Categories: Latest

ಅಂಬೇಡ್ಕರ್‌ಗೆ ಅವಮಾನ: ಹೂ, ಹಿಪ್ಪರಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರ ಆಕ್ರೋಶ

ಬಸವನ ಬಾಗೇವಾಡಿ: ತಾಲ್ಲೂಕಿನ ಹೂವಿನ ಹಿಪ್ಪರಗಿ ಗ್ರಾಮ ಪಂಚಾಯಿತಿಯಲ್ಲಿ ಜನವರಿ 26ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆ ನಡೆಯಿತು. ಆದರೆ, ಈ ದಿನಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸರ್ಕಲ್‌ಗೆ ಪೂಜೆ ಮಾಡದೇ, ಮಾಲಾರ್ಪಣೆ ಮಾಡದೇ ಅವಮಾನ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಸಿಬ್ಬಂದಿ ವಿರುದ್ಧ ದಲಿತ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಅಕ್ಕಪಕ್ಕದ ಎಲ್ಲಾ ಸರ್ಕಲ್‌ಗಳಿಗೆ ಪೂಜೆ ಮತ್ತು ಮಾಲಾರ್ಪಣೆ ಮಾಡಿದ್ದು, ಗಾಂಧಿ ಸರ್ಕಲ್‌ಗೆ ಪೂಜೆ ಸಲ್ಲಿಸಿರುವುದನ್ನು ದಲಿತ ಮುಖಂಡರು ಒಪ್ಪಿಕೊಂಡರೂ, ಅಂಬೇಡ್ಕರ್ ಸರ್ಕಲ್‌ಗೆ ಪೂಜೆ ಮಾಡದಿರುವ ಕಾರಣ ಏನೆಂಬುದು ಸ್ಪಷ್ಟವಾಗಿಲ್ಲ. ಈ ಘಟನೆ ದಲಿತ ಮುಖಂಡರ ಆಕ್ರೋಶಕ್ಕೆ ಕಾರಣವಾಯಿತು.

ನಿನ್ನೆ ಹೂವಿನ ಹಿಪ್ಪರಗಿ ರಸ್ತೆ ತಡೆದು ದಲಿತ ಮುಖಂಡರು ಬೃಹತ್ ಪ್ರತಿಭಟನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ, ಬೆಳಗ್ಗಿನಿಂದಲೇ ಆರಂಭವಾದ ಪ್ರತಿಭಟನೆ ಮಧ್ಯಾಹ್ನ 4 ಗಂಟೆಯವರೆಗೆ ಮುಂದುವರಿಯಿತು. ಈ ವೇಳೆ, ಗ್ರಾಮ ಪಂಚಾಯಿತಿಯ ಪಿಡಿಓ ಅವರು ಸ್ಥಳಕ್ಕೆ ಆಗಮಿಸಿ ಅಂಬೇಡ್ಕರ್‌ ಮೂರ್ತಿಗೆ ಹಾರ ಹಾಕಿದ ನಂತರ ದಲಿತ ಮುಖಂಡರು ಪ್ರತಿಭಟನೆ ಹಿಂತೆಗೆದುಕೊಂಡರು.

ಪ್ರತಿಭಟನೆ ನಂತರ, ಸ್ಥಳಕ್ಕೆ ಆಗಮಿಸಿದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಾಶ ದೇಸಾಯಿ ಅವರ ಬಳಿ ದಲಿತ ಮುಖಂಡರು ಗ್ರಾಮ ಪಂಚಾಯಿತಿಯ ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

ಈ ಪ್ರತಿಭಟನೆಯಲ್ಲಿ ದಲಿತ ಮುಖಂಡರು ಗಂಗಾಧರ ಇಂಗಳೇಶ್ವರ, ಸಿದ್ದು ಮೇಟಿ, ಚಂದ್ರಶೇಖರ ಲಿಂಗದಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ವರದಿ: ಸಂಗಪ್ಪ ಚಲವಾದಿ

nazeer ahamad

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

22 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago