Latest

ಶಿವಮೊಗ್ಗ ವೈದ್ಯ ಕಾಲೇಜಿನಲ್ಲಿ ಲೈಂಗಿಕ ಕಿರುಕುಳ ಆರೋಪ: ಸಹ ಪ್ರಾಧ್ಯಾಪಕ ಅರೆಸ್ಟ್

ಶಿವಮೊಗ್ಗ: ವೈದ್ಯೆ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಡಾ. ಅಶ್ವಿನ್ ಹೆಬ್ಬಾರ್, ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಅವರು ವಿದ್ಯಾರ್ಥಿನಿಯೊಬ್ಬರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ. ವಿದ್ಯಾರ್ಥಿನಿ ನೀಡಿದ ದೂರಿನ ಮೇರೆಗೆ, ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಡಾ. ಹೆಬ್ಬಾರ್ ಪರಾರಿಯಾಗಿದ್ದರು. ಘಟನೆಯ ವಿರುದ್ಧ ವೈದ್ಯ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ ಕಪ್ಪು ಪಟ್ಟಿಗಳನ್ನು ಧರಿಸಿ ಪ್ರತಿಭಟಿಸಿದರು. ಲಾಯರ್‍ಸ್ ಗೀಲ್ಡ್ ಕೂಡ ಆಕ್ರೋಶ ವ್ಯಕ್ತಪಡಿಸಿ ವೈದ್ಯರನ್ನು ತಕ್ಷಣ ಬಂಧಿಸಿ ಸೇವೆಯಿಂದ ಅಮಾನತುಗೊಳಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಿತು.

ತೀವ್ರಗತಿಯಲ್ಲಿ ತನಿಖೆ ನಡೆಸಿದ ಮಹಿಳಾ ಠಾಣೆ ಪೊಲೀಸರು, ಕರಾವಳಿ ಭಾಗದ ದೇವಾಲಯವೊಂದರ ಬಳಿ ಲುಕಾಯಿಸಿಕೊಂಡಿದ್ದ ಡಾ. ಅಶ್ವಿನ್ ಹೆಬ್ಬಾರ್ ಅವರನ್ನು ಬಂಧಿಸಿ ವಶಕ್ಕೆ ಪಡೆದಿದ್ದಾರೆ. ಇದೀಗ ಅವರನ್ನು ಶಿವಮೊಗ್ಗಕ್ಕೆ ಸ್ಥಳಾಂತರಿಸಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದ್ದು, ನ್ಯಾಯಕ್ಕಾಗಿ ವಿದ್ಯಾರ್ಥಿನಿಗೆ ಸಮರ್ಪಕ ನ್ಯಾಯ ದೊರೆಯಲಿದೆ ಎಂಬ ನಿರೀಕ್ಷೆಯಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

23 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago