ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಶಂಕೆ – ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನೆ
ಗೌರಿಬಿದನೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಲ್ಲೇನಹಳ್ಳಿ ಗ್ರಾಮದಲ್ಲಿ ತಾಯಿ ಹಾಗೂ ಇಬ್ಬರು ಪುಟ್ಟ ಮಕ್ಕಳು ವಿಷ ಸೇವಿಸಿ ಗಂಭೀರವಾಗಿ ಅಸ್ವಸ್ಥಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ತಾಯಿ ಸೇರಿದಂತೆ ಇಬ್ಬರು ಮಕ್ಕಳ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಲ್ಲೇನಹಳ್ಳಿ ಗ್ರಾಮದ ಶೈಲಾ ಎಂಬ ಮಹಿಳೆ ತನ್ನ ಆರು ವರ್ಷದ ಮಗ ವೇದಾಂತ್ ಹಾಗೂ ನಾಲ್ಕು ವರ್ಷದ ಮಗ ತೇಜಸ್‌ಗೆ ವಿಷ ನೀಡಿದ ಬಳಿಕ ತಾನೂ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಕುಟುಂಬದಲ್ಲಿನ ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವಾಗಿರಬಹುದು ಎಂದು ಪ್ರಾಥಮಿಕವಾಗಿ ಶಂಕಿಸಲಾಗಿದ್ದು, ಘಟನೆಯ ಹಿಂದಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಘಟನೆ ತಿಳಿಯುತ್ತಿದ್ದಂತೆ ಅಸ್ವಸ್ಥಗೊಂಡಿದ್ದ ಮೂವರನ್ನು ತಕ್ಷಣ ಗೌರಿಬಿದನೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿದೆ ಎನ್ನಲಾಗಿದೆ. ಮತ್ತೊಂದೆಡೆ, ನಾಲ್ಕು ವರ್ಷದ ತೇಜಸ್‌ನನ್ನು ತಂದೆ ಹನುಮಂತರಾಯಪ್ಪ ಅವರು ಚಿಕ್ಕಬಳ್ಳಾಪುರ ಆಸ್ಪತ್ರೆಗೆ ಕರೆದೊಯ್ದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.
ತಾಯಿ ಶೈಲಾ ಹಾಗೂ ಇಬ್ಬರು ಮಕ್ಕಳು ಗಂಭೀರ ಸ್ಥಿತಿಯಲ್ಲಿರುವುದರಿಂದ ಕುಟುಂಬಸ್ಥರು ತೀವ್ರ ಆತಂಕದಲ್ಲಿದ್ದಾರೆ. ಘಟನೆಯ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆ ಮಲ್ಲೇನಹಳ್ಳಿಯಲ್ಲಿ ದುಃಖ ಹಾಗೂ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಕೌಟುಂಬಿಕ ಕಲಹವೇ ಈ ಘಟನೆಗೆ ಕಾರಣವೇ? ವಿಷ ಸೇವಿಸುವ ಮುನ್ನ ಕುಟುಂಬದಲ್ಲಿ ಏನಾದರೂ ಘಟನೆ ನಡೆದಿತ್ತೇ? ಎಂಬ ಹಲವು ಪ್ರಶ್ನೆಗಳು ಇದೀಗ ಮೂಡಿವೆ. ಈ ಸಂಬಂಧ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದು, ತನಿಖೆಯ ನಂತರವಷ್ಟೇ ಘಟನೆಯ ಸಂಪೂರ್ಣ ವಿವರ ತಿಳಿದುಬರಬೇಕಿದೆ.
ವರದಿ: ಅವಿನಾಶ್, ಗೌರಿಬಿದನೂರು
ಚಿಕ್ಕಬಳ್ಳಾಪುರ ಜಿಲ್ಲೆ
ಕರ್ನಾಟಕದಲ್ಲಿ ಸ್ವಂತ ಮನೆ ಹಾಗೂ ನಿವೇಶನ ಹೊಂದುವ ಕನಸು ಕಾಣುತ್ತಿರುವ ಬಡ ಮತ್ತು ಶ್ರಮಿಕ ವರ್ಗದ ಜನರಿಗೆ ರಾಜ್ಯ ಸರ್ಕಾರ…
ವಿಚ್ಛೇದನದ ಮೂಲಕ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದ ದಂಪತಿ, ಕೊನೆಯ ಕ್ಷಣದಲ್ಲಿ ಮತ್ತೆ ಒಂದಾದ ಅಪರೂಪದ ಘಟನೆ ಇದೀಗ…
ಬೆಳಗಾವಿ: ಹೆತ್ತವರ ಪ್ರೀತಿಯಂತೆ ಮೊಮ್ಮಗನನ್ನು ಸಾಕಿ ಬೆಳೆಸಿದ್ದ ಅಜ್ಜಿಯನ್ನೇ ಹಣದ ಆಸೆಗೆ ಮೊಮ್ಮಗ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ…
ಹುಬ್ಬಳ್ಳಿ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಕಂ…
ಗೌರಿಬಿದನೂರು: ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯಲ್ಲಿ ಹಾಡಹಗಲೇ ಕಳ್ಳರು ಕಾರಿನ ಗಾಜು ಒಡೆದು 12.20 ಲಕ್ಷ ರೂ. ನಗದು ದೋಚಿ…
ಹಾಸನ: ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿ (RFO) ಹೇಮಂತ್‌ಕುಮಾರ್ ಅವರಿಗೆ ಸಂಬಂಧಿಸಿದ…