Latest

ಯುವತಿಗೆ ಲೈಂಗಿಕ ಕಿರುಕುಳ: ಕಾಮುಕರಿಗಾಗಿ ಬಾಣಸವಾಡಿ ಪೊಲೀಸರ ಶೋಧ

ಬೆಂಗಳೂರು: ಮುಂಜಾನೆ ಕ್ಯಾಬ್ ಬುಕ್ ಮಾಡಿದ ಯುವತಿ ಲೈಂಗಿಕ ಕಿರುಕುಳಕ್ಕೆ ಗುರಿಯಾಗಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಬಳಿಕ ಪರಾರಿಯಾಗಿರುವ ಇಬ್ಬರು ಆರೋಪಿಗಳನ್ನು ಬಂಧಿಸಲು ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಘಟನೆ ವಿವರ

ಜಾನುವರಿ 27ರ ಮುಂಜಾನೆ 2 ಗಂಟೆ ಸುಮಾರಿಗೆ, ಕಮನಹಳ್ಳಿಯಿಂದ ವೈಟ್‌ಫೀಲ್ಡ್‌ಗೆ ತೆರಳಲು ಯುವತಿಯೊಬ್ಬರು ಕ್ಯಾಬ್ ಬುಕ್ ಮಾಡಿದ್ದರು. ಕ್ಯಾಬ್ ಸ್ಥಳಕ್ಕೆ ಬಂದ ತಕ್ಷಣ, ಆಕೆ ಒಳಗೆ ಸೇರುತ್ತಿದ್ದಂತೆಯೇ ಇಬ್ಬರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕಾರಿಗೆ ನುಗ್ಗಿ ಆಕೆಯ ಪಕ್ಕದಲ್ಲೇ ಕುಳಿತುಕೊಂಡಿದ್ದಾರೆ.

ಯುವತಿ ಆತಂಕಗೊಂಡು ಕಾರಿನಿಂದ ಇಳಿದು ಓಡಲು ಪ್ರಯತ್ನಿಸಿದರೂ, ಕಾಮುಕರು ಆಕೆಯನ್ನು ಹಿಂಬಾಲಿಸಿ ಜಗ್ಗಾಡಿದ್ದಾರೆ. ಲೈಂಗಿಕ ಕಿರುಕುಳ ನೀಡಲು ಮುಂದಾದಾಗ, ಆತಂಕಗೊಂಡ ಯುವತಿ ಜೋರಾಗಿ ಕಿರುಚಿಕೊಂಡಿದ್ದಾರೆ. ಆಕೆಯ ಚಿರಾಟ ಕೇಳಿದ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ತಕ್ಷಣವೇ ಸ್ಥಳಕ್ಕೆ ಧಾವಿಸಿದ್ದಾರೆ. ಇದನ್ನು ಗಮನಿಸಿದ ಇಬ್ಬರು ಆರೋಪಿತರು ಅಲ್ಲಿಂದ ಪರಾರಿಯಾಗಿದ್ದಾರೆ.

ಪೊಲೀಸರು ಶೋಧ ಆರಂಭ

ಘಟನೆಯ ಕುರಿತು ತಕ್ಷಣವೇ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಯುವತಿ, ತನ್ನ ಮೇಲಾದ ಹಲ್ಲೆಯ ಬಗ್ಗೆ ವಿವರ ನೀಡಿದ್ದಾರೆ. ಸದ್ಯ, ಪೊಲೀಸರು ಆರೋಪಿತರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಿ ಹುಡುಕಾಟ ನಡೆಸುತ್ತಿದ್ದಾರೆ.

ನಿರಪರಾಧ ಮಹಿಳೆಯರ ಸುರಕ್ಷತೆಗೆ ಭಂಗ ತರುವ ಈ ರೀತಿಯ ಘಟನೆಗಳನ್ನು ತಡೆಗಟ್ಟಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸಾರ್ವಜನಿಕರು ಸಹ ಮಾಹಿತಿ ನೀಡಲು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಕೋರಲಾಗಿದೆ.

nazeer ahamad

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

2 days ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

2 days ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

5 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

6 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

6 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

6 days ago