Latest

ಶಿರೂರು ಗುಡ್ಡ ಕುಸಿತ ಪ್ರಕರಣ: ಅಂಕೋಲಾ ಪೊಲೀಸ್ ಠಾಣೆ ಎದುರಿಗೆ ಸ್ವಾಮೀಜಿ ಪ್ರತಿಭಟನೆ.

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಚತುಷ್ಪಥ ಹೆದ್ದಾರಿ ಕಾಮಗಾರಿ ನಿರ್ವಹಿಸುತ್ತಿದ್ದ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ನ್ಯಾಯಾಲಯದ ಆದೇಶ ಹೊರಡಿಸಿದರೂ ಮೌನವಾಗಿರುವ ಪೊಲೀಸರ ವಿರುದ್ಧ ಪ್ರಣವಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ. ಅಂಕೋಲಾ ಪೊಲೀಸ ಠಾಣೆ ಎದುರು ಅವರು ಮಂಗಳವಾರ ಪ್ರತಿಭಟಿಸಿ, ಆಕ್ರೋಶ ವ್ಯಕ್ತಪಡಿಸಿದರು.

ಬ್ರಹ್ಮರ್ಷಿ ನಾರಾಯಣ ಗುರು ಶಕ್ತಿ ಪೀಠದ ಪೀಠಾಧಿಪತಿ ಪ್ರಣವಾನಂದ ಸ್ವಾಮೀಜಿ ಆಕ್ರೋಶದ ಬೆನ್ನಲ್ಲೆ ಪೊಲೀಸರು ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಿದರು. `ಪ್ರಕರಣ ದಾಖಲಿಸಲು ನ್ಯಾಯಾಲಯ ಸೂಚಿಸಿ 24 ದಿನ ಕಳೆದರೂ ಪೊಲೀಸರು ಎಫ್‌ಐಆರ್ ದಾಖಲಿಸಿರಲಿಲ್ಲ’ ಎಂದು ಸ್ವಾಮೀಜಿ ಅಸಮಧಾನ ವ್ಯಕ್ತಪಡಿಸಿದರು.

ಶಿರೂರು ಗುಡ್ಡ ಕುಸಿತ ಪ್ರಕರಣದಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ದೊರೆತಿಲ್ಲ. ಅವೈಜ್ಞಾನಿಕ ಕಾಮಗಾರಿ ಕೈಗೊಂಡು ಗುಡ್ಡ ಕುಸಿತಕ್ಕೆ ಕಾರಣವಾಗಿದ್ದ ಐಆರ್‌ಬಿ ಕಂಪನಿ ವಿರುದ್ಧ ಕ್ರಮವಾಗಿಲ್ಲ. ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಯ ಮೆಟ್ಟಿಲೇರಿದರು ಅವರು ಸ್ಪಂದಿಸಿಲ್ಲ. ಆದ್ದರಿಂದ ನ್ಯಾಯಾಲಯದ ಮೊರೆ ಹೋದೆವು. ಅಲ್ಲಿ ಐಆರ್‌ಬಿ ಕಂಪನಿಯ ಎಂಟು ಅಧಿಕಾರಿಗಳ ಮೇಲೆ ಎಫ್‌ಐಆ‌ರ್ ದಾಖಲಿಸುವಂತೆ ಆದೇಶ ನೀಡಿದ್ದರೂ ಯಾವುದೇ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ’ ಎಂದು ಮಾಧ್ಯಮದ ಎದುರು ವಿವರಿಸಿದರು.

ಹಿಂದುಳಿದ ವರ್ಗದ ಮುಖ್ಯಮಂತ್ರಿ ಎನಿಸಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಾಗೂ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಎಂದು ಹೇಳಿಕೊಳ್ಳುವ ಗೃಹಮಂತ್ರಿ ಜಿ ಪರಮೇಶ್ವರ ಅವರಿಂದಲೂ ಸಂತ್ರಸ್ತರಿಗೆ ನ್ಯಾಯ ಕೊಡಿಸಲು ಅಸಾಧ್ಯವೇ? ಎಂದು ಪ್ರಶ್ನಿಸಿದರು. `ನ್ಯಾಯಾಲಯದ ಅದೇಶದಿಂದ ಗುಡ್ಡ ಕುಸಿತ ಪ್ರಕರಣದಲ್ಲಿ ನೋಂದವರಿಗೆ ಮತ್ತಷ್ಟು ಆತ್ಮವಿಶ್ವಾಸ ಹೆಚ್ಚಿಸಿದೆ. ಶಿರೂರು ಗುಡ್ಡ ಕುಸಿತದಲ್ಲಿ ಸಾವನ್ನಪ್ಪಿದವರಿಗೆ ನ್ಯಾಯ ಕೊಡಿಸಿಯೇ ತಿರುತ್ತೇನೆ’ ಎಂದು ಘೋಷಿಸಿದರು.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago