ಶಿವಮೊಗ್ಗ: ವೈದ್ಯೆ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಡಾ. ಅಶ್ವಿನ್ ಹೆಬ್ಬಾರ್, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಡಾ. ಹೆಬ್ಬಾರ್ ಪರಾರಿಯಾಗಿದ್ದರು. ಘಟನೆಯ ವಿರುದ್ಧ ವೈದ್ಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟಿಸಿದರು. ಲಾಯರ್‍ಸ್ ಗೀಲ್ಡ್ ಕೂಡ ಆಕ್ರೋಶ ವ್ಯಕ್ತಪಡಿಸಿ ವೈದ್ಯರನ್ನು ತಕ್ಷಣ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.
ತೀವ್ರಗತಿಯಲ್ಲಿ ತನಿಖೆ ನಡೆಸಿದ ಮಹಿಳಾ ಠಾಣೆ ಪೊಲೀಸರು, ಕರಾವಳಿ ಭಾಗದ ದೇವಾಲಯವೊಂದರ ಬಳಿ ಲುಕಾಯಿಸಿಕೊಂಡಿದ್ದ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದ್ದು, ನ್ಯಾಯಕ್ಕಾಗಿ ವಿದ್ಯಾರ್ಥಿನಿಗೆ ಸಮರ್ಪಕ ನ್ಯಾಯ ದೊರೆಯಲಿದೆ ಎಂಬ ನಿರೀಕ್ಷೆಯಿದೆ.
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…