Latest

ಚಿನ್ನಸಂದ್ರದಲ್ಲಿ ಅಂಗಡಿ ಜಾಗದ ಗಲಾಟೆ: ಎರಡು ಗುಂಪುಗಳ ನಡುವೆ ತೀವ್ರ ಹಲ್ಲೆ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರ ಗ್ರಾಮದಲ್ಲಿ ಅಂಗಡಿ ಜಾಗದ ವಿಚಾರವಾಗಿ ಉದ್ಭವಿಸಿದ ವೈಷಮ್ಯ ಪರಾಕಾಷ್ಠೆಗೆ ತಲುಪಿದ್ದು, ಎರಡು ಗುಂಪುಗಳು ನಡು ರಸ್ತೆಯಲ್ಲೇ ಪರಸ್ಪರ ಹಲ್ಲೆಗೆ ಇಳಿದಿರುವ ಘಟನೆ ಬೆಳಕಿಗೆ ಬಂದಿದೆ.

ಸ್ಥಳೀಯರ ಹೇಳಿಕೆಯಂತೆ, ಅಂಗಡಿಯ ಜಾಗಕ್ಕಾಗಿ ಉಂಟಾದ ವಿವಾದ ತೀವ್ರ ರೂಪ ಪಡೆದು, ಎರಡು ಗುಂಪುಗಳು ರಾಡ್‌ಗಳು ಸೇರಿದಂತೆ ತೀವ್ರವಾಗಿ ಪರಸ್ಪರ ಹಲ್ಲೆ ನಡೆಸಿದವು. ಈ ಗಲಾಟೆಯಲ್ಲಿ ಮಹಿಳೆಯರು ಕೂಡ ಭಾಗವಹಿಸಿದ್ದು, ನಡು ರಸ್ತೆಯಲ್ಲೇ ಹೊಡೆದಾಟ ನಡೆದಿದೆ.

ಘಟನೆಯಲ್ಲಿ ಅಪೀಸ್ ವುಲ್ಲಾಖಾನ್ ಎಂಬುವರ ಮೇಲೆ ಸುಲ್ತಾನ್, ಕೌಸರ್, ಅಲೀಮ್, ನಿಸಾಮ್ ಹಾಗೂ ಇರ್ಪಾನ್ ಎಂಬವರು ಹಲ್ಲೆ ನಡೆಸಿದರೆಂದು ಆರೋಪ ಕೇಳಿ ಬಂದಿದೆ. ಈ ಗಲಾಟೆಯಲ್ಲಿ ಎರಡೂ ಗುಂಪಿನ ಸದಸ್ಯರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಚಿಂತಾಮಣಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಗ್ರಾಮದ ಶಾಂತತೆಗೆ ಧಕ್ಕೆಯಾದ ಈ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago