Latest

ಶೌಚಾಲಯದ ಗುಂಡಿಯಿಂದ ತಲೆ ಬುರುಡೆ ಪತ್ತೆ: ಅನುಮಾನಾಸ್ಪದ ಸಾವಿನ ತನಿಖೆ ಶುರು

ಚಿನ್ನಪ್ಪರಪಾಳ್ಯದಲ್ಲಿ ಮನೆಯೊಂದರ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡು ಪತ್ತೆಯಾದ ಘಟನೆ ಗ್ರಾಮದ ಜನರಲ್ಲಿ ಆತಂಕ ಹುಟ್ಟಿಸಿದೆ.

ಈ ವಿಷಯವನ್ನು ಪ್ರಾಥಮಿಕವಾಗಿ ಗ್ರಾಮಸ್ಥ ಪ್ರವೀಣ್ ಕುಮಾರ್ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ನಂತರ ಡಿವೈಎಸ್ಪಿ ಗೋಪಾಲ್ ಹಾಗೂ ವೃತ್ತ ನಿರೀಕ್ಷಕ ಶಬ್ಬೀರ್ ಹುಸೇನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕುಟುಂಬದ ಹಿನ್ನೆಲೆ:

ಮೃತರ ಕುಟುಂಬದ ಪ್ರಕಾರ, ಈ ಮನೆಯಲ್ಲಿ ಮುನ್ನೂರ ತಿಂಗಳ ಹಿಂದೆ ಮೃತಪಟ್ಟ ಜಾಕೂಬ್ ಹಾಗೂ ಆತನ ಹಿರಿಯ ಪುತ್ರ ದಾಸ್ ಪ್ರಕಾಶ್ ವಾಸವಾಗಿದ್ದರು. ಆದರೆ, ದಾಸ್ ಪ್ರಕಾಶ್ ಕಳೆದ 6 ತಿಂಗಳಿನಿಂದ ಕಾಣೆಯಾಗಿದ್ದಾರೆ. ಈ ಬಗ್ಗೆ ಅವರ ಪತ್ನಿ, ಬೆಂಗಳೂರಿನಲ್ಲಿ ಮಕ್ಕಳೊಂದಿಗೆ ವಾಸಿಸುತ್ತಿರುವವರು, ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಈ ಮನೆಯ ಪಕ್ಕದಲ್ಲಿನ ಶೌಚಾಲಯದ ಗುಂಡಿಯಲ್ಲಿ ತಲೆ ಬುರುಡೆ ಮತ್ತು ಮೂಳೆ ತುಂಡುಗಳು ಪತ್ತೆಯಾಗಿದ್ದು, ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಪೊಲೀಸರ ಸ್ಪಷ್ಟನೆ:

ಪೊಲೀಸರು ಈಗಾಗಲೇ ಕುಟುಂಬದ ಸದಸ್ಯರ ವಿಚಾರಣೆ ನಡೆಸಿದ್ದು, ಪತ್ತೆಯಾದ ಅಂಗಾಂಗ ಅವಶೇಷಗಳನ್ನು ಡಿಎನ್‌ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಪರೀಕ್ಷಾ ವರದಿ ಬಂದ ಬಳಿಕ ಮುಂದಿನ ಹಂತದ ತನಿಖೆ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಈ ದಾರಿ ಹೇಗೆ ತಲುಪಿತು? ಇದು ಯಾರದಾಗಿದೆ? ಅಪರಾಧ ನಡೆದಿದೆಯಾ? ಎಂಬ ಪ್ರಶ್ನೆಗಳಿಗೆ ಮುಂದಿನ ತನಿಖೆ ಸ್ಪಷ್ಟ ಉತ್ತರ ನೀಡಲಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

3 days ago