Latest

ಗಾಯಕ ʻಸೋನು ನಿಗಮ್ʼ ಮೇಲೆ ಶಾಸಕನ ಪುತ್ರನಿಂದ ಹಲ್ಲೆ!

ಸೋಮವಾರ ಸಂಜೆ ಮುಂಬೈನ ಚೆಂಬೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಶಿವಸೇನಾ (ಉದ್ಧವ್ ಠಾಕ್ರೆ ಬಣ) ಶಾಸಕ ಪ್ರಕಾಶ್ ಫಟರ್ಪೇಕರ್ ಅವರ ಪುತ್ರ ಸ್ವಪ್ನಿಲ್ ಫಟರ್ಪೇಕರ್ ಅವರು ಗಾಯಕ ಸೋನು ನಿಗಮ್ ಮತ್ತು ಅವರ ತಂಡದ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಚಾರವಾಗಿ ಠಾಣೆ ಮೆಟ್ಟಿಲೇರಿರುವ ಸೋನಾ ನಿಗಮ್ ದೂರು ದಾಖಲಿಸಿದ್ದಾರೆ.
ಶಿವಸೇನಾ ನಾಯಕ ಪ್ರಕಾಶ್ ಫಾಟರ್‌ಪೇಕರ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲು ಸೋನು ನಿಗಮ್ ಚೆಂಬೂರ್‌ಗೆ ಬಂದಿದ್ದರು. ಸೋನು ನಿಗಮ್ ವೇದಿಕೆಯಿಂದ ಕೆಳಗೆ ಹೋಗುತ್ತಿದ್ದಾಗ ಕೆಲವರು ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು. ಆ ವೇಳೆ, ಅವರ ಅಂಗರಕ್ಷಕರು ಆ ಜನರನ್ನು ತಳ್ಳಲು ಪ್ರಯತ್ನಿಸಿದರು. ಆದರೆ, ತಪ್ಪಾಗಿ ಸೋನು ನಿಗಮ್ ತಂಡದ ಒಬ್ಬ ವ್ಯಕ್ತಿಯನ್ನು ತಪ್ಪಾಗಿ ತಳ್ಳಲಾಯಿತು. ಅವರಿಗೆ ಏನೂ ಆಗಿಲ್ಲ’ ಎಂದು ಶಿವಸೇನೆ ನಾಯಕ ಪ್ರಕಾಶ್ ಫಾಟರ್‌ಪೇಕರ್ ಹೇಳಿದ್ದಾರೆ.
ಸೋನು ನಿಗಮ್ ಕಾರ್ಯಕ್ರಮ ಮುಗಿಸಿ ವೇದಿಕೆಯಿಂದ ಕೆಳಗೆ ಬರುತ್ತಿದ್ದಾಗ ಶಾಸಕ ಫಾಟರ್‌ಪೇಕರ್ ಅವರ ಪುತ್ರ ಮೊದಲು ಸೋನು ನಿಗಮ್ ಅವರ ಅಂಗರಕ್ಷಕ ಹರಿ ಅವರನ್ನು ತಳ್ಳಿ ನಂತರ, ಸೋನು ಅವರನ್ನು ತಳ್ಳಿದ್ದಾರೆ. ಈ ಸಮಾರಂಭದಲ್ಲಿ ಸೋನು ನಿಗಮ್ ಅವರ ಸ್ನೇಹಿತ ರಬ್ಬಾನಿ ಖಾನ್ ಕೂಡ ಉಪಸ್ಥಿತರಿದ್ದರು. ಮಾತಿನ ಚಕಮಕಿಯಲ್ಲಿ ರಬ್ಬಾನಿ ವೇದಿಕೆಯಿಂದ ಕೆಳಗೆ ಬಿದ್ದಿದ್ದಾರೆ. ಅವರಿಗೆ ಹಲವು ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಚೆಂಬೂರಿನ ಝೆನ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಇಡೀ ಘಟನೆಯಿಂದ ಸೋನು ನಿಗಮ್ ಕಂಬನಿ ಮಿಡಿದಿದ್ದಾರೆ. ಅವರಿಗೆ ಯಾವುದೇ ರೀತಿಯ ಗಾಯವಾಗಿಲ್ಲ. ರಬ್ಬಾನಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

6 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

1 day ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago