Latest

ಸೌಜನ್ಯಾ ಪ್ರಕರಣದ ವಿಡಿಯೋ: ತಡೆಯಾಜ್ಞೆ ಉಲ್ಲಂಘನೆ ಹಿನ್ನೆಲೆ ಯೂಟ್ಯೂಬರ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ”

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಚರ್ಚೆಗೆ ಕಾರಣವಾಗಿರುವ ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಮತ್ತೊಮ್ಮೆ ಸುದ್ದಿ ಎಳೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಲಯದ ತಡೆಯಾಜ್ಞೆ ಉಲ್ಲಂಘಿಸಿ ಮತ್ತೊಂದು ವಿಡಿಯೋವನ್ನು ಪ್ರಕಟಿಸಿದ ಆರೋಪದ ಮೇಲೆ “ದೂತ” ಎಂಬ ಯೂಟ್ಯೂಬ್ ಚಾನೆಲ್‌ನ ಸಮೀರ್ ಎಂಡಿ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ದಾಖಲೆಯಾಗಿದೆ.

ಈ ಮಾನನಷ್ಟ ಮೊಕದ್ದಮೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಅವರು ಸಲ್ಲಿಸಿದ್ದು, ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ನೀಡಲಾಗಿದೆ. ನ್ಯಾಯಾಧೀಶ ಎಸ್. ನಟರಾಜ್ ಅವರು ಸಮೀರ್ ಎಂಡಿಗೆ ನೋಟಿಸ್ ಜಾರಿ ಮಾಡಿ ನ್ಯಾಯಾಲಯದಲ್ಲಿ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ, ತಕ್ಷಣವೇ ವಿವಾದಿತ ಎರಡನೆ ವಿಡಿಯೋವನ್ನು ಡಿಲೀಟ್ ಮಾಡುವಂತೆ ಆದೇಶಿಸಿದ್ದಾರೆ.

ಈ ಹಿಂದೆ ಸೌಜನ್ಯಾ ಪ್ರಕರಣ ಸಂಬಂಧ ಧರ್ಮಸ್ಥಳ ಸಂಸ್ಥೆಯನ್ನು ನೇರವಾಗಿ ಗುರಿಯಾಗಿಸಿಕೊಂಡು ಸಮೀರ್ ಎಂಡಿ ಬಿಡುಗಡೆ ಮಾಡಿದ ಮೊದಲನೆಯ ವಿಡಿಯೋಕ್ಕೂ ನ್ಯಾಯಾಲಯ ತಡೆಯಾಜ್ಞೆ ನೀಡಿತ್ತು. ಆದರೆ, ಆ ಆದೇಶವನ್ನು ಪರಿಗಣಿಸದೇ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿರುವುದು ನ್ಯಾಯಾಲಯದ ಆಕ್ರೋಶಕ್ಕೆ ಕಾರಣವಾಗಿದೆ.

ಧರ್ಮಸ್ಥಳದ ಪರವಾಗಿ ಕಾನೂನು ಹೋರಾಟಕ್ಕೆ ಇಳಿದಿರುವ ಅರ್ಜಿದಾರರು, ಇಂತಹ ವಿಡಿಯೋಗಳು ಧರ್ಮಸ್ಥಳ ಸಂಸ್ಥೆಯ ಮಾನಮರ್ಯಾದೆಗೆ ಹಾನಿ ತರುತ್ತವೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಪ್ರಕರಣ ಇದೀಗ ಹೆಚ್ಚಿದ ಕುತೂಹಲದ ಕೇಂದ್ರಬಿಂದು ಆಗಿದೆ.

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

20 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

2 days ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago