Categories: CrimeLatest

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿಯನ್ನೇ ಆರೋಪಿಯಾಗಿ ಬಂಧಿಸಿದ್ದಾರೆ.

ಏಪ್ರಿಲ್ 23, 2026ರಂದು ತಾವರೆಕಟ್ಟೆ ಸಮೀಪ ಚಾಮುಂಡಿ ಬೆಟ್ಟಕ್ಕೆ ಹೋಗುವ ರಸ್ತೆಯ ಪಕ್ಕದ ಖಾಲಿ ಜಾಗದಲ್ಲಿ 40-45 ವರ್ಷದ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ನಜರಬಾದ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಕಲಂ 103(1), 238 ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿತ್ತು.

ಪ್ರಕರಣದ ಗಂಭೀರತೆಯನ್ನು ಗಮನಿಸಿ, ಮೈಸೂರು ನಗರ ಪೊಲೀಸ್ ಆಯುಕ್ತರ ನಿರ್ದೇಶನದಂತೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿತ್ತು. ದೇವರಾಜ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ. ರಾಜೇಂದ್ರ ಅವರ ಮೇಲ್ವಿಚಾರಣೆಯಲ್ಲಿ, ನಜರಬಾದ್ ಠಾಣೆಯ ಇನ್ಸ್‌ಪೆಕ್ಟರ್ ಮಹದೇವಸ್ವಾಮಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿತು.

ಪೊಲೀಸರು ಘಟನಾ ಸ್ಥಳದ ಸುತ್ತಮುತ್ತ ಹಾಗೂ ನಗರದಲ್ಲಿನ ವಿವಿಧ ಸ್ಥಳಗಳಲ್ಲಿ ಅಳವಡಿಸಿದ್ದ 200ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ಮೃತನ ಚಲನವಲನ ಹಾಗೂ ಅನುಮಾನಿತ ವ್ಯಕ್ತಿಯ ಮಾಹಿತಿ ಸಂಗ್ರಹಿಸಿದರು. ಈ ಸುಳಿವಿನ ಆಧಾರದ ಮೇಲೆ ಮಂಜುಳಾ (60), ಕೆಸರೆ ಪ್ರದೇಶದ ನಿವಾಸಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.

ವಿಚಾರಣೆ ವೇಳೆ, ಮೃತ ವ್ಯಕ್ತಿ ಆಕೆಯ ಎರಡನೇ ಮಗ ರಮೇಶ್ ಎಂಬುದು ಬಹಿರಂಗವಾಯಿತು. ಆತ ಮದುವೆಯಾಗದೆ ತಾಯಿಯೊಂದಿಗೇ ವಾಸವಾಗಿದ್ದು, ಮದ್ಯಪಾನದ ಚಟದಿಂದ ಬಳಲುತ್ತಿದ್ದ. ಹಣಕ್ಕಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದುದರಿಂದ ಬೇಸತ್ತ ಮಂಜುಳಾ, ಮಗನನ್ನು ಕೊಲೆ ಮಾಡುವ ನಿರ್ಧಾರ ಕೈಗೊಂಡಿದ್ದಾಗಿ ಒಪ್ಪಿಕೊಂಡಿದ್ದಾಳೆ.

ಏಪ್ರಿಲ್ 14ರಂದು ಬೆಳಿಗ್ಗೆ ರಮೇಶ್‌ನನ್ನು ಆಟೋದಲ್ಲಿ ಕರೆದುಕೊಂಡು ಚಾಮುಂಡಿ ಬೆಟ್ಟದ ರಸ್ತೆಯ ತಾವರೆಕಟ್ಟೆ ಬಳಿ ಕರೆದುಕೊಂಡು ಹೋಗಿ, ಖಾಲಿ ಜಾಗದಲ್ಲಿ ದೊಣ್ಣೆ ಮತ್ತು ಕಲ್ಲಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿ ಮಂಜುಳಾಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಉಪ ಪೊಲೀಸ್ ಆಯುಕ್ತರು, ಸಹಾಯಕ ಪೊಲೀಸ್ ಆಯುಕ್ತರು ಹಾಗೂ ನಜರಬಾದ್ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಹತ್ವದ ಪಾತ್ರವಹಿಸಿದ್ದು, ಅವರ ಕಾರ್ಯಕ್ಷಮತೆಯನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

3 hours ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

18 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

22 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago