Categories: CrimeLatest

ಮಗ ತನ್ನಂತಿಲ್ಲವೆಂದು ಕೊಂದೇ ಬಿಟ್ಟ ಪಾಪಿ ತಂದೆ: ವಿಜಯಪುರದಲ್ಲಿ ಅಮಾನವೀಯ ಘಟನೆ..!

ವಿಜಯಪುರ ಜಿಲ್ಲೆಯಲ್ಲಿ ಮಾನವೀಯತೆಯನ್ನು ಕಳೆದುಹೋಗುವಂತೆ ಮಾಡುವ ಕ್ರೂರ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ತನ್ನ ಮಗನು ತನ್ನಂತಿಲ್ಲ ಎಂಬ ಅಸಂಬದ್ಧ ಕಾರಣಕ್ಕೆ ತಂದೆಯೇ ಆರು ವರ್ಷದ ಮಗುವನ್ನು ಹತ್ಯೆ ಮಾಡಿರುವ ಘಟನೆ ಸಮಾಜವನ್ನು ಬೆಚ್ಚಿಬೀಳಿಸಿದೆ.

ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಹತ್ಯೆಗೆ ಗುರಿಯಾದ ಬಾಲಕನಾಗಿದ್ದಾನೆ. ಈ ಪ್ರಕರಣದಲ್ಲಿ ಬಾಲಕನ ತಂದೆ ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಆರೋಪಿ.

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವ ನೆಪದಲ್ಲಿ ಕರೆದುಕೊಂಡು ಹೋದ ಮಲ್ಲಿಕಾರ್ಜುನ, ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಸಮೀಪದ ಕೃಷ್ಣಾ ನದಿಗೆ ಕರೆದುಕೊಂಡು ಹೋಗಿ, ನದಿಗೆ ತಳ್ಳುವ ಮೂಲಕ ಹತ್ಯೆಗೈದಿದ್ದಾನೆ.

ಗ್ರಾಮದಲ್ಲಿ “ಮಗ ನಿನ್ನಂತಿಲ್ಲ” ಎಂದು ಕೆಲವರು ಹಾಸ್ಯ ಮಾಡುತ್ತಿದ್ದುದನ್ನು ಗಂಭೀರವಾಗಿ ತೆಗೆದುಕೊಂಡ ಮಲ್ಲಿಕಾರ್ಜುನ, ತನ್ನದೇ ಮಗನ ವಿರುದ್ಧ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಘಟನೆ ನಂತರ, ಮಗನನ್ನು ಸಿಂದಗಿ ಬಳಿ ಇರುವ ಶಾಲೆಯಲ್ಲಿ ಹಾಸ್ಟೆಲ್‌ಗೆ ಸೇರಿಸಿದ್ದಾಗಿ ಕುಟುಂಬಸ್ಥರಿಗೆ ಸುಳ್ಳು ಹೇಳಿ ತಪ್ಪಿಸಿಕೊಂಡಿದ್ದ. ಆದರೆ ಏಪ್ರಿಲ್ 1ರಂದು ಮಗನ ಹುಟ್ಟುಹಬ್ಬದಂದು ಮನೆಗೆ ಕರೆದುಕೊಂಡು ಬರಬೇಕೆಂದು ತಾಯಿ ಭಾಗ್ಯಶ್ರೀ ಒತ್ತಾಯಿಸಿದ್ದಳು. ಈ ವೇಳೆ ಮಲ್ಲಿಕಾರ್ಜುನ ಮನೆಯಿಂದ ಪರಾರಿಯಾದುದು ಅನುಮಾನಕ್ಕೆ ಕಾರಣವಾಯಿತು.

ತಕ್ಷಣವೇ ತಾಯಿ ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಳು. ನಂತರ ಪೊಲೀಸರು ನಡೆಸಿದ ವಿಚಾರಣೆಯಲ್ಲಿ ಮಲ್ಲಿಕಾರ್ಜುನ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.

ಈ ಘಟನೆ ತಂದೆ-ಮಗ ಸಂಬಂಧದ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಿದ್ದು, ಸಮಾಜದಲ್ಲಿ ಸಂವೇದನೆ ಮತ್ತು ಮೌಲ್ಯಗಳ ಕುಸಿತವನ್ನು ಸ್ಪಷ್ಟಪಡಿಸುತ್ತದೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

19 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago