Latest

ಶಿವಮೊಗ್ಗ ವೈದ್ಯರಿಗೆ ಆನ್‌ಲೈನ್ ಹೂಡಿಕೆ ತೊಡಕಿನಲ್ಲಿ 2.19 ಕೋಟಿ ರೂ. ವಂಚನೆ!

ಶಿವಮೊಗ್ಗ: ಹೂಡಿಕೆಯಿಂದ ಅಧಿಕ ಲಾಭ ಗಳಿಸಬಹುದು ಎಂಬ ಆಮಿಷದ ಹಿನ್ನಲೆಯಲ್ಲಿ, ನಗರದ ವೈದ್ಯರೊಬ್ಬರು 2.19 ಕೋಟಿ ರೂಪಾಯಿ ಕಳೆದುಕೊಂಡಿರುವ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಪೊಲೀಸರ ಪ್ರಕಾರ, ವೈದ್ಯರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಕಟವಾದ ಒಂದು ಆಕರ್ಷಕ ಜಾಹೀರಾತನ್ನು ನೋಡಿದ್ದಾರೆ. “ಶೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸಬಹುದು” ಎಂಬ ವಿಷಯದ ಲಿಂಕ್‌ ಮೇಲೆ ಕ್ಲಿಕ್ ಮಾಡಿದ ಅವರು, ಅದರಲ್ಲಿನ ಹೂಡಿಕೆ ಅರ್ಜಿಯನ್ನು ಆನ್‌ಲೈನ್‌ನಲ್ಲಿ ಭರ್ತಿ ಮಾಡಿದ್ದಾರೆ.

ಅರ್ಜಿ ಸಲ್ಲಿಸಿದ ಕೆಲವೇ ಕ್ಷಣಗಳಲ್ಲಿ, ವೈದ್ಯರನ್ನು ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿಸಿ ಹೂಡಿಕೆ ಸಂಬಂಧಿತ ಮಾಹಿತಿ ನೀಡಲಾಗಿದೆ. ಆರಂಭದಲ್ಲಿ 5 ಲಕ್ಷ ರೂಪಾಯಿ ಹೂಡಿಕೆ ಮಾಡಿದ ವೈದ್ಯರಿಗೆ, ನಂಬಿಕೆ ಮೂಡಿಸುವ ರೀತಿಯಲ್ಲಿ 65 ಸಾವಿರ ರೂ. ಲಾಭಾಂಶವನ್ನು ಪಾವತಿಸಲಾಗಿದೆ.

ಇದರಿಂದ ಪ್ರೇರಿತರಾದ ವೈದ್ಯರು, ಹೆಚ್ಚಿನ ಲಾಭದ ಆಶೆಯಿಂದ 1.5 ಕೋಟಿ ರೂಪಾಯಿ ಹೂಡಿಕೆಗೆ ಮುಂದಾಗಿದ್ದಾರೆ. “ಈ ಹೂಡಿಕೆಗೆ 25 ಕೋಟಿ ರೂಪಾಯಿ ಲಾಭ ಸಿಗುತ್ತದೆ” ಎಂಬ ಭರವಸೆ ನೀಡಲಾಗಿದ್ದು, ವೈದ್ಯರು ತಮ್ಮ ಇಬ್ಬರು ಸ್ನೇಹಿತರಿಂದ ಹಣಸೇರುವ ಮೂಲಕ ಒಟ್ಟು ಹಣ ಸಂಗ್ರಹಿಸಿದ್ದರು. ಲಾಭ ಬಂದರೆ ಮೂವರು ಹಂಚಿಕೊಳ್ಳೋಣ ಎಂಬ ಮಾತುಕತೆ ಸಹ ನಡೆದಿತ್ತು.

ಆದರೆ, ಹೆಚ್ಚಿನ ಹಣ ಹೂಡಿಕೆ ಮಾಡಿದ ಬಳಿಕ, ಲಾಭಾಂಶ ಪಾವತಿ ಬಗ್ಗೆಯೂ ಯಾವುದೇ ಸ್ಪಷ್ಟತೆ ದೊರೆತಿಲ್ಲ. ಬಳಿಕ ಅವರ ದೂರವಾಣಿ ಕರೆಗಳಿಗೆ ಪ್ರತಿಕ್ರಿಯೆ ಸಿಕ್ಕಿಲ್ಲ. ಅಷ್ಟರಲ್ಲಿ ವಂಚನೆ ಸಂಭವಿಸಿದೆ ಎಂಬುದು ವೈದ್ಯರ ಗಮನಕ್ಕೆ ಬಂದಿದೆ.

ವೈದ್ಯರ ದೂರಿನ ಮೇರೆಗೆ, ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೊತ್ತ 2.19 ಕೋಟಿ ರೂಪಾಯಿ ವಂಚನೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆನ್‌ಲೈನ್ ಮೂಲಕ ಲಾಭದ ಆಮಿಷವೊಡ್ಡುವ ಫ್ರೆಡ್‌ಗಳು ಸದ್ಯ ಎಚ್ಚರಿಕೆಗೆ ಕಾರಣವಾಗುತ್ತಿವೆ. ಜನರು ಯಾವುದೇ ಹಣಕಾಸು ಹೂಡಿಕೆ ಮುನ್ನ ಅಧಿಕಾರಿಕವಾಗಿ ಪರಿಶೀಲನೆ ಮಾಡುವ ಅಗತ್ಯವಿದೆ ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

nazeer ahamad

Recent Posts

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

5 hours ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

9 hours ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

12 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

17 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

1 day ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

2 days ago