ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ ಸಂಬಂಧಿಸಿದಂತೆ ಸತತ ಮೂರು ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಗಳ ಮೂಲಕ ಒಟ್ಟು 3,734 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ.
ಈ ನೇಮಕಾತಿಯಲ್ಲಿ 10ನೇ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿ (PG) ವರೆಗೆ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿದೆ. 10ನೇ ತರಗತಿ, ಪಿಯುಸಿ ಅಥವಾ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅರ್ಹತೆ ಅನುಸಾರ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
SSC Selection Post Phase-XIV (ಫೇಸ್-14):
ಈ ಅಧಿಸೂಚನೆಯಡಿ ಒಟ್ಟು 2,919 ಗ್ರೂಪ್-ಬಿ ಮತ್ತು ಗ್ರೂಪ್-ಸಿ ಹುದ್ದೆಗಳು ಭರ್ತಿಯಾಗಲಿವೆ. ಪ್ರಮುಖ ಹುದ್ದೆಗಳೆಂದರೆ:
ಡೆಪ್ಯುಟಿ ರೇಂಜರ್
ಎಲ್‌ಡಿಸಿ (LDC), ಅಕೌಂಟೆಂಟ್
ನರ್ಸಿಂಗ್ ಆಫೀಸರ್, ಡೇಟಾ ಎಂಟ್ರಿ ಆಪರೇಟರ್
ಟೆಕ್ನಿಷಿಯನ್, ಸೈಂಟಿಫಿಕ್ ಅಸಿಸ್ಟೆಂಟ್
ಮಾರ್ಕೆಟಿಂಗ್ ಅಸಿಸ್ಟೆಂಟ್, ಅಗ್ರಿಕಲ್ಚರ್ ಅಸಿಸ್ಟೆಂಟ್
ಡ್ರೈವರ್, ಸ್ಟೋರ್ ಕೀಪರ್, ಕ್ಲರ್ಕ್, ಫಾರ್ಮಾಸಿಸ್ಟ್, ಕೋರ್ಟ್ ಮಾಸ್ಟರ್ ಸೇರಿದಂತೆ ಇನ್ನೂ ಹಲವು ಹುದ್ದೆಗಳು
ಅರ್ಹತೆ ಮತ್ತು ಪ್ರಮುಖ ದಿನಾಂಕಗಳು:
ವಿದ್ಯಾರ್ಹತೆ: 10ನೇ ತರಗತಿ / ಪಿಯುಸಿ / ಪದವಿ ಉತ್ತೀರ್ಣ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 4, 2026
ಪರೀಕ್ಷೆ: ಜೂನ್ 2026ರಲ್ಲಿ ಆನ್‌ಲೈನ್ ಮೂಲಕ ನಡೆಯಲಿದೆ
ಆಸಕ್ತ ಅಭ್ಯರ್ಥಿಗಳು SSC ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…
ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…
ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…
ಕಲಬುರಗಿ: ನಿಗದಿತ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (AEE) ರಾಜೇಶ್ವರಿ ಅವರ…