ಕನ್ನಡ ಮತ್ತು ತೆಲುಗು ಸಂಗೀತ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿರುವ ಗಾಯಕಿ Mangli ಹಾಗೂ ಅವರ ಸಹೋದರನ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ Panjagutta ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ವೋಕೇಟ್ ಸುಬ್ಬಾರಾವ್ ಎಂಬವರು ನೀಡಿದ ದೂರಿನ ಪ್ರಕಾರ, ಮಂಗ್ಲಿ ಮತ್ತು ಅವರ ಸಹೋದರ ಹೂಡಿಕೆ ಹೆಸರಿನಲ್ಲಿ ತಮ್ಮನ್ನೂ ಸೇರಿ ಹಲವು ಹೂಡಿಕೆದಾರರಿಂದ ಒಟ್ಟು ಸುಮಾರು 10 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹೂಡಿಕೆ ಮಾಡುವಂತೆ ನಂಬಿಸಿ ಹಣ ಪಡೆದು ನಂತರ ಮರಳಿ ನೀಡದೆ ಮೋಸ ಮಾಡಿದ್ದಾರೆ ಎನ್ನಲಾಗಿದೆ.
ಇದಲ್ಲದೆ, ವಂಚನೆಗೊಳಗಾದವರು ಸಂಪರ್ಕಿಸಿದಾಗ, ಮಂಗ್ಲಿ ಹಾಗೂ ಅವರ ಸಹೋದರರಿಂದ ಬೆದರಿಕೆ ಕೂಡ ಹಾಕಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಪ್ರಕರಣ ಈಗ ಸಂಗೀತ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲೂ ಚರ್ಚೆಗೆ ಗ್ರಾಸವಾಗಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಆರೋಪಗಳ ನಿಖರತೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.
