Categories: Latest

ಎಸ್‌ಎಸ್‌ಎಲ್‌ಸಿ ಹಿಂದಿಗೆ ಅಂಕ ಕಡ್ಡಾಯ: ಹೈಕೋರ್ಟ್‌ನಿಂದ ಸರ್ಕಾರಕ್ಕೆ ಮತ್ತೊಮ್ಮೆ ಹಿನ್ನಡೆ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕ ನೀಡಬೇಕು ಎಂದು ಹೈಕೋರ್ಟ್ ಮತ್ತೊಮ್ಮೆ ಸ್ಪಷ್ಟ ಆದೇಶ ನೀಡಿದೆ. ಈ ಕುರಿತು ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, 2025-26ನೇ ಸಾಲಿಗೆ ಹಿಂದಿ ವಿಷಯಕ್ಕೆ ಅಂಕಗಳನ್ನೇ ನೀಡಬೇಕೆಂದು ಸೂಚಿಸಿದೆ.

ನ್ಯಾಯಮೂರ್ತಿ ಇಂದಿರೇಶ್ ಅವರ ಪೀಠ ಈ ತೀರ್ಪು ನೀಡಿದ್ದು, ಪರೀಕ್ಷೆಯ ನಂತರ ನಿಯಮ ಬದಲಿಸುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಪರೀಕ್ಷೆಯ ಅಧಿಸೂಚನೆ ಹೊರಡಿಸುವ ಮೊದಲುಲೇ ಇಂತಹ ನಿಯಮಗಳನ್ನು ರೂಪಿಸಬೇಕಿತ್ತು ಎಂದು ನ್ಯಾಯಾಲಯ ತಿಳಿಸಿದೆ.

ಹಿಂದಿ ವಿಷಯದಲ್ಲಿ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದ ಹಿನ್ನೆಲೆ, ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಸರ್ಕಾರ ಗ್ರೇಡ್ ಪದ್ದತಿಯನ್ನು ಜಾರಿಗೆ ತರಲು ನಿರ್ಧರಿಸಿತ್ತು. ಆದರೆ ಈ ಕ್ರಮವನ್ನು ನ್ಯಾಯಾಲಯ ಪ್ರಶ್ನಿಸಿ, ಪರೀಕ್ಷೆಯ ಬಳಿಕ ನಿಯಮ ಬದಲಾವಣೆ ಮಾಡುವುದು ಸೂಕ್ತವಲ್ಲ ಎಂದು ಹೇಳಿದೆ.

“ಪಿಯುಸಿ ಪರೀಕ್ಷೆಯಲ್ಲಿ 83% ವಿದ್ಯಾರ್ಥಿಗಳು ಉತ್ತೀರ್ಣರಾಗುತ್ತಿರುವಾಗ, ಎಸ್‌ಎಸ್‌ಎಲ್‌ಸಿಯಲ್ಲಿ ಎಲ್ಲರನ್ನೂ ಪಾಸ್ ಮಾಡಬೇಕೆಂದರೆ ಪರೀಕ್ಷೆಯ ಅರ್ಥವೇನು?” ಎಂದು ನ್ಯಾಯಾಲಯ ಪ್ರಶ್ನಿಸಿದೆ. ನಿಯಮ ರೂಪಿಸಿದ ಬಳಿಕವೇ ಪರೀಕ್ಷೆ ನಡೆಸಬೇಕಾಗಿತ್ತು ಎಂದು ಕೋರ್ಟ್ ಸೂಚಿಸಿದೆ.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ತಿದ್ದುಪಡಿ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ವಾದ ಮಂಡಿಸಿದರೂ, ನ್ಯಾಯಾಲಯ ಅದನ್ನು ಅಂಗೀಕರಿಸಲಿಲ್ಲ. ಇದರಿಂದ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾಗಿದೆ.

ಇದೀಗ ತೀರ್ಪಿನ ಪ್ರಕಾರ, ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯ ನಿರ್ಣಯ ಮಂಡಳಿ (ಕೆಎಸ್‌ಇಎಬಿ) ಫಲಿತಾಂಶ ಪ್ರಕಟಿಸಬೇಕಿದೆ. ಏಪ್ರಿಲ್ 24ರಂದು ಫಲಿತಾಂಶ ಪ್ರಕಟಿಸುವ ಯೋಜನೆ ಇದ್ದು, ಪ್ರಕರಣ ಇತ್ಯರ್ಥಗೊಂಡಿರುವುದರಿಂದ ಶೀಘ್ರದಲ್ಲೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು, ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಉತ್ತರ ಪತ್ರಿಕೆಗಳಿಗೆ ಮೌಲ್ಯಮಾಪಕರು ಅಂಕಗಳನ್ನೇ ನಮೂದಿಸಿದ್ದಾರೆ.

ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಒಟ್ಟು 8.30 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಇವರಲ್ಲಿ 4.25 ಲಕ್ಷ ಬಾಲಕರು ಮತ್ತು 4.05 ಲಕ್ಷ ಬಾಲಕಿಯರು ಸೇರಿದ್ದಾರೆ.

ಭ್ರಷ್ಟರ ಬೇಟೆ

Recent Posts

₹30 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…

19 minutes ago

ಬರದ ಸಂಕಷ್ಟಕ್ಕೆ ರೈತರಿಗೆ ₹2,500 ನೆರವು?; ಕೃಷಿ ಪಂಪ್‌ಸೆಟ್‌ ವಿದ್ಯುತ್‌ ಪೂರೈಕೆಯಲ್ಲೂ ಕಡಿತ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…

15 hours ago

ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ 24 ಕಬ್ಬಿಣದ ಗೇಟು ಕಳವು; ₹2.40 ಲಕ್ಷ ನಷ್ಟ

ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…

20 hours ago

ಮದ್ದೂರಿನಲ್ಲಿ ನಿವೃತ್ತ BCM ಹಾಸ್ಟೆಲ್ ವಾರ್ಡನ್ ಮನೆ ಮೇಲೆ ಲೋಕಾಯುಕ್ತ ದಾಳಿ: ಮಿನಿ ಬಾರ್, ಚಿನ್ನಾಭರಣ ಹಾಗೂ ಹಾಸ್ಟೆಲ್ ಸಾಮಗ್ರಿಗಳ ರಾಶಿ ಪತ್ತೆ

ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…

2 days ago

ಸಿಂಧನೂರಿನಲ್ಲಿ ಮಗುವಿನ ಎದುರೇ ತಾಯಿ ಬರ್ಬರ ಹತ್ಯೆ ಪ್ರಕರಣ: ಪ್ರಿಯಕರ ಶುಭಮ್ ಬಂಧನ, ಪತಿಯ ವಿಚಾರಣೆ

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಹೊರವಲಯದಲ್ಲಿ ಒಂದೂವರೆ ವರ್ಷದ ಕಂದಮ್ಮನ ಎದುರೇ 26 ವರ್ಷದ ಗೃಹಿಣಿ ಸ್ನೇಹಾ ಎಂಬಾಕೆಯ ಬರ್ಬರ…

2 days ago

ಬಿಹಾರದಲ್ಲಿ ಬೆಚ್ಚಿಬೀಳಿಸುವ ಕೃತ್ಯ: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ಬಂಧನ, ಪೋಕ್ಸೊ ಕೇಸ್ ದಾಖಲು

ಬಿಹಾರದ ನವಾಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಮುಖ್ಯಶಿಕ್ಷಕನೊಬ್ಬ 8ನೇ ತರಗತಿಯ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ…

2 days ago