Latest

ಅಕ್ಕನ ಕಾಮದಾಟಕ್ಕೆ ತಮ್ಮ ಬಲಿ!

ಯುವತಿಯೊಬ್ಬಳು ತನ್ನ ಪ್ರಿಯತಮನೊಂದಿಗೆ ಸರಸವಾಡುತ್ತಿದ್ದದ್ದನ್ನು ಅಪ್ರಾಪ್ತ ವಯಸ್ಸಿನ ತಮ್ಮ ನೋಡಿದನೆಂದು ಬರ್ಬರವಾಗಿ ಕೊಲೆ ಮಾಡಿರುವ ಭಯಾನಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ರಾಯ್ಬರೇಲಿ ಜಿಲ್ಲೆಯ ಭಡೋಖರ್ ಬಳಿಯ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. ತಂದೆ ತಾಯಿಯು 18 ವರ್ಷದ ಮಗಳೊಂದಿಗೆ 12 ವರ್ಷದ ಮಗನನ್ನು ಬಿಟ್ಟು ಬೇರೆ ಊರಿಗೆ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದರು. ಆಗ ಯುವತಿ ತನ್ನ ಪ್ರಿಯಕರನನ್ನು ಮನೆಗೆ ಕರೆಸಿಕೊಂಡು ಸರಸವಾಡುವುದಕ್ಕೆ ಆರಂಭಿಸಿದ್ದಾಳೆ. ಇದನ್ನು ಕಂಡ ಆಕೆಯ ತಮ್ಮ ಈ ವಿಚಾರವನ್ನು ಅಪ್ಪ ಅಮ್ಮನಿಗೆ ಹೇಳುವುದಾಗಿ ಹೇಳಿದ್ದಾನೆ. ಆ ಹಿನ್ನೆಲೆ ಯುವತಿ ಪ್ರಿಯಕರನೊಂದಿಗೆ ಸೇರಿಕೊಂಡು ಮನೆಯಲ್ಲಿದ್ದ ಕುಡಗೋಲಿನಿಂದ ತಮ್ಮನ ಕುತ್ತಿಗೆಯನ್ನು ಕತ್ತರಿಸಿದ್ದಾಳೆ. ಬಾಲಕ ಕೊಲೆಯಾಗಿರುವ ವಿಚಾರವನ್ನು ಸ್ಥಳೀಯರು ಪೊಲೀಸರಿಗೆ ತಲುಪಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ವಿಚಾರಿಸಿದಾಗ ಯುವತಿ, ಅದೇ ಊರಿನ ಯುವಕನೊಬ್ಬ ಮನೆಗೆ ನುಗ್ಗಿ ದರೋಡೆಗೆ ಯತ್ನಿಸಿದ್ದಾಗಿ, ದರೋಡೆಗೆ ಏನೂ ಸಿಗದ ಕಾರಣ ತಮ್ಮನನ್ನು ಕೊಂದಿದ್ದಾಗಿ ಹೇಳಿದ್ದಾಳೆ. ಯುವತಿ ಹೇಳಿದ ಯುವಕನನ್ನು ಕರೆಸಿ ವಿಚಾರಣೆ ನಡೆಸಿದಾಗ ಆತ ಘಟನೆ ನಡೆದ ಸಮಯದಲ್ಲಿ ಲಕ್ನೋದಲ್ಲಿ ಇದ್ದದ್ದು ತಿಳಿದುಬಂದಿದೆ. ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಹಾಗೂ ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ.

ಭ್ರಷ್ಟರ ಬೇಟೆ

Recent Posts

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

24 hours ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

1 day ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

1 day ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

1 day ago

10ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಇಬ್ಬರು ಆರೋಪಿಗಳಿಗೆ ಪೊಲೀಸರ ಗುಂಡೇಟು

ಜಮುಯಿ: ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ, ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ…

1 day ago

ಪ್ರಿಯಕರನ ಜೊತೆ OYO ರೂಂಗೆ ಬಂದ ಯುವತಿ ಅನುಮಾನಾಸ್ಪದ ಸಾವು: ಆಸ್ಪತ್ರೆಯಿಂದಲೇ ಪ್ರಿಯಕರ ಪರಾರಿ

ಹೈದರಾಬಾದ್: ನಗರದ ಪ್ರಮುಖ ಐಟಿ ಹಬ್ ಮಾದಾಪುರದಲ್ಲಿ ಯುವತಿಯೊಬ್ಬಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಪ್ರಿಯಕರನೊಂದಿಗೆ OYO…

1 day ago