
ಮಧ್ಯರಾತ್ರಿಯ ವೇಳೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಅನುಚಿತವಾಗಿ ಮುಟ್ಟಿ ಕಿರುಕುಳ ನೀಡಿದ ಘಟನೆ ಬುಧವಾರ ರಾತ್ರಿ 11.30ರ ಸುಮಾರಿಗೆ ನಡೆದಿದೆ. ಈ ಸಂಬಂಧ ತಕ್ಷಣವೇ ಯುವತಿ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆರೋಪಿಯ ಬಂಧನಕ್ಕೆ ಕಾರ್ಯಾಚರಣೆ ಕೈಗೊಂಡಿದ್ದರು.
ಆರೋಪಿ ಶ್ರೀಕಾಂತ್ ಎನ್ನಲಾಗಿದ್ದು, ಕಾಡುಬೀಸನಹಳ್ಳಿಯಲ್ಲಿ ವಾಸಿಸುತ್ತಿದ್ದಾನೆ. ಪ್ರಕರಣ ನಡೆದ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು, ಅಂತಿಮವಾಗಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೋಕ್ಸೋ ಸಹಿತ ಲೈಂಗಿಕ ಕಿರುಕುಳ ತಡೆಯುವ ಅಡಿಗಳಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಮುಂದಿನ ತನಿಖೆ ಮುಂದುವರೆಸಿದ್ದಾರೆ.