ಅಹ್ಮದಾಬಾದ್: ರಾಷ್ಟ್ರದ ಭದ್ರತೆಗೆ ಧಕ್ಕೆ ತರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಗುಜರಾತ್‌ನ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸಹದೇವ್ ಸಿಂಗ್ ಗೋಹ್ಲಿ ಎಂದು ಗುರುತಿಸಲಾದ ಆರೋಪಿ, ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ಒದಗಿಸುತ್ತಿದ್ದಾನೆ ಎಂಬ ಶಂಕೆಯ ಮೇರೆಗೆ ವಶಕ್ಕೆ ಪಡೆಯಲಾಗಿದೆ.
ಆರೋಪಗಳ ಪ್ರಕಾರ, ಗೋಹ್ಲಿ ಭಾರತ ವಾಯು ಸೇನೆ ಮತ್ತು ಗಡಿ ಭದ್ರತಾ ಪಡೆಗಳ (BSF) ಕುರಿತಂತೆ ಅತ್ಯಂತ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನದೊಂದಿಗೆ ಹಂಚಿಕೊಂಡಿದ್ದ ಎನ್ನಲಾಗಿದೆ. ಗೂಢಚಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಈತನ ಮೇಲೆ ರಾಷ್ಟ್ರೀಯ ಭದ್ರತಾ ಸಂಬಂಧಿತ ಕಾನೂನು ಉಲ್ಲಂಘನೆ ಆರೋಪಿಸಲಾಗಿದೆ.
ಕಛ್ ಜಿಲ್ಲೆಯ ನಿವಾಸಿಯಾಗಿರುವ ಸಹದೇವ್ ಸಿಂಗ್ ಸ್ಥಳೀಯ ಆಸ್ಪತ್ರೆಗೆ ಆರೋಗ್ಯ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ. ತನ್ನ ಉದ್ಯೋಗದ ಅವಕಾಸವನ್ನು ದುರುಪಯೋಗಪಡಿಸಿಕೊಂಡು, ಸೇನೆಯ ಚಲನವಲನ ಹಾಗೂ ಭದ್ರತಾ ಮಾಹಿತಿಗಳನ್ನು ಸೋರಿಸುತ್ತಿದ್ದಾನೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಕಲೆಹಾಕುವ ನಿಟ್ಟಿನಲ್ಲಿ ಆರೋಪಿ ವಿಚಾರಣೆಯಲ್ಲಿದ್ದಾನೆ. ಗುಜರಾತ್ ಉಗ್ರ ನಿಗ್ರಹ ದಳದ (ATS) ಅಧಿಕಾರಿ ಕೆ. ಸಿದ್ದಾರ್ಥ್ ಈ ಕುರಿತು ಸ್ಪಷ್ಟನೆ ನೀಡಿದ್ದು, ತನಿಖೆ ಮುಂದುವರಿದಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ಸದ್ದು ಮಾಡುತ್ತಿದ್ದ ವದಂತಿ ಹಾಗೂ ಊಹಾಪೋಹಗಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ…
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಗೋಲ್ಡ್ ಕಂಪನಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ…
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…