Categories: CinemaLatest

41ರಲ್ಲೂ ಸಿಂಗಲ್! ಪ್ರೀತಿಗಾಗಿ ಇನ್‌ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡಿ ಎಂದ ನಟಿ ರೇಖಾ ವೇದವ್ಯಾಸ್

ಒಂದು ಕಾಲದಲ್ಲಿ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ತಮ್ಮ ಸೌಂದರ್ಯ ಹಾಗೂ ಅಭಿನಯದಿಂದ ಮಿಂಚಿದ್ದ ನಟಿ ರೇಖಾ ವೇದವ್ಯಾಸ್ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಕನ್ನಡದ ಹುಚ್ಚ, ಚೆಲ್ಲಾಟ, ಹುಡುಗಾಟ, ಬಾಸ್ ಹಾಗೂ ತೆಲುಗಿನ ಆನಂದಂ ಸಿನಿಮಾಗಳ ಮೂಲಕ ಅಪಾರ ಜನಪ್ರಿಯತೆ ಗಳಿಸಿದ್ದ ಅವರು, ಇದೀಗ ತಮ್ಮ ವೈಯಕ್ತಿಕ ಜೀವನ ಮತ್ತು ಸಿನಿಮಾ ರೀ-ಎಂಟ್ರಿ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ.

2001ರಲ್ಲಿ ಬಿಡುಗಡೆಯಾದ ಆನಂದಂ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ರೇಖಾ, ಬಳಿಕ ಕನ್ನಡದಲ್ಲಿ ಕಿಚ್ಚ ಸುದೀಪ್, ದರ್ಶನ್ ಹಾಗೂ ಗಣೇಶ್ ಅವರೊಂದಿಗೆ ನಟಿಸಿ ಯಶಸ್ಸಿನ ಶಿಖರಕ್ಕೇರಿದ್ದರು. ನಂತರ ಆರೋಗ್ಯ ಸಮಸ್ಯೆಗಳ ಕಾರಣದಿಂದ ಕೆಲ ವರ್ಷಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದ ಅವರು, ಇದೀಗ ಮತ್ತೆ ಬಣ್ಣದ ಲೋಕಕ್ಕೆ ಮರಳಲು ಸಜ್ಜಾಗಿದ್ದಾರೆ.

ಪ್ರಸ್ತುತ 41 ವರ್ಷದ ರೇಖಾ ವೇದವ್ಯಾಸ್ ಇನ್ನೂ ವಿವಾಹವಾಗಿಲ್ಲ. ಈ ಕುರಿತು ಮಾತನಾಡಿದ ಅವರು, “ಸಲ್ಮಾನ್ ಖಾನ್ ಅವರಂತೆ ನಾನೂ ಜೀವನಪೂರ್ತಿ ಸಿಂಗಲ್ ಆಗಿಯೇ ಉಳಿದುಬಿಡುತ್ತೇನೋ ಎಂಬ ಅನಿಸಿಕೆ ಬರುತ್ತಿದೆ. ಹಿಂದೆ ಒಬ್ಬರನ್ನು ತುಂಬಾ ಇಷ್ಟಪಟ್ಟಿದ್ದೆ. ಆದರೆ ನನ್ನ ಪ್ರೀತಿಯನ್ನು ಅವರಿಗೆ ಹೇಳುವ ಧೈರ್ಯ ಆಗಲಿಲ್ಲ. ನಂತರ ನನಗೆ ಮನಸ್ಸಿಗೆ ಇಷ್ಟವಾಗುವಂತಹ ವ್ಯಕ್ತಿ ಸಿಗಲಿಲ್ಲ. ನನ್ನ ಬಗ್ಗೆ ಹಲವು ಊಹಾಪೋಹಗಳು ಹರಿದಾಡಿದರೂ, ನಿಜವಾಗಿ ನಾನು ಇನ್ನೂ ಸಿಂಗಲ್ ಆಗಿದ್ದೇನೆ” ಎಂದು ಹೇಳಿದ್ದಾರೆ.

ಇದೇ ವೇಳೆ, “ಈ ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ. ನಾನೂ ಪರಿಪೂರ್ಣಳಲ್ಲ. ಆದರೆ ನನ್ನನ್ನು ಪ್ರಾಮಾಣಿಕವಾಗಿ ಪ್ರೀತಿಸುವ, ಗೌರವಿಸುವ ಒಳ್ಳೆಯ ವ್ಯಕ್ತಿ ಬೇಕು. ಅಂತಹವರು ಇದ್ದರೆ ಇನ್‌ಸ್ಟಾಗ್ರಾಂನಲ್ಲಿ ನನಗೆ ಮೆಸೇಜ್ ಮಾಡಬಹುದು. ಅವರ ವ್ಯಕ್ತಿತ್ವ ನನಗೆ ಇಷ್ಟವಾದರೆ ಖಂಡಿತವಾಗಿ ಪ್ರತಿಕ್ರಿಯಿಸುತ್ತೇನೆ. ಪ್ರೀತಿಯಲ್ಲಿ ತಾಳ್ಮೆ, ನಂಬಿಕೆ ಮತ್ತು ಪಾವಿತ್ರ್ಯತೆ ಇರಬೇಕು ಎಂಬುದು ನನ್ನ ನಂಬಿಕೆ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ರೇಖಾ, ತಮ್ಮ ಹೊಸ ಫೋಟೋಗಳು ಮತ್ತು ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದು, ವಿವಿಧ ಸಂದರ್ಶನಗಳ ಮೂಲಕ ಚಿತ್ರರಂಗದಲ್ಲಿ ಮತ್ತೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಅವರ ಈ ಹೇಳಿಕೆಗಳು ಸದ್ಯ ಸ್ಯಾಂಡಲ್‌ವುಡ್ ಮತ್ತು ಟಾಲಿವುಡ್ ವಲಯದಲ್ಲಿ ಸಾಕಷ್ಟು ವೈರಲ್ ಆಗಿವೆ.

ಭ್ರಷ್ಟರ ಬೇಟೆ

Recent Posts

25 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಗುಜರಾತ್‌ನಲ್ಲಿ ಬಂಧನ

ಯಲ್ಲಾಪುರ: 2001ರಲ್ಲಿ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 25 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು…

12 hours ago

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

14 hours ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

2 days ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

2 days ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

2 days ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

2 days ago