ಪ್ರೀತಿ ಮಾಡುವುದಾಗಿ ನಂಬಿಸಿ ಯುವತಿಯ ಖಾಸಗಿ ವಿಡಿಯೋವನ್ನು ದಾಖಲಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿದ ಆರೋಪದ ಮೇಲೆ ಸುಶಾಂತ್ ಪೂಜಾರಿ ಹಾಗೂ ಆತನ ಸಹೋದರಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಯುವತಿ ನೀಡಿದ ದೂರಿನ ಪ್ರಕಾರ, ಸುಮಾರು ಆರು ತಿಂಗಳ ಹಿಂದೆ Instagram ಮೂಲಕ ಸುಶಾಂತ್ ಪೂಜಾರಿಯ ಪರಿಚಯವಾಗಿತ್ತು. ಆತನು ತಾನು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ತಾತ್ಕಾಲಿಕವಾಗಿ ಊರಿಗೆ ಬಂದಿದ್ದೇನೆಂದು ಹೇಳಿಕೊಂಡಿದ್ದ.
ಪರಿಚಯ ಮುಂದುವರಿದಂತೆ ಇಬ್ಬರ ಮಧ್ಯೆ ಪ್ರೀತಿ ಬೆಳೆದು, ಮದುವೆಯಾಗುವುದಾಗಿ ನಿರ್ಧರಿಸಿದ್ದರು. ಈ ನಡುವೆ, ಮದುವೆಯ ಭರವಸೆ ನೀಡಿದ ಸುಶಾಂತ್, ಯುವತಿಗೆ ಖಾಸಗಿ ವಿಡಿಯೋ ಕಳುಹಿಸಲು ಹಾಗೂ ವಿಡಿಯೋ ಕಾಲ್‌ನಲ್ಲಿ ನಗ್ನವಾಗಿ ಕಾಣಿಸಿಕೊಳ್ಳಲು ಒತ್ತಾಯಿಸಿದ್ದಾನೆ. ವಿಶ್ವಾಸದಿಂದ ಯುವತಿ ಸ್ನಾನ ಮಾಡುವ ಸಂದರ್ಭದಲ್ಲೇ ವಿಡಿಯೋ ಕಾಲ್ ಮೂಲಕ ಮಾತನಾಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭವನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಂಡ ಆರೋಪಿಯು ಬಳಿಕ ಅದನ್ನು ವಾಟ್ಸಾಪ್ ಮೂಲಕ ಇತರರಿಗೆ ಹಂಚಿದ್ದಾನೆ. ಈ ಕೃತ್ಯಕ್ಕೆ ಆತನ ಸಹೋದರಿಯೂ ಸಹಕರಿಸಿದ್ದಾಳೆ ಎಂಬ ಆರೋಪವೂ ಕೇಳಿಬಂದಿದೆ.
ಯುವತಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿದಿದೆ.
ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಿಬ್ಬಂದಿ ಕೊರತೆಯನ್ನು ನೀಗಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಲಿ ಇರುವ ಸುಮಾರು 4000 ಬೋಧಕ…
ಉತ್ತರ ಪ್ರದೇಶದ ಘಾಜಿಯಾಬಾದ್‌ನ ಟ್ರೋನಿಕಾ ಸಿಟಿಯಲ್ಲಿ ದಾರುಣ ಘಟನೆ ನಡೆದಿದ್ದು, ಪತ್ನಿ ಹಾಗೂ ಆಪ್ತ ಸ್ನೇಹಿತನ ನಡುವೆ ಅಕ್ರಮ ಸಂಬಂಧವಿದೆ…
ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಹಲ್ಲು ಕೀಳಿಸಲು ಹೋದ ಮಹಿಳೆಯೊಬ್ಬರು ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ ಘಟನೆ ಇನ್ನೂ ಮಂಕಾಗುವ ಮುನ್ನವೇ, ಹೈದರಾಬಾದ್‌ನಲ್ಲಿ ನಕಲಿ…
ಬೆಳಗಾವಿ ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್ ಹಾಗೂ ಪೆಟ್ರೋಲ್-ಡೀಸೆಲ್ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸ್ಪಷ್ಟಪಡಿಸಿದ್ದಾರೆ. ಬಂಕ್‌ಗಳಲ್ಲಿ ಸ್ಟಾಕ್…
ಅಂಕೋಲಾ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಇಂದು…
ಈಶಾನ್ಯ ಚೀನಾದಲ್ಲಿ ಹೃದಯಸ್ಪರ್ಶಿ ಘಟನೆ ಒಂದಾಗಿದೆ. ಅಕ್ರಮವಾಗಿ ಸಾಗಿಸಲಾಗುತ್ತಿದ್ದ 7 ಶ್ವಾನಗಳು ವಾಹನದಿಂದ ತಪ್ಪಿಸಿಕೊಂಡು, ಸುಮಾರು 17 ಕಿಲೋಮೀಟರ್ ದೂರವನ್ನು…