ಹುಣಸಗಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜುಮಾಲಾಪುರ ದೊಡ್ಡ ತಾಂಡಾ ಮೂಲದ ಯೋಧ ವೆಂಕಟೇಶ್ ಎಂ. ರಾಠೋಡ (28) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸಿಕ್ಕಿಂನಿಂದ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಡೆಂಗ್ಯೂ ಸೋಂಕು ತೀವ್ರಗೊಂಡ ಪರಿಣಾಮ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಪ್ರಾಣ ತ್ಯಜಿಸಿದರು.
ಸೈನಿಕ ಸೇವೆ ಹಾಗೂ ರಜೆ ಪ್ರವಾಸ
ವೆಂಕಟೇಶ್ ಕಳೆದ ನಾಲ್ಕು ವರ್ಷಗಳಿಂದ ಸಿಕ್ಕಿಂನಲ್ಲಿ 11ನೇ ಬೆಟಾಲಿಯನ್ ಐಟಿಬಿಪಿ (ITBP) ಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಅವರನ್ನು ರಾಜಸ್ಥಾನದಲ್ಲಿನ 42ನೇ ಬೆಟಾಲಿಯನ್‌ಗೆ ವರ್ಗಾವಣೆ ಮಾಡಲಾಗಿತ್ತು. ಹೊಸ ಪೋಸ್ಟಿಂಗ್‌ಗೆ ತೆರಳುವ ಮುನ್ನ ಜರ್ನಿ ಪ್ರಡ್ ಅಡಿಯಲ್ಲಿ 15 ದಿನಗಳ ರಜೆ ಪಡೆದು ಸ್ವಗ್ರಾಮ ಜುಮಾಲಾಪುರಕ್ಕೆ ಬಂದಿದ್ದರು.
ಆರೋಗ್ಯ ಏಳಿಲ್ಲ, ಡೆಂಗ್ಯೂ ಪತ್ತೆ
ರಜೆ ಅವಧಿಯಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ತಪಾಸಣೆಯಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ತುರ್ತು ಚಿಕಿತ್ಸೆಗಾಗಿ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.
ಪಾರ್ಥಿವ ಶರೀರದ ಮೆರವಣಿಗೆ ಮತ್ತು ಅಂತಿಮ ದರ್ಶನ
ಮೃತದೇಹವನ್ನು ಬಾಗಲಕೋಟೆ ಆಸ್ಪತ್ರೆಯಿಂದ ಅವರ ತಾಂಡಾದ ತನಕ ಆಂಬುಲೆನ್ಸ್ ಮೂಲಕ ಸಾಗಿಸಲಾಗಿತ್ತು. ಈ ವೇಳೆ ಗ್ರಾಮಸ್ಥರು “ವೆಂಕಟೇಶ್ ಅಮರ್ ರಹೇ”, “ಭಾರತ್ ಮಾತಾಕಿ ಜೈ” ಘೋಷಣೆಗಳನ್ನು ಮೊಳಗಿಸಿದರು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಸ್ಥಳೀಯರು ಭಾವುಕರಾಗಿ ಪಾಲ್ಗೊಂಡರು.
ಪತ್ನಿ ಹಾಗೂ ಕುಟುಂಬದ ಆಕ್ರಂದನ
ಅಂತಿಮ ದರ್ಶನದ ವೇಳೆಯಲ್ಲಿ ವೆಂಕಟೇಶ್ ಪತ್ನಿ ಮತ್ತು ಕುಟುಂಬಸ್ಥರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು. ಯೋಧನ ಅಗಲಿಕೆಯಿಂದ ಪೂರ್ಣ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿತ್ತು. ಅಂತಿಮ ದರ್ಶನಕ್ಕಾಗಿ ನಾರಾಯಣಪುರದ ಹೊರವಲಯದಲ್ಲಿ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿತ್ತು.
ಶಾಸಕರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಗೌರವ
ಹುಣಸಗಿ ತಹಶೀಲ್ದಾರ್ ಹುಸೇನಾ.ಎ. ಸರ್ಕಾವಾಸ್, ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಸಿಪಿಐ ರವಿಕುಮಾರ್ ಹಾಗೂ ಕೊಡೇಕಲ್ ಪಿಎಸ್‌ಐ ಅಯ್ಯಣ್ಣ ಅವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಬಂದೋಬಸ್ತಿನ ಜವಾಬ್ದಾರಿಯನ್ನು ಹೊತ್ತುಕೊಂಡರು. ಮೃತ ಯೋಧನಿಗೆ ಅವರು ಅಂತಿಮ ನಮನ ಸಲ್ಲಿಸಿದರು.
ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಪೂರ್ಣ ಸರ್ಕಾರಿ ಗೌರವಗಳೊಂದಿಗೆ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಜುಮಾಲಾಪುರದಲ್ಲಿ ನೆರವೇರಿತು. ಈ ಸಂದರ್ಭ ಗ್ರಾಮಸ್ಥರು, ಸುತ್ತಮುತ್ತಲಿನ ಮಠಾಧೀಶರು, ಮತ್ತು ಸಾರ್ವಜನಿಕರು ಭಾಗವಹಿಸಿ ತಮ್ಮ ಶ್ರದ್ಧಾಂಜಲಿಯನ್ನು ಅರ್ಪಿಸಿದರು.
ವರದಿ: ದಾವಲಸಾಬ್
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…