Latest

ಅನಾರೋಗ್ಯದಿಂದ ಯೋಧನ ದುಃಖದ ಮರಣ: ಗ್ರಾಮಸ್ಥರಿಂದ ಕಣ್ಣೀರು ಪೂರ್ವಕ ಶ್ರದ್ಧಾಂಜಲಿ

ಹುಣಸಗಿ: ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಜುಮಾಲಾಪುರ ದೊಡ್ಡ ತಾಂಡಾ ಮೂಲದ ಯೋಧ ವೆಂಕಟೇಶ್ ಎಂ. ರಾಠೋಡ (28) ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಸಿಕ್ಕಿಂನಿಂದ ರಜೆ ಮೇಲೆ ಸ್ವಗ್ರಾಮಕ್ಕೆ ಬಂದಿದ್ದರು. ಆದರೆ ಡೆಂಗ್ಯೂ ಸೋಂಕು ತೀವ್ರಗೊಂಡ ಪರಿಣಾಮ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಪ್ರಾಣ ತ್ಯಜಿಸಿದರು.

ಸೈನಿಕ ಸೇವೆ ಹಾಗೂ ರಜೆ ಪ್ರವಾಸ
ವೆಂಕಟೇಶ್ ಕಳೆದ ನಾಲ್ಕು ವರ್ಷಗಳಿಂದ ಸಿಕ್ಕಿಂನಲ್ಲಿ 11ನೇ ಬೆಟಾಲಿಯನ್ ಐಟಿಬಿಪಿ (ITBP) ಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇತ್ತೀಚೆಗೆ ಅವರನ್ನು ರಾಜಸ್ಥಾನದಲ್ಲಿನ 42ನೇ ಬೆಟಾಲಿಯನ್‌ಗೆ ವರ್ಗಾವಣೆ ಮಾಡಲಾಗಿತ್ತು. ಹೊಸ ಪೋಸ್ಟಿಂಗ್‌ಗೆ ತೆರಳುವ ಮುನ್ನ ಜರ್ನಿ ಪ್ರಡ್ ಅಡಿಯಲ್ಲಿ 15 ದಿನಗಳ ರಜೆ ಪಡೆದು ಸ್ವಗ್ರಾಮ ಜುಮಾಲಾಪುರಕ್ಕೆ ಬಂದಿದ್ದರು.

ಆರೋಗ್ಯ ಏಳಿಲ್ಲ, ಡೆಂಗ್ಯೂ ಪತ್ತೆ
ರಜೆ ಅವಧಿಯಲ್ಲಿ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮೊದಲು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ತಪಾಸಣೆಯಲ್ಲಿ ಡೆಂಗ್ಯೂ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ತುರ್ತು ಚಿಕಿತ್ಸೆಗಾಗಿ ಬಾಗಲಕೋಟೆಯ ಕೆರೋಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಬುಧವಾರ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾದರು.

ಪಾರ್ಥಿವ ಶರೀರದ ಮೆರವಣಿಗೆ ಮತ್ತು ಅಂತಿಮ ದರ್ಶನ
ಮೃತದೇಹವನ್ನು ಬಾಗಲಕೋಟೆ ಆಸ್ಪತ್ರೆಯಿಂದ ಅವರ ತಾಂಡಾದ ತನಕ ಆಂಬುಲೆನ್ಸ್ ಮೂಲಕ ಸಾಗಿಸಲಾಗಿತ್ತು. ಈ ವೇಳೆ ಗ್ರಾಮಸ್ಥರು “ವೆಂಕಟೇಶ್ ಅಮರ್ ರಹೇ”, “ಭಾರತ್ ಮಾತಾಕಿ ಜೈ” ಘೋಷಣೆಗಳನ್ನು ಮೊಳಗಿಸಿದರು. ಮೆರವಣಿಗೆಯಲ್ಲಿ ಮಾಜಿ ಸೈನಿಕರು, ಸ್ಥಳೀಯರು ಭಾವುಕರಾಗಿ ಪಾಲ್ಗೊಂಡರು.

ಪತ್ನಿ ಹಾಗೂ ಕುಟುಂಬದ ಆಕ್ರಂದನ
ಅಂತಿಮ ದರ್ಶನದ ವೇಳೆಯಲ್ಲಿ ವೆಂಕಟೇಶ್ ಪತ್ನಿ ಮತ್ತು ಕುಟುಂಬಸ್ಥರ ಆಕ್ರಂದನ ಹೃದಯ ವಿದ್ರಾವಕವಾಗಿತ್ತು. ಯೋಧನ ಅಗಲಿಕೆಯಿಂದ ಪೂರ್ಣ ಗ್ರಾಮದಲ್ಲಿ ದುಃಖದ ಛಾಯೆ ಆವರಿಸಿತ್ತು. ಅಂತಿಮ ದರ್ಶನಕ್ಕಾಗಿ ನಾರಾಯಣಪುರದ ಹೊರವಲಯದಲ್ಲಿ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿತ್ತು.

ಶಾಸಕರು ಹಾಗೂ ಪೊಲೀಸ್ ಇಲಾಖೆ ವತಿಯಿಂದ ಗೌರವ
ಹುಣಸಗಿ ತಹಶೀಲ್ದಾರ್ ಹುಸೇನಾ.ಎ. ಸರ್ಕಾವಾಸ್, ಗ್ರಾಮ ಆಡಳಿತ ಅಧಿಕಾರಿ ಪರಶುರಾಮ, ಹುಣಸಗಿ ಸಿಪಿಐ ರವಿಕುಮಾರ್ ಹಾಗೂ ಕೊಡೇಕಲ್ ಪಿಎಸ್‌ಐ ಅಯ್ಯಣ್ಣ ಅವರು ಸ್ಥಳಕ್ಕೆ ಆಗಮಿಸಿ ಪೊಲೀಸರೊಂದಿಗೆ ಬಂದೋಬಸ್ತಿನ ಜವಾಬ್ದಾರಿಯನ್ನು ಹೊತ್ತುಕೊಂಡರು. ಮೃತ ಯೋಧನಿಗೆ ಅವರು ಅಂತಿಮ ನಮನ ಸಲ್ಲಿಸಿದರು.

ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ
ಪೂರ್ಣ ಸರ್ಕಾರಿ ಗೌರವಗಳೊಂದಿಗೆ ವೆಂಕಟೇಶ್ ಎಂ. ರಾಠೋಡ ಅವರ ಅಂತ್ಯಕ್ರಿಯೆ ಜುಮಾಲಾಪುರದಲ್ಲಿ ನೆರವೇರಿತು. ಈ ಸಂದರ್ಭ ಗ್ರಾಮಸ್ಥರು, ಸುತ್ತಮುತ್ತಲಿನ ಮಠಾಧೀಶರು, ಮತ್ತು ಸಾರ್ವಜನಿಕರು ಭಾಗವಹಿಸಿ ತಮ್ಮ ಶ್ರದ್ಧಾಂಜಲಿಯನ್ನು ಅರ್ಪಿಸಿದರು.

ವರದಿ: ದಾವಲಸಾಬ್

nazeer ahamad

Recent Posts

ಬಸವನ ಬಾಗೇವಾಡಿಯಲ್ಲಿ ಅಕ್ರಮ LPG ರೀಫಿಲ್ಲಿಂಗ್ ಆರೋಪ: ಅಧಿಕಾರಿಗಳ ಮೌನಕ್ಕೆ ಸಾರ್ವಜನಿಕರ ಆಕ್ರೋಶ

ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಗೃಹಬಳಕೆಯ LPG ಸಿಲಿಂಡರ್‌ಗಳಿಂದ ಆಟೋಗಳಿಗೆ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡಲಾಗುತ್ತಿದೆ ಎಂಬ ಆರೋಪ…

2 hours ago

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

1 day ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

2 days ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

2 days ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago