ಬಂಗಾರಪೇಟೆ : ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದ್ದ 2 ಸೀಮೆ ಹಸು ಮತ್ತು 4 ಕುರಿ ಕಳ್ಳತನ ಪ್ರಕರಣದ ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಡಿ.ವೈ.ಎಸ್.ಪಿ ಎಸ್. ಪಾಂಡುರಂಗ ಹಾಗೂ ಕಾಮಸಮುದ್ರ ಸಿ.ಪಿ.ಐ ಜಿ.ಸಿ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಕಾಮಸಮುದ್ರ ಪಿ.ಎಸ್.ಐ ಬಿ.ವಿ.ಕಿರಣ್ ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.
ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಠಾಣೆಯ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ 5 ಕಳವು ಪ್ರಕರಣಗಳಲ್ಲಿ ಅಂತರ್ ರಾಜ್ಯದ ನಾಲ್ವರು ರಾತ್ರಿ ವೇಳೆ ಬೊಲೆರೊ ವಾಹನದಲ್ಲಿ ಬಂದು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಟ್ರ್ಯಾಕ್ಟರ್, ಹಸು, ಕುರಿ, ಹಂದಿಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ವಾಸಿ ಸುರೇಶ್, ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ವಾಸಿ ಸತೀಶ್, ರೂಪೇಶ್, ವೆಂಕಟರಮಣಪ್ಪ ಎಂಬುವರನ್ನು ಬಂಧಿಸಿ, ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಒಟ್ಟು 5 ಕಳವು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.13,73,200/-ಮೌಲ್ಯದ 1 ಟ್ರಾಕ್ಟರ್ ಮತ್ತು ಟ್ರಾಲಿ, 3 ಹಸು, 4 ಕುರಿ, 32 ಹಂದಿಗಳು ಹಾಗು ರೂ.3200/- ನಗದನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕಾಮಸಮುದ್ರ ಪಿ.ಎಸ್.ಐ ಬಿ.ವಿ.ಕಿರಣ್ ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿ ಮುನಾವರ್ ಪಾಷಾ, ಮಂಜುನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ರಾಮ ರಾವ್, ಮಂಜುನಾಥ, ಮಾರ್ಕೊಂಡ , ಲಕ್ಷ್ಮಣ ತೇಲಿ, ಹಾಗೂ ಜೀಪ್ ಚಾಲಕ ಗುರುಮೂರ್ತಿ ಅವರ ಉತ್ತಮ ಕೆಲಸವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಶ್ಲಾಘಿಸಿದ್ದಾರೆ. ವರದಿ ರೋಶನ್ ಜಮೀರ್
ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…