ ತೆರಳಿದ್ದ ವೇಳೆ ಶಿಕ್ಷಕನ ಅಸಭ್ಯ ವರ್ತನೆಯಿಂದ ಆಕೆ ತೀವ್ರ ಆತಂಕಕ್ಕೊಳಗಾಗಿದ್ದಳು. ಇದನ್ನು ಮನೆಯವರಿಗೆ ವಿವರಿಸಿದಾಗ, ತಾಯಿ ಕೂಡ್ಲಿಗಿ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರು ಸ್ವೀಕರಿಸಿದ ಪೊಲೀಸರು ಕೂಡಲೇ ಶಿಕ್ಷಕನನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಶಿಕ್ಷಕನ ವಿರುದ್ಧ ಪಾಕ್ಸೋ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಶಾಲಾ ವಾತಾವರಣದ ಸುರಕ್ಷತೆ ಬಗ್ಗೆ ಗಂಭೀರ ಚರ್ಚೆ ಮೂಡಿಸಿದೆ.
ಲಿಂಗಸುಗೂರು: ಅರಣ್ಯ ಸಂಪತ್ತಾದ ಸಾಗುವಾನಿ ಮರವನ್ನು ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂರು ಬೊಲೆರೋ ಗೂಡ್ಸ್ ವಾಹನಗಳ…
ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ ಮುಂಡಗೋಡ: 12 ವರ್ಷದ ಬಾಲಕಿಯ ಮೇಲೆ ನಡೆದಿರುವ ಅಮಾನವೀಯ…
ರಾಜಸ್ಥಾನ: ಜಿಮ್ನಲ್ಲಿ ಕಟ್ಟುಮಸ್ತಾದ ದೇಹದಂಡನೆ ಪ್ರದರ್ಶಿಸುವ ವಿಡಿಯೋ ಹಾಗೂ ಫೋಟೋಗಳನ್ನು ತೋರಿಸಿ 82 ವರ್ಷದ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಿ…
ಈ ವೇಳೆ ಆಕ್ರೋಶಗೊಂಡ ಗ್ರಾಮಸ್ಥರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಎಎಸ್ಐ ಅವರನ್ನು ಮಹಿಳೆಯೊಂದಿಗೆ ಆಕ್ಷೇಪಾರ್ಹ ಸ್ಥಿತಿಯಲ್ಲಿ ಕಂಡ ಹಿನ್ನೆಲೆಯಲ್ಲಿ…
ಯಲ್ಲಾಪುರ: ತಾಲೂಕಿನ ಹುಟ್ಕಮನ ಗ್ರಾಮದಲ್ಲಿ ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಒಂಟಿಮನೆ ದರೋಡೆ ನಡೆಸಿದ್ದ ಪ್ರಕರಣವನ್ನು ಯಲ್ಲಾಪುರ ಪೊಲೀಸರು ಭೇದಿಸುವಲ್ಲಿ…
ಧಾರವಾಡ: ತಾಲೂಕಿನ ಮಾದನಬಾವಿ ಗ್ರಾಮದ ಗೋಶಾಲೆಯಲ್ಲಿ ಗೋವುಗಳ ನಿರ್ವಹಣೆ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಗೋಶಾಲೆಯ ಅವ್ಯವಸ್ಥೆ ಸರಿಪಡಿಸಿ…