ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆ ಆವರಣದ ಗೋಡೆ ಕುಸಿತದಿಂದ ಸಂಭವಿಸಿದ ಭೀಕರ ದುರಂತದ ಸ್ಥಳಕ್ಕೆ ಬುಧವಾರ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಧಿಕಾರಿಗಳ ನಿರ್ಲಕ್ಷ್ಯವನ್ನು ತೀವ್ರವಾಗಿ ಖಂಡಿಸಿದರು. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಏಳು ಮಂದಿಯ ಕುಟುಂಬಗಳಿಗೆ ತಲಾ ₹5 ಲಕ್ಷ ಪರಿಹಾರ ಘೋಷಿಸಿದ ಅವರು, ಗಾಯಾಳುಗಳಿಗೆ ಸಂಪೂರ್ಣ ಉಚಿತ ಹಾಗೂ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಘಟನಾ ಸ್ಥಳದಲ್ಲಿ ಅವಶೇಷಗಳನ್ನು ಪರಿಶೀಲಿಸಿದ ಸಿಎಂ, ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಹಿರಿಯ ಅಧಿಕಾರಿಗಳನ್ನು ತಕ್ಷಣವೇ ಸ್ಥಳಕ್ಕೆ ಕರೆಯಿಸಿ ಮಾಹಿತಿ ಪಡೆದುಕೊಂಡರು. ವ್ಯಾಪಾರ ಮಾಡುತ್ತಿದ್ದ ಜನರ ಮೇಲೆ ಗೋಡೆ ಕುಸಿದು ನಿರಪರಾಧಿಗಳು ಬಲಿಯಾದ ಈ ಘಟನೆ ಕುರಿತು ವಿವರವಾಗಿ ವಿಚಾರಿಸಿದರು. ದುರಂತದ ಮೂಲ ಕಾರಣವನ್ನು ಪತ್ತೆಹಚ್ಚಲು ತಕ್ಷಣವೇ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಈ ವೇಳೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಿಎಂ, “ಇಂತಹ ಹಳೆಯ ಗೋಡೆಗಳ ಬಗ್ಗೆ ಮುಂಚಿತವಾಗಿ ಗಮನ ಹರಿಸಲು ಆಗಲಿಲ್ಲವೇ? ಇಲಾಖೆಗಳ ನಡುವೆ ಸಮನ್ವಯತೆ ಇಲ್ಲವೇ?” ಎಂದು ತರಾಟೆಗೆ ತೆಗೆದುಕೊಂಡರು. “ಸ್ವಲ್ಪ ಎಚ್ಚರಿಕೆ ವಹಿಸಿದ್ದರೆ ಈ ಅನಾಹುತವನ್ನು ತಪ್ಪಿಸಬಹುದಾಗಿತ್ತು. ನಿಮ್ಮ ನಿರ್ಲಕ್ಷ್ಯದಿಂದ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ,” ಎಂದು ಕಿಡಿಕಾರಿದರು.
ನಂತರ ಅವರು ನೇರವಾಗಿ ಬೌರಿಂಗ್ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಯಾವುದೇ ರೀತಿಯ ಹಣಕಾಸಿನ ಭಾರ ರೋಗಿಗಳ ಮೇಲೆ ಬಾರದಂತೆ ಉಚಿತ ಚಿಕಿತ್ಸೆ ನೀಡಬೇಕು ಮತ್ತು ಚಿಕಿತ್ಸೆಯಲ್ಲಿ ಯಾವುದೇ ರೀತಿಯ ಲೋಪವಾಗಬಾರದು ಎಂದು ವೈದ್ಯಕೀಯ ಸಿಬ್ಬಂದಿಗೆ ಸೂಚಿಸಿದರು.
ಇದೇ ವೇಳೆ, ಮಳೆಯಿಂದಾಗಿ ನಗರದಲ್ಲಿರುವ ಹಳೆಯ ಗೋಡೆಗಳು ಮತ್ತು ಅಪಾಯಕಾರ ಕಟ್ಟಡಗಳನ್ನು ತಕ್ಷಣ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದರು.
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…