ಸಿದ್ದಾಪುರ ತಾಲೂಕಿನ ಶೇಡಿಮನೆ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆಯುವ ಕಾರ್ಯಕ್ಕೆ ಶಂಕರನಾರಾಯಣ ಪೊಲೀಸರು ಶನಿವಾರ ಮುಂಜಾನೆ ತಡೆ ಹಾಕಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಗಳು ಹೊಳೆಯಿಂದ ಮರಳನ್ನು ಅಕ್ರಮವಾಗಿ ತೆಗೆದು, ಮೂರು ಟಿಪ್ಪರ್ ಲಾರಿಗಳಲ್ಲಿ ತುಂಬಿ ಕುಳ್ಳುಂಜೆ ಗ್ರಾಮದ ಬಾಕುಡೆ ಪ್ರದೇಶದಲ್ಲಿ ಇಟ್ಟಿದ್ದರು. ಖಚಿತ ಮಾಹಿತಿಯ ಆಧಾರದ ಮೇಲೆ ಪಿಎಸ್‌ಐ ಯೂನೂಸ್ ಆರ್. ಗಡ್ಡೇಕರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿ, ಮೂರು ಟಿಪ್ಪರ್‌ಗಳನ್ನು ವಶಕ್ಕೆ ಪಡೆದುಕೊಂಡಿದೆ.
ಈ ಪ್ರಕರಣದಲ್ಲಿ ಚರಣ್, ಮಹೇಶ್ ಹಾಗೂ ಸುಧೀರ್ ಎಂಬ ಮೂವರು ವಿರುದ್ಧ ಮರಳು ಕಳ್ಳತನದ ಆರೋಪ ದಾಖಲಿಸಲಾಗಿದೆ. ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…