ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ನೀಡಿದ ಶಿಕ್ಷೆ ವಿವಾದಕ್ಕೆ ಕಾರಣವಾಗಿದೆ. ತಮ್ಮ ಸೂಚನೆಗಳನ್ನು ಪಾಲಿಸಿಲ್ಲ ಎಂಬ ಕಾರಣಕ್ಕೆ ಠಾಣೆಯ ಸಿಬ್ಬಂದಿಯನ್ನು ಸುಮಾರು ಮೂರು ಗಂಟೆಗಳ ಕಾಲ ಉರಿಬಿಸಿಲಿನಲ್ಲಿ ನಿಲ್ಲಿಸಿ ದಂಡಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ತನಿಖೆಗೆ ಆದೇಶಿಸಿದ್ದಾರೆ. ಡಿವೈಎಸ್ಪಿ ಗಿರೀಶ್ ಗೌಡ ಅವರಿಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ. ಘಟನೆಯಲ್ಲಿ ಎಎಸ್‌ಐ ಸೇರಿ 16 ಮಂದಿ ಪುರುಷ ಸಿಬ್ಬಂದಿ ಹಾಗೂ ನಾಲ್ವರು ಮಹಿಳಾ ಸಿಬ್ಬಂದಿಯನ್ನು ಬಿಸಿಲಿನಲ್ಲಿ ನಿಲ್ಲಿಸಲಾಗಿದೆ ಎನ್ನಲಾಗಿದೆ.
ಬಿಸಿಲಿನ ತೀವ್ರತೆಯಿಂದ ಕೆಲ ಸಿಬ್ಬಂದಿ ಅಸ್ವಸ್ಥರಾಗಿದ್ದು, ಕೆಲವರು ಚಿಕಿತ್ಸೆ ಪಡೆಯಬೇಕಾದ ಪರಿಸ್ಥಿತಿ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.
ಈ ನಡುವೆ, ಆರೋಪ ಎದುರಿಸುತ್ತಿರುವ ಪಿಎಸ್‌ಐ ಕೆ. ನೇತ್ರಾವತಿ ಅವರನ್ನು ತಕ್ಷಣದಿಂದಲೇ ಜಿಲ್ಲಾ ಕಂಟ್ರೋಲ್ ರೂಂಗೆ ವರ್ಗಾವಣೆ ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಅವರು ಅಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದರ ವಿರುದ್ಧವಾಗಿ, ಪಿಎಸ್‌ಐ ಅವರನ್ನು ಅಮಾನತುಗೊಳಿಸಬೇಕು ಎಂದು ಕರುನಾಡ ವಿಜಯಸೇನೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಈ ಕುರಿತು ಅವರು ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪೊಲೀಸ್ ಇಲಾಖೆಯ ಶಿಸ್ತು ಮತ್ತು ಜವಾಬ್ದಾರಿತನದ ಬಗ್ಗೆ ಕಠಿಣ ಸಂದೇಶ ನೀಡಿದ್ದಾರೆ. “ಪೊಲೀಸರು ಜನಸ್ನೇಹಿಯಾಗಿ ನಡೆದುಕೊಳ್ಳಬೇಕು. ಸಾರ್ವಜನಿಕರೊಂದಿಗೆ ಗೌರವಪೂರ್ಣವಾಗಿ ವರ್ತಿಸುವುದು ಮುಖ್ಯ. ಯಾವುದೇ ಪೊಲೀಸ್ ಅಧಿಕಾರಿಯೂ ರಿಯಲ್ ಎಸ್ಟೇಟ್ ವ್ಯವಹಾರಗಳಲ್ಲಿ ತೊಡಗಿಕೊಳ್ಳಬಾರದು. ಠಾಣೆಗಳಲ್ಲಿ ರಾಜಿ ಪಂಚಾಯಿತಿಗೆ ಅವಕಾಶ ಇರಬಾರದು,” ಎಂದು ಎಚ್ಚರಿಕೆ ನೀಡಿದರು.
ಪೊಲೀಸ್ ಇಲಾಖೆ ಶೋಷಿತರಿಗೆ ನ್ಯಾಯ ಒದಗಿಸುವ ಮಹತ್ವದ ವ್ಯವಸ್ಥೆಯಾಗಿದ್ದು, ಅದರ ಮಾನವನ್ನು ಕಾಪಾಡುವ ಹೊಣೆಗಾರಿಕೆ ಪ್ರತಿಯೊಬ್ಬ ಅಧಿಕಾರಿಯ ಮೇಲೂ ಇದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರು: ಮದುವೆಯ ಭರವಸೆ ನೀಡಿ ವಂಚನೆ, ಖಾಸಗಿ ಫೋಟೋಗಳನ್ನು ಮುಂದಿಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ₹9 ಲಕ್ಷ ಹಣ ಪಡೆದ ಆರೋಪದ…
ಬೆಂಗಳೂರು: ಜಿಬಿಎ ನೋಟಿಸ್ ಬೆನ್ನಲ್ಲೇ ಬಯಲಾಯ್ತು ಕೊಲೆ ರಹಸ್ಯ; ಪತ್ನಿಯನ್ನೇ ಕೊಂದು ಶವ ಎಸೆದಿದ್ದ ಪತಿ ಬಂಧನ ಖಾಲಿ ಸೈಟ್‌ಗಳಲ್ಲಿ…
ಮಧುಗಿರಿ: ಪೌತಿ ಖಾತೆ ಮಾಡಿಕೊಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ, ಎರಡನೇ ಕಂತಿನ ₹30 ಸಾವಿರ…
ಬೆಂಗಳೂರು: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ತಾತ್ಕಾಲಿಕ ಆರ್ಥಿಕ ನೆರವು ನೀಡಲು ರಾಜ್ಯ ಸರ್ಕಾರ…
ಶಿರಸಿ: ತಾಲೂಕಿನ ಬನವಾಸಿ ಹೋಬಳಿಯ ಉಂಚಳ್ಳಿ ಗ್ರಾಮದ ಅರ್ಲಹೊಂಡ ಸೇತುವೆ ಕಮ್ ಬಾಂದಾರದಲ್ಲಿ ದಾಸ್ತಾನು ಮಾಡಲಾಗಿದ್ದ ಸಣ್ಣ ನೀರಾವರಿ ಇಲಾಖೆಗೆ…
ಮಂಡ್ಯ: ಮದ್ದೂರಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ (BCM) ನಿವೃತ್ತ ಹಾಸ್ಟೆಲ್ ಸೂಪರಿಂಟೆಂಡೆಂಟ್ ಶಿವರಾಜು ಅವರ ಮನೆ ಮತ್ತು ಫಾರ್ಮ್‌ಹೌಸ್…