Categories: CrimeLatest

ಗೌರಿಬಿದನೂರು ಬಿ.ಎಚ್. ರಸ್ತೆಯಲ್ಲಿ ಮತ್ತೆ ಸರಣಿ ಕಳ್ಳತನ: ವ್ಯಾಪಾರಿಗಳಲ್ಲಿ ಭೀತಿ, ಪೊಲೀಸರ ವಿರುದ್ಧ ನಿರ್ಲಕ್ಷ್ಯದ ಆರೋಪ

ಗೌರಿಬಿದನೂರು: ನಗರದ ಹೃದಯಭಾಗವಾದ ಬಿ.ಎಚ್. ರಸ್ತೆಯಲ್ಲಿ ಮತ್ತೊಮ್ಮೆ ಸರಣಿ ಕಳ್ಳತನ ನಡೆದಿದ್ದು, ವ್ಯಾಪಾರಿಗಳಲ್ಲಿ ಆತಂಕ ಮನೆ ಮಾಡಿದೆ. ನ್ಯಾಷನಲ್ ಕಾಲೇಜು ಸಮೀಪದ ಹಜರತ್ ಜಲಾಲ್ ಶಾ ಕಾಂಪ್ಲೆಕ್ಸ್‌ನಲ್ಲಿರುವ ಮೂರು ಅಂಗಡಿಗಳ ಬೀಗ ಮುರಿದು ದುಷ್ಕರ್ಮಿಗಳು ಕಳ್ಳತನ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಕಳ್ಳರು ಕಾಂಪ್ಲೆಕ್ಸ್‌ನಲ್ಲಿದ್ದ ದಿನಸಿ ಅಂಗಡಿ ಸೇರಿದಂತೆ ಮೂರು ಅಂಗಡಿಗಳ ಶಟರ್‌ಗಳನ್ನು ಎತ್ತಿ ಒಳನುಗ್ಗಿದ್ದು, ದಿನಸಿ ಅಂಗಡಿಯ ಕ್ಯಾಶ್ ಬಾಕ್ಸ್‌ನಲ್ಲಿದ್ದ ಸುಮಾರು ₹6,000 ನಗದು ಹಾಗೂ ಮಿಕ್ಸ್ಚರ್ ಪ್ಯಾಕೆಟ್‌ಗಳು, ಮೈದಾ ಹಿಟ್ಟಿನ ಪ್ಯಾಕೆಟ್‌ಗಳು ಸೇರಿದಂತೆ ಕೆಲವು ವ್ಯಾಪಾರ ಸಾಮಗ್ರಿಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಬೆಳಿಗ್ಗೆ ಅಂಗಡಿ ತೆರೆಯಲು ಬಂದ ಮಾಲೀಕರು ಕಳ್ಳತನ ನಡೆದಿರುವುದನ್ನು ಗಮನಿಸಿ ತಕ್ಷಣವೇ ಗೌರಿಬಿದನೂರು ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಕುರಿತು ಮಾತನಾಡಿದ ಅಂಗಡಿ ಮಾಲೀಕರು, “ಇದೇ ರೀತಿಯ ಕಳ್ಳತನ ಮೂರು ತಿಂಗಳ ಹಿಂದೆಯೂ ನಡೆದಿತ್ತು. ಆಗಲೂ ಪೊಲೀಸರಿಗೆ ದೂರು ನೀಡಿದ್ದೆವು. ಆದರೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳಲಿಲ್ಲ. ಈಗ ಮತ್ತೆ ಅದೇ ರೀತಿಯ ಕಳ್ಳತನ ನಡೆದಿದೆ. ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದರಿಂದ ವ್ಯಾಪಾರ ನಡೆಸುವುದೇ ಭಯದ ವಾತಾವರಣದಲ್ಲಿ ನಡೆಯುತ್ತಿದೆ. ಕಳ್ಳರನ್ನು ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು,” ಎಂದು ಆಗ್ರಹಿಸಿದರು.

ಇನ್ನೊಬ್ಬ ವ್ಯಾಪಾರಿ ಅಮೀರ್ ಸುಹೇಲ್ ಮಾತನಾಡಿ, “ನಮ್ಮ ಅಂಗಡಿಯ ಪಕ್ಕದಲ್ಲೇ ಮತ್ತೆ ಕಳ್ಳತನವಾಗಿದೆ. ಇದೇ ಪ್ರದೇಶದಲ್ಲಿ ಈ ಹಿಂದೆ ಕೂಡ ಇಂತಹ ಘಟನೆ ನಡೆದಿತ್ತು. ದೂರು ನೀಡಿದಾಗ ಪೊಲೀಸರು ಬಂದು ಸಿಸಿಟಿವಿ ಕ್ಯಾಮೆರಾ ಅಳವಡಿಸಿಕೊಳ್ಳಿ ಎಂದು ಸಲಹೆ ನೀಡಿ ಹೋಗುತ್ತಾರೆ. ಆದರೆ ಕ್ಯಾಮೆರಾ ಇರುವ ಪ್ರದೇಶಗಳಲ್ಲಿಯೂ ಕಳ್ಳತನಗಳು ನಡೆಯುತ್ತಿವೆ. ರಾತ್ರಿ ವೇಳೆ ಪೊಲೀಸ್ ಬೀಟ್ ಹೆಚ್ಚಿಸಿ, ಕಳ್ಳತನಗಳನ್ನು ತಡೆಗಟ್ಟಲು ಶಾಶ್ವತ ಕ್ರಮ ಕೈಗೊಳ್ಳಬೇಕು,” ಎಂದು ಒತ್ತಾಯಿಸಿದರು.

ಬಿ.ಎಚ್. ರಸ್ತೆ ಗೌರಿಬಿದನೂರಿನ ಅತ್ಯಂತ ಜನನಿಬಿಡ ಮತ್ತು ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಒಂದಾಗಿದ್ದು, ಇಂತಹ ಪ್ರದೇಶದಲ್ಲೇ ಪದೇ ಪದೇ ಕಳ್ಳತನಗಳು ನಡೆಯುತ್ತಿರುವುದು ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಆತಂಕಕ್ಕೆ ಕಾರಣವಾಗಿದೆ. ವ್ಯಾಪಾರಿಗಳು ಸಂಜೆ ಅಂಗಡಿ ಮುಚ್ಚಿ ಮನೆಗೆ ತೆರಳುವುದಕ್ಕೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ.

ಸ್ಥಳೀಯ ವ್ಯಾಪಾರಿಗಳು ನಗರದಲ್ಲಿ ರಾತ್ರಿ ಪೊಲೀಸ್ ಗಸ್ತು ಹೆಚ್ಚಿಸುವುದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ನಿಗಾ ವಹಿಸುವುದು ಹಾಗೂ ಸರಣಿ ಕಳ್ಳತನಗಳಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಮನವಿ ಮಾಡಿದ್ದಾರೆ.

ವರದಿ: ಅವಿನಾಶ್

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆಯಲ್ಲಿ ರಾತ್ರಿ 11 ಗಂಟೆಯ ಬಳಿಕ ನಿಯಮ ಉಲ್ಲಂಘಿಸಿ ಮರಳು ಸಾಗಾಟ: ನಂಬರ್ ಪ್ಲೇಟ್ ಇಲ್ಲದ ಟಿಪ್ಪರ್‌ಗಳ ಸಂಚಾರ, ಅಧಿಕಾರಿಗಳು ಮೌನ!?

ಬಾಗಲಕೋಟೆ: ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆಯೇ ಎಂಬ…

15 hours ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಳ: ಮಕ್ಕಳ ಮಾನ್ಯತಾ ಅವಧಿಯಲ್ಲೂ ಬದಲಾವಣೆ, ಹೊಸ ನಿಯಮ ಜಾರಿ

ನವದೆಹಲಿ: ಪಾಸ್‌ಪೋರ್ಟ್ ಅರ್ಜಿ ಶುಲ್ಕವನ್ನು ಹೆಚ್ಚಿಸುವುದರ ಜೊತೆಗೆ ಮಕ್ಕಳ ಪಾಸ್‌ಪೋರ್ಟ್‌ನ ಮಾನ್ಯತಾ ಅವಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗಳನ್ನು…

15 hours ago

ಗೌರಿಬಿದನೂರಿನಲ್ಲಿ ಅಪಘಾತಕ್ಕೆ ನಾಲ್ಕು ವರ್ಷದ ಬಾಲಕಿ ಬಲಿ

ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…

4 days ago

ಸರ್ಕಾರಿ ಶಾಲಾ ಮಕ್ಕಳಿಗೆ ಅನ್ಯಾಯ: ನೂರು ರೂಪಾಯಿಗೂ ಬೆಲೆಬಾಳದ ಶೂಗಳನ್ನು ವಿತರಿಸಿರುವ ಸರ್ಕಾರ, ಒಂದೇ ತಿಂಗಳಿಗೆ ಹಾಳದ ಶೂಗಳು..!

ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…

4 days ago

50 ಲಕ್ಷ ರೂ. ಲಂಚ ಸ್ವೀಕರಿಸುವಾಗ ಧಾರವಾಡ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ: ಖರಾಬು ಜಮೀನು ದಾಖಲೆ ತಿದ್ದುಪಡಿಗೆ ಬೇಡಿಕೆ..!

ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…

4 days ago

ಪಂಚಾಯಿತಿ ಕಚೇರಿಯಲ್ಲೇ ಆಸ್ತಿ ವಿವಾದಕ್ಕೆ ರಕ್ತದೊಕುಳಿ: ಅಣ್ಣ–ತಮ್ಮಂದಿರ ಜಗಳದಲ್ಲಿ ತಂದೆ–ಮಗಳು ಕೊಲೆ, ಮತ್ತೊಬ್ಬನಿಗೆ ಗಂಭೀರ ಗಾಯ

ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…

5 days ago