Latest

ಬಂಗಾರಪೇಟೆ ತಾಲೂಕಿನ ಗಡಿಭಾಗದ ಕಾಮಸಮುದ್ರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ: ಅಂತರಾಜ್ಯದ ನಾಲ್ವರು ಕಳ್ಳರ ಬಂಧನ.

ಬಂಗಾರಪೇಟೆ : ತಾಲೂಕಿನ ದೊಡ್ಡಪನ್ನಾಂಡಹಳ್ಳಿ ಗ್ರಾಮದಲ್ಲಿ ನಡೆದಿದ್ದ 2 ಸೀಮೆ ಹಸು ಮತ್ತು 4 ಕುರಿ ಕಳ್ಳತನ ಪ್ರಕರಣದ ಆರೋಪಿಗಳು ಮತ್ತು ಮಾಲನ್ನು ಪತ್ತೆ ಮಾಡಲು ಡಿ.ವೈ.ಎಸ್‌.ಪಿ ಎಸ್. ಪಾಂಡುರಂಗ ಹಾಗೂ ಕಾಮಸಮುದ್ರ ಸಿ.ಪಿ.ಐ ಜಿ.ಸಿ.ನಾರಾಯಣಸ್ವಾಮಿ ಮಾರ್ಗದರ್ಶನದಲ್ಲಿ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್‌ ಕುಮಾ‌ರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು.

ಬಂಗಾರಪೇಟೆ ತಾಲೂಕಿನ ಕಾಮಸಮುದ್ರ ಠಾಣೆಯ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ, ವಿವಿಧ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದ 5 ಕಳವು ಪ್ರಕರಣಗಳಲ್ಲಿ ಅಂತರ್ ರಾಜ್ಯದ ನಾಲ್ವರು ರಾತ್ರಿ ವೇಳೆ ಬೊಲೆರೊ ವಾಹನದಲ್ಲಿ ಬಂದು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಟ್ರ್ಯಾಕ್ಟರ್, ಹಸು, ಕುರಿ, ಹಂದಿಗಳನ್ನು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ಆಂಧ್ರಪ್ರದೇಶ ರಾಜ್ಯದ ಚಿತ್ತೂರು ಜಿಲ್ಲೆಯ ವಾಸಿ ಸುರೇಶ್, ತಮಿಳುನಾಡು ರಾಜ್ಯದ ಕೃಷ್ಣಗಿರಿ ಜಿಲ್ಲೆಯ ವಾಸಿ ಸತೀಶ್, ರೂಪೇಶ್, ವೆಂಕಟರಮಣಪ್ಪ ಎಂಬುವರನ್ನು ಬಂಧಿಸಿ, ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯ ಒಟ್ಟು 5 ಕಳವು ಪ್ರಕರಣಗಳಲ್ಲಿ ಕಳ್ಳತನ ಮಾಡಲಾಗಿದ್ದ ರೂ.13,73,200/-ಮೌಲ್ಯದ 1 ಟ್ರಾಕ್ಟರ್‌ ಮತ್ತು ಟ್ರಾಲಿ, 3 ಹಸು, 4 ಕುರಿ, 32 ಹಂದಿಗಳು ಹಾಗು ರೂ.3200/- ನಗದನ್ನು ವಶಪಡಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದ ಕಾಮಸಮುದ್ರ ಪಿ.ಎಸ್‌.ಐ ಬಿ.ವಿ.ಕಿರಣ್ ಕುಮಾರ್, ವಿಶೇಷ ಅಪರಾಧ ಪತ್ತೆ ತಂಡದ ಸಿಬ್ಬಂದಿ ಮುನಾವ‌ರ್ ಪಾಷಾ, ಮಂಜುನಾಥರೆಡ್ಡಿ, ರಾಮಕೃಷ್ಣಾರೆಡ್ಡಿ, ರಾಮ ರಾವ್, ಮಂಜುನಾಥ, ಮಾರ್ಕೊಂಡ , ಲಕ್ಷ್ಮಣ ತೇಲಿ, ಹಾಗೂ ಜೀಪ್ ಚಾಲಕ ಗುರುಮೂರ್ತಿ ಅವರ ಉತ್ತಮ ಕೆಲಸವನ್ನು ಕೆ.ಜಿ.ಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ಶ್ಲಾಘಿಸಿದ್ದಾರೆ. ವರದಿ ರೋಶನ್ ಜಮೀರ್

nazeer ahamad

Recent Posts

ಸಿದ್ದರಾಮಯ್ಯ ನಮ್ಮ ನಾಯಕ, 2028ಕ್ಕೆ ಡಿಕೆಶಿ ಸಿಎಂ ಆಗಲಿ: ಸತೀಶ್ ಜಾರಕಿಹೊಳಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…

12 hours ago

ಅಟ್ಟಿಕಾ ಗೋಲ್ಡ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ: 16ಕ್ಕೂ ಹೆಚ್ಚು ಸ್ಥಳಗಳಲ್ಲಿ ಇಡಿ ಶೋಧ; ವಿದೇಶಿ ಕರೆನ್ಸಿ, ಚಿನ್ನ-ಬೆಳ್ಳಿ, ₹7.52 ಲಕ್ಷ ನಗದು ಜಪ್ತಿ

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…

1 day ago

ಇಬ್ಬರು ಮಕ್ಕಳ ತಾಯಿಗೆ ವಂಚನೆ ಆರೋಪ: ಖಾಸಗಿ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್; ₹9 ಲಕ್ಷ ಪಡೆದ ಟ್ಯಾಟೂ ಆರ್ಟಿಸ್ಟ್ ಅರ್ಜುನ್? ಎಂದು ಮಹಿಳೆ ಆರೋಪ.

ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…

1 day ago

ಖಾಲಿ ಸೈಟ್ ಸ್ವಚ್ಛಗೊಳಿಸಲು ಹೋದಾಗ ಬಯಲಾಯ್ತು ಕೊಲೆ ರಹಸ್ಯ: ಪತ್ನಿಯನ್ನು ಕೊಂದು ಶವ ಎಸೆದಿದ್ದ ಪತಿ ಬಂಧನ

ಬೆಂಗಳೂರು: ಜಿಬಿಎ ನೋಟಿಸ್‌ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…

1 day ago

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

2 days ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

2 days ago