Categories: Latest

25 ಲಕ್ಷದ ಐಷಾರಾಮಿ ಕಾರು ಖರೀದಿಸಿದ ಸೋನು ಶ್ರೀನಿವಾಸ್ ಗೌಡ; ಅಶ್ಲೀಲ ಕಾಮೆಂಟ್‌ಗಳಿಗೆ ಖಡಕ್ ತಿರುಗೇಟು!

ಸೋಶಿಯಲ್ ಮೀಡಿಯಾದ ಮೂಲಕ ಅಪಾರ ಜನಪ್ರಿಯತೆ ಗಳಿಸಿರುವ ಸೋನು ಶ್ರೀನಿವಾಸ್ ಗೌಡ ಅವರು ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಟ್ರೋಲ್ಸ್‌ಗಳ ಮೂಲಕವೇ ಹೆಚ್ಚು ಗುರುತಿಸಿಕೊಂಡಿದ್ದ ಸೋನು, ಇದೀಗ ಸುಮಾರು 25 ಲಕ್ಷ ರೂಪಾಯಿ ಮೌಲ್ಯದ ಕಿಯಾ ಸೆಲ್ಟೋಸ್‌ ಕಾರು ಖರೀದಿಸಿದ್ದು, ತಮ್ಮ ಐದು ವರ್ಷದ ಕನಸು ನನಸಾಗಿದೆ ಎಂದು ಸಂತಸ ಹಂಚಿಕೊಂಡಿದ್ದಾರೆ.

ಹೊಸ ಕಾರಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬೆನ್ನಲ್ಲೇ ಅವರಿಗೆ ಅಭಿನಂದನೆಗಳ ಜೊತೆಗೆ ಅಸಭ್ಯ ಹಾಗೂ ಅಶ್ಲೀಲ ಕಾಮೆಂಟ್‌ಗಳ ಸುರಿಮಳೆಯೂ ಎದುರಾಯಿತು. ಈ ಬೆಳವಣಿಗೆಯಿಂದ ಬೇಸರಗೊಂಡ ಸೋನು, ತಮ್ಮ ಯೂಟ್ಯೂಬ್‌ ವ್ಲಾಗ್‌ನಲ್ಲಿ ಕಾಮೆಂಟ್ ಮಾಡಿದವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

“ಒಬ್ಬ ಹುಡುಗಿ ಮನೆ, ಕಾರು ಅಥವಾ ಚಿನ್ನ ಖರೀದಿಸಿದರೆ ಅದು ಕೆಟ್ಟ ದಾರಿಯಲ್ಲಿ ಸಂಪಾದಿಸಿದ ಹಣ ಎಂಬ ಮನೋಭಾವ ಕೆಲವರಲ್ಲಿದೆ. ಆದರೆ ಅದೇ ಸಾಧನೆಯನ್ನು ಒಬ್ಬ ಹುಡುಗ ಮಾಡಿದರೆ ಮಾತ್ರ ಎಲ್ಲರೂ ಒಳ್ಳೆಯ ರೀತಿಯಲ್ಲಿ ದುಡಿದು ಸಂಪಾದಿಸಿದ್ದಾನೆ ಎಂದು ನಂಬುತ್ತಾರೆ. ನಮ್ಮ ಸಮಾಜದಲ್ಲಿರುವ ಈ ದ್ವಂದ್ವ ಮನಸ್ಥಿತಿಯೇ ವಿಷಾದಕರ,” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಮ್ಮ ಕಾರು ಖರೀದಿಯ ಬಗ್ಗೆ ಸ್ಪಷ್ಟನೆ ನೀಡಿದ ಸೋನು, “ನಾನು ಕೆಟ್ಟ ದಾರಿಯಲ್ಲಿ ಹಣ ಸಂಪಾದಿಸಿದ್ದರೆ ಒಂದು ಕಾರು ಖರೀದಿಸಲು ಇಷ್ಟು ವರ್ಷ ಕಾಯಬೇಕಾಗುತ್ತಿರಲಿಲ್ಲ. ಈ ಕಾರನ್ನು ನಾನು ಸಾಲದ ಮೂಲಕ ಖರೀದಿಸಿದ್ದೇನೆ. ಐದು ಲಕ್ಷ ರೂಪಾಯಿ ಡೌನ್ ಪೇಮೆಂಟ್ ಮಾಡಿ, ಉಳಿದ ಹಣವನ್ನು ಲೋನ್‌ನಲ್ಲಿ ಪಡೆದುಕೊಂಡಿದ್ದೇನೆ,” ಎಂದು ತಿಳಿಸಿದ್ದಾರೆ.

ಕಳೆದ ಆರು ವರ್ಷಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ವಿಡಿಯೋಗಳನ್ನು ಮಾಡುತ್ತಿದ್ದು, ಹಲವು ಬ್ರ್ಯಾಂಡ್‌ಗಳನ್ನು ಪ್ರಚಾರ ಮಾಡುವ ಮೂಲಕ ಆದಾಯ ಗಳಿಸುತ್ತಿದ್ದೇನೆ. ಜೊತೆಗೆ ಒಂದು ಕಂಪನಿಯ ಬ್ರ್ಯಾಂಡ್ ಅಂಬಾಸಿಡರ್ ಆಗಿದ್ದು, ತಿಂಗಳಿಗೆ ಒಂದು ಲಕ್ಷ ರೂಪಾಯಿಗೂ ಹೆಚ್ಚು ಸಂಬಳ ಪಡೆಯುತ್ತಿದ್ದೇನೆ ಎಂದು ಸೋನು ವಿವರಿಸಿದರು.

ಅಶ್ಲೀಲ ಕಾಮೆಂಟ್ ಮಾಡುವವರ ವಿರುದ್ಧ ಕಿಡಿಕಾರಿದ ಅವರು, “ನನ್ನ ಸಾಧನೆಯನ್ನು ನೋಡಿ ಕೆಲವರಿಗೆ ಹೊಟ್ಟೆ ಉರಿಯುತ್ತಿದೆ. ಆದರೆ ನಾನು ನನ್ನ ಪರಿಶ್ರಮದಿಂದ ಈ ಮಟ್ಟಕ್ಕೆ ಬಂದಿದ್ದೇನೆ. ಉರಿದುಕೊಂಡೇ ಇರಲಿ,” ಎಂದು ಖಡಕ್‌ ತಿರುಗೇಟು ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

14 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

18 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago

ಕಲಬುರಗಿಯಲ್ಲಿ ಜೆಸ್ಕಾಂ AEE ರಾಜೇಶ್ವರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…

2 days ago