ಉತ್ತರ ಪ್ರದೇಶದ ಮೀರತ್‌ನಲ್ಲಿ ಭಾರತೀಯ ಸೈನ್ಯದ ಯೋಧನ ಮೇಲೆ ಟೋಲ್ ಪ್ಲಾಜಾ ಸಿಬ್ಬಂದಿ ನಡೆಸಿದ ಕ್ರೂರ ಹಲ್ಲೆಯ ಘಟನೆ ತೀವ್ರ ಆಕ್ರೋಶ ಮೂಡಿಸಿದೆ.
ಶ್ರೀನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಪಿಲ್ ಕವಾಡ್ ಎಂಬ ಯೋಧ ರಜೆಯ ನಂತರ ಮರಳಿ ಸೇನೆಗೆ ಸೇರಲು ದೆಹಲಿ ವಿಮಾನ ನಿಲ್ದಾಣದತ್ತ ತನ್ನ ಸೋದರಸಂಬಂಧಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ, ಮೀರತ್–ಕರ್ನಾಲ್ ಹೆದ್ದಾರಿಯ ಭುನಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.
ಟೋಲ್ ಪ್ಲಾಜಾದಲ್ಲಿ ವಾಹನಗಳ ಉದ್ದನೆಯ ಸಾಲಿನಿಂದಾಗಿ ಆತುರಗೊಂಡಿದ್ದ ಕಪಿಲ್, ತನ್ನ ಪರಿಸ್ಥಿತಿಯನ್ನು ಸಿಬ್ಬಂದಿಗಳಿಗೆ ವಿವರಿಸಿದರೂ, ಮಾತಿನ ಚಕಮಕಿ ವಾಗ್ವಾದಕ್ಕೆ ತಿರುಗಿತು. ಅಷ್ಟರಲ್ಲೇ ಟೋಲ್ ಪ್ಲಾಜಾದ ಕೆಲವರು ಯೋಧನ ಮೇಲೆ ದಾಳಿ ನಡೆಸಿ, ಕಂಬಕ್ಕೆ ಕಟ್ಟಿ ಕ್ರೂರವಾಗಿ ಥಳಿಸಿದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ.
ಮೀರತ್ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದವರ ಪತ್ತೆಗೆ ಟೋಲ್ ಪ್ಲಾಜಾದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಜೆ ಮುಗಿಸಿ ಕರ್ತವ್ಯಕ್ಕೆ ಮರಳುತ್ತಿದ್ದ ಯೋಧನ ಮೇಲೆ ನಡೆದ ಈ ಹಲ್ಲೆ ಸೈನಿಕರ ಗೌರವದ ಮೇಲಿನ ಅವಮಾನ ಎಂದು ಸಾಮಾಜಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯಾದ್ಯಂತ ವರದಿಗಾರರು ಬೇಕಾಗಿದ್ದಾರೆ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 80 88070392
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…