Latest

ಚಾಕಲೇಟ್ ಕಳವು ಆರೋಪದಲ್ಲಿ ಐದು ಬಾಲಕರನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿಸಿದ ಅಂಗಡಿ ಮಾಲಿಕ

ಬಿಹಾರ್ ರಾಜ್ಯದ ಸೀತಾರ್ಮಹಿಯ ಮಲ್ಲಾಹಿ ಗ್ರಾಮದಲ್ಲಿ ನಡೆದ ಮಾನವೀಯತೆ ಮರೆತ ಘಟನೆ ಇಡೀ ದೇಶದ ಗಮನಸೆಳೆದಿದೆ. ಒಂದಷ್ಟು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪದ ಮೇಲೆ ಐದು ಬಾಲಕರನ್ನು ಬೆತ್ತಲೆಗೊಳಿಸಿ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿರುವ ಕ್ರೂರ ಕೃತ್ಯ ನಡೆಯಿತು.

ಬುಧವಾರ ಸಂಜೆ ದಿನಸಿ ಅಂಗಡಿಯೊಂದರಲ್ಲಿ ಕೆಲವು ಬಾಲಕರು ಚಾಕಲೇಟ್ ಕದ್ದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅಂಗಡಿ ಮಾಲೀಕರಾದ ನಾಗೇಶ್ವರ ಶರ್ಮಾ, ಐದು ಬಾಲಕರನ್ನು ತನ್ನ ಅಂಗಡಿಗೆ ಕರೆದುಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ.

ಹಲ್ಲೆ ವೇಳೆ ಒಬ್ಬ ಬಾಲಕ ತಪ್ಪು ಮಾಡಿಕೊಂಡಿದ್ದು, ಈ ವಿಚಾರದಿಂದ ಮತ್ತಷ್ಟು ಆಕ್ರೋಶಗೊಂಡ ಶರ್ಮಾ, ಐದು ಮಕ್ಕಳ ಬಟ್ಟೆ ಬಿಚ್ಚಿಸಿ, ಅವರ ಮುಖಕ್ಕೆ ಬಿಳಿ ಸುಣ್ಣ ಹಚ್ಚಿಸಿ, ಚಪ್ಪಲಿಯನ್ನು ಕುತ್ತಿಗೆಗೆ ಹಾರವಂತೆ ಹಾಕಿದ್ದಾರೆ. ಬಳಿಕ ಎಲ್ಲರನ್ನು ಒಂದೇ ಹಗ್ಗದಲ್ಲಿ ಕಟ್ಟಿ ಗ್ರಾಮದಲ್ಲಿ ಮೆರವಣಿಗೆ ನಡೆಸಿದ್ದಾರೆ.

ಘಟನೆ ಇಲ್ಲಿಯಲ್ಲೇ ನಿಂತಿಲ್ಲ. ಈ ದೃಶ್ಯಗಳನ್ನು ಶರ್ಮಾ ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಮಾಡಿ, ತಮ್ಮ ಮಗ ಪ್ರಕಾಶ್ ಕುಮಾರ್ ಮತ್ತು ಗ್ರಾಮಸ್ಥ ಕೃಷ್ಣ ಕುಮಾರ್ ಸಹಾಯದಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ವಿಡಿಯೋ ವೈರಲ್ ಆದ ಬಳಿಕ ಸಾರ್ವಜನಿಕರ ಆಕ್ರೋಶ ಜೋರಾಗಿ ವ್ಯಕ್ತವಾಯಿತು. ಸ್ಥಳೀಯ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಈಗಾಗಲೇ ನಿಂದಿತರಾದ ನಾಗೇಶ್ವರ ಶರ್ಮಾ, ಅವರ ಮಗ ಪ್ರಕಾಶ್ ಕುಮಾರ್ ಹಾಗೂ ಕೃಷ್ಣ ಕುಮಾರ್ ಅವರನ್ನು ಬಂಧಿಸಿದ್ದಾರೆ.

ಈ ಘಟನೆಯಿಂದ ಮಕ್ಕಳ ಮೇಲಿನ ಹಿಂಸೆ ಮತ್ತು ಅವಮಾನಕಾರಿ ನಡೆಗಳನ್ನು ತಡೆಗಟ್ಟಲು ಕಠಿಣ ಕ್ರಮ ಅಗತ್ಯ ಎಂಬ ಚರ್ಚೆಗೆ ಮೂಲ ನೀಡಿದ್ದು, ಕಾನೂನಿನಡಿಯಲ್ಲಿ ತಕ್ಷಣದ ಕಠಿಣ ಶಿಕ್ಷೆ ನೀಡಬೇಕೆಂದು ಜನರು ಒತ್ತಾಯಿಸುತ್ತಿದ್ದಾರೆ.

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

5 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago