Latest

ಚನ್ನರಾಯಪಟ್ಟಣ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿಗಳ ಕೊರತೆ: ರೋಗಿಗಳಿಗೆ ವೈದ್ಯಕೀಯ ಸೇವೆಯಲ್ಲಿ ವಿಳಂಬ”

ಚನ್ನರಾಯಪಟ್ಟಣ ತಾಲ್ಲೂಕಿನ ಹೋಬಳಿ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಸೇವೆಗಳ ಹಾಜರಾತಿ ಸಮಸ್ಯೆ ಉಂಟಾಗಿದೆ. ಆಸ್ಪತ್ರೆಗೆ ಬರುವ ಬಡ ರೋಗಿಗಳು, ವೈದ್ಯಕೀಯ ಸೇವೆಗಾಗಿ ಅಧಿಕಾರಿಗಳನ್ನು ಹುಡುಕಿದರೂ, ಸಕಾಲದಲ್ಲಿ ವೈದ್ಯಕೀಯ ಸಿಬ್ಬಂದಿ ಲಭ್ಯವಿಲ್ಲ. ಹಾಜರಾತಿ ಪುಸ್ತಕದಲ್ಲಿ ಮೂವರು ಸಿಬ್ಬಂದಿಯ ಸಹಿಯಿದ್ದರೂ, ಕೆಲಸ ಮಾಡುವವರು ಒಂದೇ ವ್ಯಕ್ತಿ ಎಂಬುದು ಬಹಿರಂಗವಾಗಿದೆ. ಈ ಕಾರಣದಿಂದಾಗಿ, ಆಸ್ಪತ್ರೆಗೆ ಬಂದ ಕೆಲವರು ಮಾತ್ರೆಗಳನ್ನು ಪಡೆದು ಹಿಂತಿರುಗುತ್ತಿದ್ದಾರೆ, ಆದರೆ ಸೂಕ್ತ ವೈದ್ಯಕೀಯ ಪರಿಹಾರ ದೊರೆಯುತ್ತಿಲ್ಲ.

ಪ್ರಾಥಮಿಕ ಆರೋಗ್ಯ ಕೇಂದ್ರವು ಬಹುಮಹಡಿಯ ವೆಚ್ಚದಲ್ಲಿ ಆರಂಭಿಸಲಾಗಿದೆ, ಆದರೆ ವೈದ್ಯಕೀಯ ಸಿಬ್ಬಂದಿಯ ಅನಧಿಕೃತ ಗೈರು ಕಾರಣ, ಬಡ ರೋಗಿಗಳು ತೊಂದರೆಯನ್ನು ಅನುಭವಿಸುತ್ತಿದ್ದಾರೆ.

ಯಲಿಯೂರಿನ ಭಾಗ್ಯವಂತ್, ಆಸ್ಪತ್ರೆಯಲ್ಲಿ ಸಿಬ್ಬಂದಿಯ ಕೊರತೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ರು. “ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದಾಗ ಮೂವರು ಸಿಬ್ಬಂದಿ ಸಹಿ ಹಾಕಿದ್ದರೂ, ಕೇವಲ ಒಬ್ಬರೇ ಕೆಲಸ ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕರ್ತವ್ಯದಲ್ಲಿದ್ದ ಸಿಬ್ಬಂದಿ, “ಮಧ್ಯಾಹ್ನ 3ರವರೆಗೆ ಎಲ್ಲಾ ಸಿಬ್ಬಂದಿ ಇದ್ದರು. ಈಗ ಅವರು ಹೊರಗಿನ ಕೆಲಸಕ್ಕೆ ತೆರಳಿದ್ದಾರೆ. ಅವರ ಹತ್ತಿರಗೆ ಹೋಗಿದ್ದು ನನಗೆ ಗೊತ್ತಿಲ್ಲ” ಎಂದರು.

ಈ ಬಗ್ಗೆ ಸ್ಥಳೀಯ ‘ಪ್ರಧಾನ’ ಸಂಸ್ಥೆಯಿಂದ ಪ್ರತಿಕ್ರಿಯಿಸಿದ ತಾಲ್ಲೂಕು ವೈದ್ಯಾಧಿಕಾರಿ ಸಂಜಯ್‌ ಅವರು, “ಈ ಆರೋಗ್ಯ ಕೇಂದ್ರಕ್ಕೆ ನಿಯೋಜಿತ ವೈದ್ಯಾಧಿಕಾರಿ ರಜೆಗೆ ತೆರಳಿದ್ದಾರೆ. ಅವರ ಜಾಗಕ್ಕೆ ಇನ್ನೊಬ್ಬ ವೈದ್ಯಕೀಯ ಸಿಬ್ಬಂದಿಯನ್ನು ತ್ವರಿತವಾಗಿ ನಿಯೋಜಿಸಲಾಗುವುದು. ಈ ಸಮಯದಲ್ಲಿ, ರೋಗಿಗಳಿಗೆ ಯಾವುದೇ ವಿಧವಾದ ವೈದ್ಯಕೀಯ ಸೇವೆಯಲ್ಲಿ ಅಡಚಣೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

nazeer ahamad

Recent Posts

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

59 minutes ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

4 hours ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

9 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

24 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

1 day ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago