Categories: CrimeLatest

ಶೀಲಾ ಶಂಕಿಸಿ ಮಕ್ಕಳ ಎದುರೇ ತಾಯಿಯ ಹತ್ಯೆ: ಪತ್ನಿಯನ್ನು ಕೊಡಲಿಯಿಂದ ಕೊಂದ ಪತಿಗೆ ಜೀವಾವಧಿ ಶಿಕ್ಷೆ

ಧಾರವಾಡ: ಪತ್ನಿಯ ಶೀಲದ ಮೇಲೆ ಅನುಮಾನ ವ್ಯಕ್ತಪಡಿಸಿ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ್ದ ಪತಿಗೆ ಧಾರವಾಡದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ನವಲಗುಂದ ತಾಲ್ಲೂಕಿನ ಆಯಟ್ಟಿ ಗ್ರಾಮದಲ್ಲಿ ನಡೆದಿದ್ದ ಈ ಪ್ರಕರಣದಲ್ಲಿ ಆರೋಪಿ ಶಿವಾನಂದ (37) ತನ್ನ ಪತ್ನಿ ಮಲ್ಲವ್ವಳ ನಡತೆಯ ಬಗ್ಗೆ ನಿರಂತರವಾಗಿ ಸಂಶಯ ವ್ಯಕ್ತಪಡಿಸುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ದಂಪತಿಯ ನಡುವೆ ಆಗಾಗ ಕಲಹ ಉಂಟಾಗುತ್ತಿತ್ತು ಎಂದು ತಿಳಿದುಬಂದಿದೆ.

2024ರ ಏಪ್ರಿಲ್ 27ರ ತಡರಾತ್ರಿ, ಮನೆಯಲ್ಲಿ ಮಲಗಿದ್ದ ಪತ್ನಿ ಮಲ್ಲವ್ವಳ ಮೇಲೆ ಶಿವಾನಂದ ಕೊಡಲಿಯಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದನು. ಘಟನೆ ವೇಳೆ ಪಕ್ಕದಲ್ಲೇ ಮಲಗಿದ್ದ ಇಬ್ಬರು ಅಪ್ರಾಪ್ತ ಮಕ್ಕಳು ಈ ಭೀಕರ ದೃಶ್ಯವನ್ನು ಕಣ್ಣಾರೆ ಕಂಡಿದ್ದರು.

ಪ್ರಕರಣದ ತನಿಖೆ ನಡೆಸಿದ ನವಲಗುಂದ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಆರ್.ಎಸ್. ಕಪ್ಪತ್ತನವರ್ ಅವರು ನ್ಯಾಯಾಲಯಕ್ಕೆ ಪ್ರಮುಖ ಸಾಕ್ಷ್ಯಗಳನ್ನು ಸಲ್ಲಿಸಿದ್ದರು. ವಿಶೇಷವಾಗಿ, ಮಕ್ಕಳ ಕಣ್ಣಾರೆ ಕಂಡ ಸಾಕ್ಷ್ಯ ಈ ಪ್ರಕರಣದಲ್ಲಿ ನಿರ್ಣಾಯಕವಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಪೂರ್ಣಿಮಾ ಎನ್. ಪೈ ಅವರು ಆರೋಪಿಯ ವಿರುದ್ಧ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ ಹಾಗೂ 2 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಅದರೊಂದಿಗೆ, ದಂಡದ ಮೊತ್ತದಲ್ಲಿ ತಾಯಿಯನ್ನು ಕಳೆದುಕೊಂಡು ಅನಾಥರಾದ ಇಬ್ಬರು ಮಕ್ಕಳಿಗೆ ತಲಾ 1 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನ್ಯಾಯಾಲಯ ಮಾನವೀಯ ಆದೇಶ ಹೊರಡಿಸಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago