ತಿಮ್ಮೇಗೌಡ ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್‌ 21ರಂದು ಧನ್ವೀರ್‌ ಮೈಸೂರಿಗೆ ತೆರಳಿದ್ದ ಸಂದರ್ಭದಲ್ಲಿ ವಿಜಯಲಕ್ಷ್ಮೀ ದರ್ಶನ್‌ ಮತ್ತು ನಾಗರಾಜ್‌ ಅವರ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಮಾತಿನ ಚಕಮಕಿ ನಡೆದಿದ್ದು, ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ವಿಜಯಲಕ್ಷ್ಮೀ ಮತ್ತು ನಾಗರಾಜ್‌ ಸೇರಿದಂತೆ ನಾಲ್ವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಮಾಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನೊಂದೆಡೆ, ದೂರವಾಣಿ ಕರೆಯಲ್ಲಿ ಧನ್ವೀರ್‌ ತಮ್ಮನ್ನು ನಿಂದಿಸಿ ಬೆದರಿಕೆ ಹಾಕಿದ್ದಾರೆ ಎಂದು ನಾಗರಾಜ್‌ ಆರೋಪಿಸಿದ್ದಾರೆ. ಈ ಸಂಬಂಧ ಆಡಿಯೋ ದಾಖಲೆಯನ್ನೂ ಪೊಲೀಸರಿಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಆರಂಭವಾದ ಪರೋಕ್ಷ ವಾಗ್ವಾದ ಇದೀಗ ಎರಡೂ ಕಡೆಯವರ ಪೊಲೀಸ್‌ ದೂರುಗಳವರೆಗೆ ತಲುಪಿದೆ. ಧನ್ವೀರ್‌ ಕುಟುಂಬದ ಆರೋಪಗಳು ಮತ್ತು ನಾಗರಾಜ್‌ ಅವರ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಕುತೂಹಲ ಮೂಡಿಸಿದೆ. ವಿವಾದದ ಹಿಂದಿನ ನೈಜ ಸಂಗತಿಗಳು ಪೊಲೀಸ್‌ ತನಿಖೆಯಿಂದ ಹೊರಬರಬೇಕಿದೆ.

Related News

error: Content is protected !!