ಮುಂಡಗೋಡ: ತಾಲೂಕಿನ ಅಂಗಡಿಗಳಿಗೆ ಭೇಟಿ ನೀಡಿ ಅಂಗಡಿ ಮಾಲೀಕರು ಹಾಗೂ ಸಿಬ್ಬಂದಿಯ ಗಮನವನ್ನು ಬೇರೆಡೆ ಸೆಳೆದು ಹಣ, ಒಡವೆ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡುತ್ತಿರುವ ಶಂಕಿತ ಇಬ್ಬರು ವ್ಯಕ್ತಿಗಳ ಕುರಿತು ಮುಂಡಗೋಡ ಪೊಲೀಸರು ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.
ಪೊಲೀಸರ ಮಾಹಿತಿ ಪ್ರಕಾರ, ಫೋಟೋದಲ್ಲಿರುವ ಇಬ್ಬರು ಶಂಕಿತರು ವಿವಿಧ ಅಂಗಡಿಗಳಿಗೆ ತೆರಳಿ ನಾಣ್ಯಗಳನ್ನು ನೀಡಿ ಚಿಲ್ಲರೆ ಅಥವಾ ದೊಡ್ಡ ಮೊತ್ತದ ನೋಟುಗಳನ್ನು ಕೇಳುವುದು, “ಡಿಎಲ್ (DL) ಸೀರೀಸ್ ನೋಟು ಬೇಕು”, “ಹೊಸ ಅಂಗಡಿ ಆರಂಭಿಸುತ್ತಿದ್ದೇವೆ” ಎಂಬಂತಹ ನೆಪಗಳನ್ನು ಹೇಳುವುದು ಸೇರಿದಂತೆ ವಿವಿಧ ರೀತಿಯ ಸಂಭಾಷಣೆಯಲ್ಲಿ ಅಂಗಡಿ ಸಿಬ್ಬಂದಿಯನ್ನು ತೊಡಗಿಸಿಕೊಳ್ಳುತ್ತಾರೆ. ಈ ವೇಳೆ ಅವರ ಗಮನವನ್ನು ಬೇರೆಡೆ ಸೆಳೆದು ಕೌಂಟರ್‌ನಲ್ಲಿರುವ ಹಣ, ಒಡವೆ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂತಹ ಘಟನೆಗಳನ್ನು ತಡೆಯುವ ಉದ್ದೇಶದಿಂದ ಅಂಗಡಿ ಮಾಲೀಕರು ಹಾಗೂ ಸಾರ್ವಜನಿಕರು ಅಪರಿಚಿತ ವ್ಯಕ್ತಿಗಳ ಬಗ್ಗೆ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ. ಅನುಮಾನಾಸ್ಪದ ರೀತಿಯಲ್ಲಿ ವರ್ತಿಸುವ ವ್ಯಕ್ತಿಗಳು ಅಥವಾ ಫೋಟೋದಲ್ಲಿರುವ ಶಂಕಿತರು ಎಲ್ಲಿಯಾದರೂ ಕಂಡುಬಂದರೆ ತಕ್ಷಣ ಮುಂಡಗೋಡ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಅಥವಾ ಪೊಲೀಸ್ ತುರ್ತು ಸಹಾಯವಾಣಿ 112ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಪೊಲೀಸರ ಸಲಹೆ: ಅಂಗಡಿಗಳಿಗೆ ಬರುವ ಅಪರಿಚಿತ ವ್ಯಕ್ತಿಗಳ ಚಲನವಲನವನ್ನು ಸೂಕ್ಷ್ಮವಾಗಿ ಗಮನಿಸಬೇಕು. ಹಣ, ಒಡವೆ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಇರಿಸಿಕೊಳ್ಳಬೇಕು. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೆ ವಿಳಂಬ ಮಾಡದೆ ಪೊಲೀಸರಿಗೆ ಮಾಹಿತಿ ನೀಡಿ ಕಳವು ಪ್ರಕರಣಗಳನ್ನು ತಡೆಗಟ್ಟುವಲ್ಲಿ ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…
ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…