Latest

ಮರಾಠಿಯಲ್ಲಿ ಮಾತನಾಡು, ಮದರ್ ಚೋ,, ; ಸರ್ಕಾರಿ ಅಧಿಕಾರಿಗೆ ಮರಾಠಿಗನಿಂದ ಬೆದರಿಕೆ.!

ಗಡಿಜಿಲ್ಲೆ ಬೆಳಗಾವಿಯಲ್ಲಿ ಮರಾಠಿ ಗುಂಪುಗಳ ಹಾವಳಿ ಹೆಚ್ಚುತ್ತಿದ್ದು, ಸರಕಾರಿ ಬಸ್ ಕಂಡಕ್ಟರ್ ಮೇಲಿನ ಹಲ್ಲೆಯ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ವಿವಾದ ಚಿಗುರುತ್ತಿದೆ. ಈಗ ಮರಾಠಿ ಪುಂಡರು ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಅನುಮಾನ ಮೂಡುತ್ತಿದೆ.

ಕನ್ನಡ ಮಾತನಾಡಲು ನಿರಾಕರಣೆ – ಪಿಡಿಓಗೆ ಅವಾಚ್ಯ ನಿಂದನೆ

ಕಿಣೆಯ ಗ್ರಾಮ ಪಂಚಾಯತ್‌ ಪಿಡಿಓ ನಾಗೇಂದ್ರ ಪತ್ತಾರರಿಗೆ, ಕನ್ನಡ ಮಾತನಾಡದಂತೆ ಒತ್ತಾಯಿಸಿ, ಮರಾಠಿ ಭಾಷೆಯಲ್ಲಿ ಮಾತು ಆಡಲು ಒತ್ತಡ ಹೇರಲಾಗಿದೆ. ಈ ವೇಳೆ ತಿಪ್ಪಣ್ಣ ಸುಭಾಷ ಡೊಕ್ರೆ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ್ದಾನೆ ಎಂದು ವರದಿಯಾಗಿದೆ.

ಆತಂಕದಲ್ಲಿ ಅಧಿಕಾರಿ ವರ್ಗ – ಭದ್ರತಾ ಬೇಡಿಕೆ

ಮರಾಠಿ ಭಾಷಿಕ ಪ್ರದೇಶಗಳಲ್ಲಿ ಕಾರ್ಯ ನಿರ್ವಹಿಸುವ ಅಧಿಕಾರಿ ವರ್ಗ ದೈನಂದಿನ ಭಯದ ವಾತಾವರಣದಲ್ಲೇ ಕರ್ತವ್ಯ ನಿರ್ವಹಿಸುತ್ತಿದೆ. ಈ ಘಟನೆಯ ಬೆನ್ನಲ್ಲೇ ಕಿಣೆಯ ಗ್ರಾಮ ಪಂಚಾಯತ್‌ ಪಿಡಿಓ ಪೊಲೀಸರ ಭದ್ರತೆ ಒದಗಿಸಲು ಆಗ್ರಹಿಸಿದ್ದಾರೆ.

ಈ ಕೃತ್ಯ ಪ್ರಶ್ನೆಗಳ ಸುಳಿಯಲ್ಲಿ ಸಿಕ್ಕಿದ್ದು, ಕನ್ನಡಿಗರಿಗೆ ವಿರುದ್ಧವಾಗಿ ನಡೆಯುತ್ತಿರುವ ಈ ರೀತಿಯ ಕೃತ್ಯಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕಿದೆ ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago