ಸೋಮವಾರ ಸಂಜೆ ಮುಂಬೈನ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಠಾಣೆ ಮೆಟ್ಟಿಲೇರಿರುವ ಸೋನಾ ನಿಗಮ್ ದೂರು ದಾಖಲಿಸಿದ್ದಾರೆ.
ಶಿವಸೇನಾ ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು. ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ತಪ್ಪಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.
ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಇಡೀ ಘಟನೆಯಿಂದ ಸೋನು ನಿಗಮ್ ಕಂಬನಿ ಮಿಡಿದಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…