Latest

ಗೂಢಚಾರಿಕೆ ಆರೋಪ: ಪಾಕಿಸ್ತಾನಕ್ಕೆ ಮಾಹಿತಿ ಸೋರಿಕೆಗೆ ಯುವಕನ ಬಂಧನ.

ಅಹ್ಮದಾಬಾದ್‌: ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಗುಜರಾತ್‌ನ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಹದೇವ್‌ ಸಿಂಗ್‌ ಗೋಹ್ಲಿ ಎಂದು ಗುರುತಿಸಲಾದ ಆರೋಪಿ, ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ಒದಗಿಸುತ್ತಿದ್ದಾನೆ ಎಂಬ ಶಂಕೆಯ ಮೇರೆಗೆ ವಶಕ್ಕೆ ಪಡೆಯಲಾಗಿದೆ.

ಆರೋಪಗಳ ಪ್ರಕಾರ, ಗೋಹ್ಲಿ ಭಾರತ ವಾಯು ಸೇನೆ ಮತ್ತು ಗಡಿ ಭದ್ರತಾ ಪಡೆಗಳ (BSF) ಕುರಿತಂತೆ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನದೊಂದಿಗೆ ಹಂಚಿಕೊಂಡಿದ್ದ ಎನ್ನಲಾಗಿದೆ. ಗೂಢಚಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಈತನ ಮೇಲೆ ರಾಷ್ಟ್ರೀಯ ಭದ್ರತಾ ಸಂಬಂಧಿತ ಕಾನೂನು ಉಲ್ಲಂಘನೆ ಆರೋಪಿಸಲಾಗಿದೆ.

ಕಛ್ ಜಿಲ್ಲೆಯ ನಿವಾಸಿಯಾಗಿರುವ ಸಹದೇವ್‌ ಸಿಂಗ್‌ ಸ್ಥಳೀಯ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ತನ್ನ ಉದ್ಯೋಗದ ಅವಕಾಸವನ್ನು ದುರುಪಯೋಗಪಡಿಸಿಕೊಂಡು, ಸೇನೆಯ ಚಲನವಲನ ಹಾಗೂ ಭದ್ರತಾ ಮಾಹಿತಿಗಳನ್ನು ಸೋರಿಸುತ್ತಿದ್ದಾನೆ ಎನ್ನಲಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಆರೋಪಿ ವಿಚಾರಣೆಯಲ್ಲಿದ್ದಾನೆ. ಗುಜರಾತ್ ಉಗ್ರ ನಿಗ್ರಹ ದಳದ (ATS) ಅಧಿಕಾರಿ ಕೆ. ಸಿದ್ದಾರ್ಥ್‌ ಈ ಕುರಿತು ಸ್ಪಷ್ಟನೆ ನೀಡಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

nazeer ahamad

Recent Posts

ಮನೆ ಬಳಕೆಗೆ ಸಿಗದ ಗೃಹಬಳಕೆಯ ಸಿಲಿಂಡರ್‌ಗಳು ಹೋಟೆಲ್‌ಗಳಲ್ಲಿ , ಅಧಿಕಾರಿಗಳ ನಿರ್ಲಕ್ಷ್ಯ

ಮುಂಡಗೋಡ: ಪ್ರಸ್ತುತ ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಇರಾನ್–ಅಮೇರಿಕಾ ಉದ್ವಿಗ್ನತೆ (ಯುದ್ಧ) ಪರಿಣಾಮವಾಗಿ ಇಂಧನ ಕ್ಷೇತ್ರದಲ್ಲಿ ಅನಿಶ್ಚಿತತೆ ಹೆಚ್ಚಾಗುತ್ತಿದೆ. ಈ ಪರಿಸ್ಥಿತಿಯ…

1 hour ago

ಕರ್ನಾಟಕ ಹೈಕೋರ್ಟ್‌ನಲ್ಲಿ 70 ಹುದ್ದೆಗಳು: ಆಸಕ್ತರಿಗೆ ಉದ್ಯೋಗದ ಸುವರ್ಣಾವಕಾಶ

ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…

7 hours ago

ಕೋರ್ಟ್ ಉದ್ಯೋಗದ ಹೆಸರಿನಲ್ಲಿ ಕೋಟಿ ಕೋಟಿ ಮೋಸ: ಬೆಂಗಳೂರಿನಲ್ಲಿ ಫ್ರಾಡ್ ದಂಪತಿ ಬಂಧನ

ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…

7 hours ago

ಗಂಡ ಬಿಟ್ಟ ಮಹಿಳೆಯರೇ ಇವನ ಟಾರ್ಗೆಟ್; 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ..!

ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…

7 hours ago

ಗಂಡನಿಲ್ಲದ ವೇಳೆ ಬಾಡಿಗೆಗೆ ಇದ್ದ ಯುವಕನ ಜೊತೆ ಸರಸ; ಅಡ್ಡಿಯಾದ ಅತ್ತೆಯನ್ನು ಕೊಂದ ಸೊಸೆ

ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…

7 hours ago

ಗೌರಿಬಿದನೂರಿನಲ್ಲಿ ಭೀಕರ ರಸ್ತೆ ಅಪಘಾತ – ಮಹಿಳೆ ಸಾವು, ಪುತ್ರನಿಗೆ ಗಾಯ

ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…

8 hours ago