Categories: CrimeLatest

ಅಣ್ಣ ಕೊಲೆ ಮಾಡಿದ ಎಂದು ತಂಗಿ, ಕೊಲೆ ಮಾಡಿರುವುದು ತಂಗಿ ಎಂದು ಅಣ್ಣ: ಹಾವೇರಿಯಲ್ಲಿ ತಂದೆಯ ಸಾವಿನ ಸುತ್ತ ಅನುಮಾನಗಳ ಗೂಡು

ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ನಡೆದ ಒಂದು ಘಟನೆ ಕುಟುಂಬ ಸಂಬಂಧಗಳಿಗಿಂತ ಆಸ್ತಿ ವಿವಾದವೇ ಎಷ್ಟು ಭೀಕರ ಮಟ್ಟಕ್ಕೆ ಹೋಗಬಹುದು ಎಂಬುದನ್ನು ತೋರಿಸಿದೆ. 75 ವರ್ಷದ ವೃದ್ಧ ಗುರುಬಸಪ್ಪ ಬಸಾಪುರ ಅವರ ಸಾವಿನ ಬಳಿಕ, ಅವರ ಪುತ್ರ ಮತ್ತು ಪುತ್ರಿಯರ ನಡುವೆ ತೀವ್ರ ಆರೋಪ-ಪ್ರತಾರೋಪಗಳು ಕೇಳಿಬಂದಿದ್ದು, ಪ್ರಕರಣ ಇದೀಗ ಪೊಲೀಸ್ ತನಿಖೆಯ ಹಂತ ತಲುಪಿದೆ.
ಗುರುಬಸಪ್ಪ ಅವರಿಗೆ ರವಿ ಬಸಾಪುರ ಎಂಬ ಪುತ್ರ ಹಾಗೂ ರೇಖಾ, ಸುಜಾತಾ, ಗಿರಿಜಾ ಮತ್ತು ಪಾರ್ವತಿ ಎಂಬ ನಾಲ್ವರು ಪುತ್ರಿಯರಿದ್ದಾರೆ. ಕುಟುಂಬದ ಬಳಿ ಸುಮಾರು 27 ಎಕರೆ ಜಮೀನಿದ್ದು, ಇತ್ತೀಚೆಗೆ ಗುರುಬಸಪ್ಪ ಅವರು ತಮ್ಮ ಹೆಣ್ಣುಮಕ್ಕಳಿಗೂ ಆಸ್ತಿಯಲ್ಲಿ ಪಾಲು ನೀಡಿದ್ದರು ಎನ್ನಲಾಗಿದೆ. ಈ ಆಸ್ತಿ ಹಂಚಿಕೆ ವಿಚಾರವಾಗಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಉಂಟಾಗಿ, ವಿಷಯ ಸಿವಿಲ್ ಕೋರ್ಟ್‌ಗೂ ಹೋಗಿತ್ತು.
ಈ ಮಧ್ಯೆ ಜೂನ್ 15ರಂದು ಗುರುಬಸಪ್ಪ ಅವರು ತಮ್ಮ ತೋಟದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿದ್ದರು. ಆರಂಭದಲ್ಲಿ ಕುಟುಂಬದವರು ಅಂತ್ಯಸಂಸ್ಕಾರ ನೆರವೇರಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ಪ್ರಕರಣ ಹೊಸ ತಿರುವು ಪಡೆದುಕೊಂಡಿತು.
ಗುರುಬಸಪ್ಪ ಅವರ ಪುತ್ರಿಯರು, “ತಂದೆ ನಮಗೂ ಆಸ್ತಿ ಪಾಲು ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದ ಅಣ್ಣ ರವಿಯೇ ತಂದೆಯನ್ನು ಕೊಲೆ ಮಾಡಿದ್ದಾರೆ” ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಇದಕ್ಕೆ ಪ್ರತಿಯಾಗಿ ರವಿ ಬಸಾಪುರ, “ನಾನು ಯಾವುದೇ ಕೊಲೆ ಮಾಡಿಲ್ಲ. ತಂಗಿಯರೇ ಆಸ್ತಿ ದುರಾಸೆಯಿಂದ ತಂದೆಯನ್ನು ಕೊಂದು, ಪ್ರಕರಣವನ್ನು ನನ್ನ ಮೇಲೆ ಹೊರಿಸಲು ಯತ್ನಿಸುತ್ತಿದ್ದಾರೆ” ಎಂದು ಪ್ರತಿದೂರು ದಾಖಲಿಸಿದ್ದಾರೆ.
ಕುಟುಂಬ ಸದಸ್ಯರ ಪರಸ್ಪರ ಆರೋಪಗಳಿಂದ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತಹಶೀಲ್ದಾರ್ ರವಿಕುಮಾರ್ ಕೊರವರ ಅವರ ಸಮ್ಮುಖದಲ್ಲಿ, ವಾರದ ಹಿಂದೆ ಸಮಾಧಿ ಮಾಡಲಾಗಿದ್ದ ಗುರುಬಸಪ್ಪ ಅವರ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ವೈದ್ಯಕೀಯ ವರದಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.
ಗುರುಬಸಪ್ಪ ಅವರ ಸಾವು ಸಹಜವಾಗಿತ್ತೇ, ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಪ್ರಶ್ನೆಗೆ ಇದೀಗ ಪೋಸ್ಟ್‌ಮಾರ್ಟಂ ವರದಿಯೇ ಸ್ಪಷ್ಟ ಉತ್ತರ ನೀಡಬೇಕಾಗಿದೆ.
ಈ ಘಟನೆ ಕುಟುಂಬ ಬಾಂಧವ್ಯ ಮತ್ತು ಆಸ್ತಿ ವಿಚಾರಗಳು ಹೇಗೆ ಕಾನೂನು ಹೋರಾಟ ಹಾಗೂ ಅನುಮಾನಗಳ ಮಟ್ಟಕ್ಕೆ ತಲುಪುತ್ತವೆ ಎಂಬುದರ ಕುರಿತಾಗಿ ಸಮಾಜದಲ್ಲಿ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago